ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌!

|

ರಿಯಲ್‌ಮಿ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಬಹುನಿರೀಕ್ಷಿತ ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯಲ್‌ಮಿ ನಾರ್ಜೊ 50 ಸರಣಿಯ ಮತ್ತೊಂದು ಆಯ್ಕೆಯಾಗಿದೆ. ಇದು ನಾರ್ಜೊ 50Aಗೆ ಹೋಲಿಸಿದರೆ ನೀವು ಉತ್ತಮ-ನಿರ್ದಿಷ್ಟ ಪ್ರದರ್ಶನ, ವೇಗದ ಪ್ರೊಸೆಸರ್ ಮತ್ತು ಕ್ಯಾಮೆರಾಗಳಲ್ಲಿ ಕೆಲವು ಅಪ್ಡೇಟ್‌ಗಳನ್ನು ನಿರೀಕ್ಷಿಸಬಹುದು.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಪ್ಲಾನ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ರಿಯಲ್‌ಮಿ ನಾರ್ಜೊ 50Aಗಿಂತ ಅಪ್ಡೇಟ್‌ ಫೀಚರ್ಸ್‌ ಹೊಂದಿರುವ ಸಾದ್ಯತೆ ಇದೆ. ಆದರೆ ಈ ಸ್ಮಾರ್ಟ್‌ಫೋನ್‌ ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎನ್ನಲಾಗಿದೆ. ಸದ್ಯ ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G88 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ 720 x 1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 264 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿರುವ ಸಾಧ್ಯತೆ ಇದೆ. ಜೊತೆಗೆ ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್‌ ವಿನ್ಯಾಶವನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 20:09 ರಚನೆಯ ಅನುಪಾತವನ್ನು ಹೊಂದಿದೆ. ಇದು ಮಲ್ಟಿ ಟಚ್‌ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್ ಅನ್ನು ಒಳಗೊಂಡಿರುವ ಸಾದ್ಯತೆ ಇದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ ಜಿ90 ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆ ಇದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರುವ ಸಾದ್ಯತೆ ಇದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16MP ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಸಾದ್ಯತೆ ಇದೆ. ಇದು ಕ್ವಿಕ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಯಾವಾಗ ಬಿಡುಗಡೆ ಆಗಲಿದೆ, ಇದರ ಬೆಲೆ ಎಷ್ಟು ಎಂಬುದರ ಬಗ್ಗೆ ಇನ್ನು ಕೂಡ ಯಾವುದೇ ಮಾಹಿತಿ ಲಭ್ಯವಿಲ್ಲ.

Best Mobiles in India

English summary
Realme may be working on a fifth Narzo 50-series phone and it may be known as Narzo 50A Prime.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X