Home
ಸುದ್ದಿಜಾಲ

ಭಾರತದಲ್ಲಿ ರಿಯಲ್‌ಮಿ ನಾರ್ಜೋ 60 5G ಲಾಂಚ್!..ಇದರ ಡಿಸ್‌ಪ್ಲೇಗೆ ಗ್ರಾಹಕರು ಫಿದಾ!

ಜನಪ್ರಿಯ ರಿಯಲ್‌ಮಿ ಸಂಸ್ಥೆಯು ಈಗಾಗಲೇ ನಾರ್ಜೋ ಸರಣಿಯಲ್ಲಿ ಹಲವು ಫೋನ್‌ಗಳನ್ನು ಬಿಡುಗಡೆ ಮಾಡಿ ಸೈ ಎನಿಸಿಕೊಂಡಿದೆ. ಅದರ ಮುಂದಿನ ಆವೃತ್ತಿಯಾಗಿ ಇದೀಗ ಭಾರತದಲ್ಲಿ ರಿಯಲ್‌ಮಿ ನಾರ್ಜೋ 60 ಸರಣಿಯನ್ನು ಬಿಡುಗಡೆ ಮಾಡಿದ್ದು, ಇದು ರಿಯಲ್‌ಮಿ ನಾರ್ಜೋ 60 5G ಮತ್ತು ರಿಯಲ್‌ಮಿ ನಾರ್ಜೋ 60 ಪ್ರೊ 5G ಮಾಡೆಲ್‌ಗಳನ್ನು ಒಳಗೊಂಡಿದೆ. ಆ ಪೈಕಿ ರಿಯಲ್‌ಮಿ ನಾರ್ಜೋ 60 5G ಫೋನಿನ ಮಾಹಿತಿ ಇಲ್ಲಿದೆ.

ಹೌದು, ರಿಯಲ್‌ಮಿ ಸಂಸ್ಥೆಯು ನೂತನವಾಗಿ ಬಿಡುಗಡೆ ಮಾಡಿರುವ ರಿಯಲ್‌ಮಿ ನಾರ್ಜೋ 60 5G ಫೋನ್‌ ತನ್ನ ಫೀಚರ್ಸ್‌ಗಳಿಂದ ಈಗ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಈ ಫೋನ್‌ OLED ಡಿಸ್‌ಪ್ಲೇ ಒಳಗೊಂಡಿದ್ದು, ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಅಂದಹಾಗೆ ಈ ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಭಾರತದಲ್ಲಿ ರಿಯಲ್‌ಮಿ ನಾರ್ಜೋ 60 5G ಲಾಂಚ್!..ಇದರ ಡಿಸ್‌ಪ್ಲೇಗೆ ಗ್ರಾಹಕರು ಫಿದಾ!

ರಿಯಲ್‌ಮಿ ನಾರ್ಜೋ 60 5G ಮೊಬೈಲ್‌ 8GB RAM + 128GB ಮತ್ತು 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಪ್ರಾಥಮಿಕ ಕ್ಯಾಮೆರಾವು 64 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರುವುದು ಪ್ಲಸ್‌ ಪಾಯಿಂಟ್‌ ಅಂಶಗಳಲ್ಲಿ ಒಂದಾಗಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ರಿಯಲ್‌ಮಿ ನಾರ್ಜೋ 60 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ HD+ AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದ್ದು, 1,000ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ ಯಾವುದು : ರಿಯಲ್‌ಮಿ ನಾರ್ಜೋ 60 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM + 256B ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್ ಸಾಮರ್ಥ್ಯ ಎಷ್ಟು : ರಿಯಲ್‌ಮಿ ನಾರ್ಜೋ 60 5G ಸ್ಮಾರ್ಟ್‌ಫೋನ್‌ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯ ಹೊಂದಿದೆ. ಹಾಗೆಯೇ ಈ ಫೋನ್ ಮುಂಭಾಗದಲ್ಲಿ ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ವಿಡಿಯೋ ರೆಕಾರ್ಡಿಂಗ್ ಸೇರಿದಂತೆ ಇತರೆ ಎಡಿಟಿಂಗ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ರಿಯಲ್‌ಮಿ ನಾರ್ಜೋ 60 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W SuperVOOC ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ ಮತ್ತು GPS ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ : ರಿಯಲ್‌ಮಿ ನಾರ್ಜೋ 60 5G ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 17,999ರೂ. ಆಗಿದೆ. ಅದೇ ರೀತಿ 8GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 19,999ರೂ. ಆಗಿದೆ. ಇನ್ನು ಈ ಫೋನ್‌ ಕಾಸ್ಮಿಕ್‌ ಬ್ಲ್ಯಾಕ್‌ ಹಾಗೂ ಮಾರ್ಸ್ ಆರೇಂಜ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಜುಲೈ 15 ರಂದು ಸೇಲ್‌ ಪ್ರಾರಂಭಿಸಲಿದೆ.

Best Mobiles in India

English summary
Realme Narzo 60 5G With Super AMOLED display Launched in India. Check Price, Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+