ಕಡಿಮೆ ದರದ ಈ ಮೊಬೈಲ್‌ಗೆ ಸಖತ್ ಆಫರ್!..ಉಳಿತಾಯ ಪಕ್ಕಾ?
ಅಗ್ಗದ ವಿಭಾಗದ ಮಾದರಿಯಲ್ಲಿ ಗುರುತಿಸಿಕೊಂಡಿರುವ ರಿಯಲ್‌ಮಿ ನಾರ್ಜೊ 50i ಪ್ರೈಮ್ ಫೋನಿನ ಕೆಲವು ಫೀಚರ್ಸ್ ಆಕರ್ಷಕ ಎನಿಸಿವೆ. ಈ ಸ್ಮಾರ್ಟ್‌ಫೋನ್ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಪಡೆದಿದ್ದು, ಗ್ರಾಹಕರು ಸಂತಸದಿಂದ ಖರೀದಿ ಮಾಡುವಂತಾಗಿದೆ.
ಹೌದು, ಜನಪ್ರಿಯ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೊ 50i ಪ್ರೈಮ್ ಫೋನ್ ಇದೀಗ ಶೇ. 18% ರಷ್ಟು ನೇರ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಗ್ರಾಹಕರು ಈ ಫೋನಿನ 4GB RAM + 64 GB ವೇರಿಯಂಟ್ ಅನ್ನು 8,990 ರೂ. ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರೊಂದಿಗೆ ಹೆಚ್ಚುವರಿಯಾಗಿ ಅಮೆಜಾನ್ ನಲ್ಲಿ ಬ್ಯಾಂಕ್ ಡಿಸ್ಕೌಂಟ್ ಸಹ ಗ್ರಾಹಕರಿಗೆ ಲಭ್ಯವಾಗಲಿವೆ.

ಇನ್ನು ಈ ಎಂಟ್ರಿ ಲೆವೆಲ್ ಮೊಬೈಲ್ ಯುನಿಸೋಕ್ 9863 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ರಿಯರ್ ಸಿಂಗಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಕ್‌ಅಪ್ ಬ್ಯಾಕ್‌ಅಪ್ ಸಹ ಪಡೆದಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 50i ಪ್ರೈಮ್ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ 50i ಪ್ರೈಮ್ - ಫೀಚರ್ಸ್ ಹೀಗಿವೆ
ರಿಯಲ್‌ಮಿ ನಾರ್ಜೊ 50i ಪ್ರೈಮ್ ಫೋನ್ 6.5 ಇಂಚಿನ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸುತ್ತದೆ.
ರಿಯಲ್‌ಮಿ ನಾರ್ಜೊ 50i ಪ್ರೈಮ್ ಫೋನ್ 4GB RAM ಮತ್ತು 64 GB ಆಂತರೀಕ ಸ್ಟೋರೇಜ್ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ಅನ್ನು 1 TB ವರೆಗೂ ಸಹ ವಿಸ್ತರಿಸುವ ಸೌಲಭ್ಯ ಸಹ ಪಡೆದಿದೆ. ಅಲ್ಲದೇ ಗೇಮಿಂಗ್ ಹಾಗೂ ಮಲ್ಟಿ ಟಾಸ್ಕಿಂಗ್ ಕೆಲಸಗಳಿಗೆ ಈ ಪ್ರೊಸೆಸರ್ ಸಪೋರ್ಟ್ ಆಗಿದೆ.
ರಿಯಲ್‌ಮಿ ನಾರ್ಜೊ 50i ಪ್ರೈಮ್ ಫೋನ್ ಹಿಂಬದಿಯಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಇದ್ದು, ಅದು 8 ಮೆಗಾ ಪಿಕ್ಸೆಲ್ AI ಸೆನ್ಸಾರ್ ಸೌಲಭ್ಯ ಒಳಗೊಂಡಿದೆ. ಹಾಗೆಯೇ ಫೋನ್ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾ ಅನ್ನು ಒದಗಿಸಲಾಗಿದೆ.
ರಿಯಲ್‌ಮಿ ನಾರ್ಜೊ 50i ಪ್ರೈಮ್ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದಿದ್ದು, ಅಲ್ಲದೇ ಇದು ಸುಮಾರು 43 ದಿನಗಳ ವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ಒದಗಿಸುವ ಸಾಮರ್ಥ್ಯ ಹೊಂದಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಆಯ್ಕೆ ಅನ್ನು ಪಡೆದುಕೊಂಡಿದೆ.
ರಿಯಲ್‌ಮಿ ಕಂಪನಿಯ ಈ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದ್ದು, ಅವುಗಳು ಕ್ರಮವಾಗಿ 3 GB RAM + 32 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಮತ್ತು 4 GB RAM + 64 GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಇವೆ. ಇನ್ನು ಗ್ರಾಹಕರು ಈ ಮೊಬೈಲ್ ಫೋನ್ ಮಿಂಟ್ ಗ್ರೀನ್ ಕಾರ್ಬನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಗ್ರಾಹಕರು ಖರೀದಿಸಬಹುದು.


Click it and Unblock the Notifications








