ಭಾರತದಲ್ಲಿ ರಿಯಲ್‌ಮಿ ನಾರ್ಜೊ 50A ಮತ್ತು ನಾರ್ಜೊ 50i ಬಿಡುಗಡೆ! ವಿಶೇಷತೆ ಏನು?
ರಿಯಲ್‌ಮಿ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಹಲವು ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ ನಾರ್ಜೊ 50A ಮತ್ತು ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದರಲ್ಲಿ ರಿಯಲ್‌ಮಿ ನಾರ್ಜೊ 50A ಹೆಚ್ಚು ಪ್ರೀಮಿಯಂ ಮಾದರಿಯಾಗಿದೆ. ಇದು 6,000mAh ಬ್ಯಾಟರಿಯನ್ನು ಹೊಂದಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸದಾಗಿ ಎರಡು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ರಿಯಲ್‌ಮಿ ನಾರ್ಜೊ 50A ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ ಯುನಿಸೋಕ್ 9863 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್ ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ 50A
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11. ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 53 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.

ರಿಯಲ್‌ಮಿ ನಾರ್ಜೊ 50i
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಫೋನ್ 8 ಮೆಗಾಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಹೊಂದಿರಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 64GB ಸ್ಟೋರೇಜ್ ಆಯ್ಕೆಗೆ 11,499ರೂ.ಬೆಲೆ ಹೊಂದಿದೆ. ಇನ್ನು 4GB RAM + 128GB ಸ್ಟೋರೇಜ್ ಆಯ್ಕೆಗೆ 12,499ರೂ ಬೆಲೆ ಹೊಂದಿದೆ. ಇದು ಆಕ್ಸಿಜನ್ ಬ್ಲೂ ಮತ್ತು ಆಕ್ಸಿಜನ್ ಗ್ರೀನ್ ಕಲರ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ.
ಇನ್ನು ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 2GB RAM + 32GB ಸ್ಟೋರೇಜ್ ಆಯ್ಕೆಗೆ 7,499ರೂ ಬೆಲೆಯನ್ನು ಹೊಂದಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ಆಯ್ಕೆಗೆ 8,499ರೂ.ಬೆಲೆ ಹೊಂದಿದೆ. ಇದು ಮಿಂಟ್ ಗ್ರೀನ್ ಕಾರ್ಬನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ.
ಈ ಎರಡೂ ಫೋನ್‌ಗಳು ಅಕ್ಟೋಬರ್ 7 ರಿಂದ ಮಧ್ಯರಾತ್ರಿ 12 ಗಂಟೆಗೆ (ಮಧ್ಯರಾತ್ರಿ) Realme.com, Flipkart ನಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








