ರಿಯಲ್‌ಮಿ ನಾರ್ಜೊ 50 ಫೋನ್ ಈಗ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯ!
ಜನಪ್ರಿಯ ರಿಯಲ್‌ಮಿ ಮೊಬೈಲ್ ಸಂಸ್ಥೆಯು ನಾರ್ಜೊ ಸರಣಿಯಲ್ಲಿ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ರಿಯಲ್‌ಮಿ ನಾರ್ಜೊ ಸರಣಿಯ ಪೈಕಿ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ಡಿಸ್ಕೌಂಟ್ ಆಗಿದ್ದು, ಗ್ರಾಹಕರು ಅಚ್ಚರಿಯಿಂದ ನೋಡುವಂತೆ ಆಗಿದೆ.
ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 4 GB + 64 GB ವೇರಿಯಂಟ್ ಆಯ್ಕೆ ಪಡೆದಿದೆ. ಈ ಫೋನ್ 15,999ರೂ. ಬೆಲೆ ಹೊಂದಿದ್ದು, ಕೊಡುಗೆಯಲ್ಲಿ 12,999ರೂ. ಗಳ ಪ್ರೈಸ್‌ಟ್ಯಾಗ್ ನಲ್ಲಿ ಕಾಣಿಸಿಕೊಂಡಿದೆ.

ಈ ಫೋನ್ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 50 ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ 50 : ಡಿಸ್‌ಪ್ಲೇ ರಚನೆ
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಮತ್ತು 600 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 50 : ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ರಿಯಲ್‌ಮಿ UI 2.0 ಜೊತೆಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ ವರ್ಚುವಲ್ ಮೆಮೊರಿಯಾಗಿ ಬಳಸಿಕೊಳ್ಳುವ ಮೂಲಕ ಲಭ್ಯವಿರುವ ಮೆಮೊರಿಯನ್ನು 11 GB ವರೆಗೆ ವಿಸ್ತರಿಸಲು ಡೈನಾಮಿಕ್ RAM ವಿಸ್ತರಣೆ ವೈಶಿಷ್ಟ್ಯವನ್ನು ಸಹ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ರಿಯಲ್‌ಮಿ ನಾರ್ಜೊ 50 : ಟ್ರಿಪಲ್ ಕ್ಯಾಮೆರಾ
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ರಿಯಲ್‌ಮಿ ನಾರ್ಜೊ 50 : ಬ್ಯಾಟರಿ
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್ಡಾರ್ಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ ಮತ್ತು GPS ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50 : ಬೆಲೆ ಮತ್ತು ಕಲರ್
ಭಾರತದಲ್ಲಿ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4 GB RAM + 64GB ಸ್ಟೋರೇಜ್ ಮಾದರಿಗೆ 12,999ರೂ. ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಪೀಡ್ ಬ್ಲ್ಯಾಕ್ ಮತ್ತು ಸ್ಪೀಡ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.


Click it and Unblock the Notifications








