ಅಗ್ಗದ ಬೆಲೆಯ 'ರಿಯಲ್‌ಮಿ ನಾರ್ಜೊ 50i' ಫೋನ್‌ಗೆ ಈಗ ಬೊಂಬಾಟ್ ರಿಯಾಯಿತಿ!
ಜನಪ್ರಿಯ ರಿಯಲ್‌ಮಿ ಮೊಬೈಲ್ ಸಂಸ್ಥೆಯು ನಾರ್ಜೊ ಸರಣಿಯಲ್ಲಿ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ರಿಯಲ್‌ಮಿ ನಾರ್ಜೊ ಸರಣಿಯ ಪೈಕಿ ರಿಯಲ್‌ಮಿ ನಾರ್ಜೊ 50i ಪ್ರೈಮ್ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ರಿಯಾಯಿತಿ ಲಭ್ಯ ಇದ್ದು,, ಗ್ರಾಹಕರು ಖುಷಿಯಿಂದ ನೋಡುವಂತೆ ಆಗಿದೆ.
ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ರಿಯಲ್‌ಮಿ ನಾರ್ಜೊ 50i ಪ್ರೈಮ್ ಸ್ಮಾರ್ಟ್‌ಫೋನ್ 25% ರಷ್ಟು ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 4 GB + 64 GB ಸ್ಟೋರೇಜ್ ವೇರಿಯಂಟ್ 9,999ರೂ. ಬೆಲೆ ಪಡೆದಿದ್ದು, ಡಿಸ್ಕೌಂಟ್ ನಿಂದಾಗಿ 7,499ರೂ. ಗಳ ಪ್ರೈಸ್‌ಟ್ಯಾಗ್ ನಲ್ಲಿ ಖರೀದಿಸಬಹುದಾಗಿದೆ.

ಈ ಫೋನ್ ಯುನಿಸೋಕ್ 9863 SoC ಪ್ರೊಸೆಸರ್ ಹೊಂದಿದ್ದು, ಹಿಂಬದಿಯಲ್ಲಿ ರಿಯರ್ ಸಿಂಗಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅದು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನು ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 50i ಪ್ರೈಮ್ ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ 50i ಪ್ರೈಮ್ ಡಿಸ್‌ಪ್ಲೇ ಮತ್ತು ಪ್ರೊಸೆಸರ್ : ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 64 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 1TB ವರೆಗೂ ಸಹ ವಿಸ್ತರಿಸಬಹುದು. ಗೇಮಿಂಗ್ ಹಾಗೂ ಮಲ್ಟಿ ಟಾಸ್ಕಿಂಗ್ ಕೆಲಸಗಳಿಗೆ ಈ ಪ್ರೊಸೆಸರ್ ಪೂರಕವಾಗಿದೆ.
ರಿಯಲ್‌ಮಿ ನಾರ್ಜೊ 50i ಪ್ರೈಮ್ ಕ್ಯಾಮೆರಾ ಮತ್ತು ಬ್ಯಾಟರಿ : ಈ ಫೋನ್ ಹಿಂಬದಿಯಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಪಡೆದಿದ್ದು, ಅದು 8 ಮೆಗಾ ಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ಅಲ್ಲದೆ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಹೊಂದಿರಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಹ ಹೊಂದಿದೆ.
ರಿಯಲ್‌ಮಿ ನಾರ್ಜೊ 50i ಪ್ರೈಮ್ ಸ್ಮಾರ್ಟ್‌ಫೋನ್ 3 GB RAM + 32GB ಸ್ಟೋರೇಜ್ ಆಯ್ಕೆ ಮತ್ತು 4GB RAM + 64GB ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಮಿಂಟ್ ಗ್ರೀನ್ ಕಾರ್ಬನ್ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.
ರಿಯಲ್‌ಮಿ ನಾರ್ಜೊ 50A ಫೀಚರ್ಸ್ : ಈ ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದ್ದು, ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000 mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 53 ದಿನಗಳ ಸ್ಟ್ಯಾಂಡ್‌ಬೈ ಟೈಂ ಒದಗಿಸಲಿದೆ.


Click it and Unblock the Notifications








