Home
ಸುದ್ದಿಜಾಲ

ಭಾರತಕ್ಕೆ ಎಂಟ್ರಿ ಕೊಟ್ಟ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌! ಬೆಲೆ ಎಷ್ಟು?

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿಯ ಫೋನ್‌ಗಳು ವಿಶೇಷ ಸ್ಥಾನವನ್ನು ಪಡೆದುಕೊಂಡಿವೆ. ತನ್ನ ಆಕರ್ಷಕ ಡಿಸ್‌ಪ್ಲೇ ವಿನ್ಯಾಸ ಮತ್ತು ಕ್ಯಾಮೆರಾ ಫೀಚರ್ಸ್‌ಗಳಿಂದಾಗಿ ರಿಯಲ್‌ಮಿ ಫೋನ್‌ಗಳು ಪ್ರಸಿದ್ಧಿಯನ್ನು ಪಡೆದುಕೊಂಡಿವೆ. ರಿಯಲ್‌ಮಿ ಕಂಪೆನಿ ಈಗಾಗಲೇ ಮಿಡ್‌ ರೇಂಜ್‌ ಹಾಗೂ ಬಜೆಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಮತ್ತು 600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಸೂಪರ್‌ಡಾರ್ಟ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಮತ್ತು 600 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ರಿಯಲ್‌ಮಿ UI 2.0 ಜೊತೆಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ ವರ್ಚುವಲ್ ಮೆಮೊರಿಯಾಗಿ ಬಳಸಿಕೊಳ್ಳುವ ಮೂಲಕ ಲಭ್ಯವಿರುವ ಮೆಮೊರಿಯನ್ನು 11GB ವರೆಗೆ ವಿಸ್ತರಿಸಲು ಡೈನಾಮಿಕ್ RAM ವಿಸ್ತರಣೆ ವೈಶಿಷ್ಟ್ಯವನ್ನು ಸಹ ಒಳಗೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್ಡಾರ್ಟ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ ಮತ್ತು GPS ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ ನಾರ್ಜೊ 50 ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ಮಾದರಿಗೆ 12,999ರೂ.ಬೆಲೆ ಹೊಂದಿದೆ. ಆದರೆ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 15,499ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಪೀಡ್ ಬ್ಲ್ಯಾಕ್ ಮತ್ತು ಸ್ಪೀಡ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಈ ಫೋನ್‌ ಅನ್ನು ಅಮೆಜಾನ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್‌ ಸ್ಟೋರ್‌ನಲ್ಲಿ ಖರೀದಿಸಬಹುದಾಗಿದೆ. ಇದು ಇದೇ ಮಾರ್ಚ್ 3ರಿಂದ ಮಧ್ಯಾಹ್ನ 12 ಗಂಟೆಗೆ ಮಾರಾಟಕ್ಕೆ ಬರಲಿದೆ.

Best Mobiles in India

English summary
Realme Narzo 50 With 5,000mAh battery Launched in India: Price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+