Home
ಸುದ್ದಿಜಾಲ

ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್‌!

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಆಕ್ಟಾ-ಕೋರ್ ಯೂನಿಸೋಕ್‌ T612 ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ.

ರಿಯಲ್‌ಮಿ ನಾರ್ಜೊ 50A

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ.ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ 2,408x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ 12nm ಆಕ್ಟಾ-ಕೋರ್ ಯೂನಿಸೋಕ್‌ T612 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ VGA B&W ಪೊಟ್ರೆಟ್‌ ಸೇನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊಸ್ಕೋಪ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB + 64GB ಸ್ಟೋರೇಜ್ ಮಾದರಿಗೆ 11,499ರೂ.ಆಗಿದೆ. ಆದರೆ 4GB + 128GB ರೂಪಾಂತರದ ಬೆಲೆ 12,499ರೂ. ಆಗಿದೆ. ಇನ್ನು ಈ ಫೋನ್‌ ಫ್ಲ್ಯಾಶ್ ಬ್ಲ್ಯಾಕ್ ಮತ್ತು ಫ್ಲ್ಯಾಶ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಅಮೆಜಾನ್ ಮತ್ತು ರಿಯಲ್‌ಮಿ ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್ ಸ್ಟೋರ್‌ಗಳ ಮೂಲಕ ಇದೇ ಏಪ್ರಿಲ್ 28 ರಿಂದ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Realme Narzo 50A Prime is powered by a Unisoc T612 SoC
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+