ಇಂದು ಅಗ್ಗದ ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!
ರಿಯಲ್ ಮಿ ಮೊಬೈಲ್ ಸಂಸ್ಥೆಯ ಬಹುನಿರೀಕ್ಷಿತ ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 5) ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 8,999ರೂ. ಆಗಿದೆ.

ಹೌದು, ರಿಯಲ್ ಮಿ ಕಂಪನಿಯ ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ವಾಟರ್ ಡ್ರಾಪ್ ಸ್ಟೈಲ್ ಮಾದರಿಯ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದ್ದು, 570 nits ಬ್ರೈಟ್ನೆಸ್ ಪಡೆದಿದೆ.

ಪ್ರೊಸೆಸರ್ ಬಲ
ನಾರ್ಜೊ 30A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 3GB RAM + 32GB ಮತ್ತು 4GB RAM + 64GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ
ನಾರ್ಜೊ 30A ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ನಾರ್ಜೊ 30A ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಹಾಗೆಯೇ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ.

ಬೆಲೆ ಮತ್ತು ಲಭ್ಯತೆ
ನಾರ್ಜೊ 30A ಸ್ಮಾರ್ಟ್‌ಫೋನ್ 3GB RAM + 32GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ ಬೆಲೆ 8,999 ರೂ. ಹಾಗೂ 4GB RAM + 64GB ಸ್ಟೋರೇಜ್ ಆಯ್ಕೆಯ ಬೆಲೆ 9,999ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಮಾರ್ಚ್ 5 ರಂದು (ಇಂದು) ಇ-ಕಾಮರ್ಸ್ ಮೂಲಕ ಫಸ್ಟ್ ಸೇಲ್ ನಡೆಯಲಿದೆ.


Click it and Unblock the Notifications








