ಇಂದು ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಫಸ್ಟ್ ಸೇಲ್!..ಬೆಲೆ ಎಷ್ಟು?
ರಿಯಲ್‌ಮಿ ಮೊಬೈಲ್ ಸಂಸ್ಥೆಯ ತನ್ನ ಬಹುನಿರೀಕ್ಷಿತ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಆಗಿ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 3) ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಮೊದಲ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 12,999ರೂ. ಆಗಿದೆ.

ಹೌದು, ರಿಯಲ್ ಮಿ ಕಂಪನಿಯ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನಿನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೊ G96 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಮತ್ತು 600 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ ಎಷ್ಟು?
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ರಿಯಲ್‌ಮಿ UI 2.0 ಜೊತೆಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6 GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ ವರ್ಚುವಲ್ ಮೆಮೊರಿಯಾಗಿ ಬಳಸಿಕೊಳ್ಳುವ ಮೂಲಕ ಲಭ್ಯವಿರುವ ಮೆಮೊರಿಯನ್ನು 11 GB ವರೆಗೆ ವಿಸ್ತರಿಸಲು ಡೈನಾಮಿಕ್ RAM ವಿಸ್ತರಣೆ ವೈಶಿಷ್ಟ್ಯವನ್ನು ಸಹ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಟ್ರಿಪಲ್ ಕ್ಯಾಮೆರಾ ವಿಶೇಷತೆ
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್ಡಾರ್ಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ ಮತ್ತು GPS ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 4 GB RAM + 64GB ಸ್ಟೋರೇಜ್ ಮಾದರಿಗೆ 12,999ರೂ. ಬೆಲೆ ಹೊಂದಿದೆ. ಆದರೆ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 15,499ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ಪೀಡ್ ಬ್ಲ್ಯಾಕ್ ಮತ್ತು ಸ್ಪೀಡ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಈ ಫೋನ್ ಅನ್ನು ಅಮೆಜಾನ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್ ಸ್ಟೋರ್‌ನಲ್ಲಿ ಖರೀದಿಸಬಹುದಾಗಿದೆ. ಇಂದು (ಮಾರ್ಚ್ 3) ರಿಂದ ಮಧ್ಯಾಹ್ನ 12 ಗಂಟೆಗೆ ಮಾರಾಟಕ್ಕೆ ಬರಲಿದೆ.


Click it and Unblock the Notifications








