Home
ಸುದ್ದಿಜಾಲ

ನೀವು 8000ರೂ. ಒಳಗೆ ಈ ಬೊಂಬಾಟ್‌ ಫೋನ್‌ ಖರೀದಿಸಬಹುದು!

ಭಾರತೀಯ ಫೋನ್‌ ಮಾರುಕಟ್ಟೆಯಲ್ಲಿ ರಿಯಲ್‌ಮಿ ಸಂಸ್ಥೆಯು ನಾರ್ಜೊ ಸರಣಿಯಲ್ಲಿ ಹಲವು ಬಜೆಟ್‌ ಮೊಬೈಲ್‌ಗಳನ್ನು ಲಾಂಚ್ ಮಾಡಿದೆ. ಆ ಪೈಕಿ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ ಒಂದಾಗಿದ್ದು, ಇದು ಬೆಲೆ ಮತ್ತು ಆಕರ್ಷಕ ಲುಕ್‌ನಿಂದ ಗಮನ ಸೆಳೆದಿದೆ. ಆದ್ರೆ, ಈಗ ಭರ್ಜರಿ ರಿಯಾಯಿತಿ ಪಡೆದಿದ್ದು, ಮತ್ತಷ್ಟು ಗ್ರಾಹಕರನ್ನು ತನ್ನ ಕಡೆ ಆಕರ್ಷಿಸಿದೆ.

ಹೌದು, ಇ ಕಾಮರ್ಸ್ ದೈತ್ಯ ಅಮೆಜಾನ್‌ ತಾಣದಲ್ಲಿ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ ಶೇ. 25% ರಷ್ಟು ರಿಯಾಯಿತಿ ಪಡೆದಿದೆ. ಈ ಮೊಬೈಲ್‌ನ 4GB + 64 GB ಸ್ಟೋರೇಜ್ ವೇರಿಯಂಟ್‌ ಬೆಲೆಯು 9,999ರೂ. ಆಗಿದ್ದು, ಕೊಡುಗೆಯಿಂದಾಗಿ ಗ್ರಾಹಕರು 7,499ರೂ. ಗಳ ಬೆಲೆಯಲ್ಲಿ ನಲ್ಲಿ ಖರೀದಿ ಮಾಡಬಹುದಾಗಿದೆ.

ನೀವು 8000ರೂ. ಒಳಗೆ ಈ ಬೊಂಬಾಟ್‌ ಫೋನ್‌ ಖರೀದಿಸಬಹುದು!

ಇನ್ನು ಈ ಎಂಟ್ರಿ ಲೆವೆಲ್‌ ಮಾದರಿಯ ಫೋನ್‌ ಯುನಿಸೋಕ್ 9863 SoC ಪ್ರೊಸೆಸರ್‌ ಬಲ ಪಡೆದಿದ್ದು, ಹಿಂಬದಿಯಲ್ಲಿ ರಿಯರ್‌ ಸಿಂಗಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಜೊತೆಗೆ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ ವಿವರ : ರಿಯಲ್‌ಮಿ ನಾರ್ಜೊ 50i ಮೊಬೈಲ್‌ 6.5 ಇಂಚಿನ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯ ಅನ್ನು ಪಡೆದಿದೆ. ಇದರ ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಅನ್ನು 1TB ವರೆಗೂ ಸಹ ವಿಸ್ತರಿಸುವ ಆಯ್ಕೆ ನೀಡಿದೆ. ಅಲ್ಲದೇ ಗೇಮಿಂಗ್ ಹಾಗೂ ಮಲ್ಟಿ ಟಾಸ್ಕಿಂಗ್ ಕೆಲಸಗಳಿಗೆ ಈ ಪ್ರೊಸೆಸರ್ ಸಪೋರ್ಟ್‌ ಆಗಿದೆ.

ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಕ್ಯಾಮೆರಾ ಮತ್ತು ಬ್ಯಾಟರಿ ವಿವರ : ಈ ಮೊಬೈಲ್‌ ಹಿಂಬದಿಯಲ್ಲಿ ಸಿಂಗಲ್ ಕ್ಯಾಮೆರಾ ಸೆಟ್‌ಅಪ್‌ ನೀಡಲಾಗಿದ್ದು, ಅದು 8 ಮೆಗಾ ಪಿಕ್ಸೆಲ್ AI ಸೆನ್ಸಾರ್ ಅನ್ನು ಒಳಗೊಂಡಿದೆ. ಅಲ್ಲದೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾ ಅನ್ನು ಒದಗಿಸಲಾಗಿದೆ.

ಇದರ ಜೊತೆಗೆ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಒದಗಿಸಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡಾ ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೆಮೊರಿ ಮತ್ತು ಕಲರ್‌ ಆಯ್ಕೆ ವಿವರ : ರಿಯಲ್‌ಮಿ ನಾರ್ಜೊ 50i ಪ್ರೈಮ್‌ ಮೊಬೈಲ್‌ ಫೋನ್‌ ಎರಡು ವೇರಿಯಂಟ್‌ ಆಯ್ಕೆ ಪಡೆದಿದೆ. ಅವುಗಳು ಕ್ರಮವಾಗಿ 3 GB RAM + 32GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಮತ್ತು 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಆಗವೆ. ಇನ್ನು ಈ ಮೊಬೈಲ್‌ ಫೋನ್‌ ಮಿಂಟ್ ಗ್ರೀನ್ ಕಾರ್ಬನ್ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ ಇದೆ.

Best Mobiles in India

English summary
realme narzo 50i Prime price slash on amazon website. offer price and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+