5000mAh ಬ್ಯಾಟರಿ ಇರುವ ಈ ರಿಯಲ್‌ಮಿ ಫೋನ್ ಬೆಲೆ ಇಳಿಕೆ!
ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಪ್ರಸ್ತುತ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಆರಂಭಿಸಿದ್ದು, ಈ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಈ ಮಾರಾಟ ಮೇಳದಲ್ಲಿ ಎಲ್ಲ ಮಾದರಿಯ ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ರಿಯಾಯಿತಿ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ. ಆ ಪೈಕಿ ಬಜೆಟ್ ದರದ ರಿಯಲ್‌ಮಿ ನಾರ್ಜೊ 60x 5G ಕೂಡಾ ಆಕರ್ಷಕ ಡಿಸ್ಕೌಂಟ್ ಪಡೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ ನಾರ್ಜೊ 60x 5G ಫೋನ್ ಶೇ. 23% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 128GB ಸ್ಟೋರೇಜ್ ವೇರಿಯಂಟ್ 11,499ರೂ. ಗಳ ದರದಲ್ಲಿ ಖರೀದಿಗೆ ಲಭ್ಯ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಬ್ಯಾಂಕ್ ಡಿಸ್ಕೌಂಟ್ ಪಡೆದುಕೊಂಡರೆ, ಇನ್ನಷ್ಟು ಆಫರ್ ಬೆಲೆಗೆ ಫೋನ್ ಖರೀದಿಸಬಹುದು.

ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ 60x 5G ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ 60x 5G - ಫೀಚರ್ಸ್
ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ 6.74 ಇಂಚಿನ IPS LCD ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಸಪೋರ್ಟ್ ಸಹ ಒಳಗೊಂಡಿದೆ.
ರಿಯಲ್‌ಮಿ ನಾರ್ಜೊ 60x ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ಸಪೋರ್ಟ್ ಕೂಡಾ ಪಡೆದುಕೊಂಡಿದೆ.
ಅದೇ ರೀತಿ ಈ 5G ಫೋನ್ 4GB RAM + 128 GB ಹಾಗೂ 6GB RAM + 256 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸುವ ಆಯ್ಕೆ ಇದೆ.
ರಿಯಲ್‌ಮಿ ನಾರ್ಜೊ 60x ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಅಲ್ಲದೇ ಇದರ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ರಿಯಲ್‌ಮಿ ನಾರ್ಜೊ 60x ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯ ಸಹ ಒಳಗೊಂಡಿದೆ.
ಮಾರುಕಟ್ಟೆಯಲ್ಲಿ ರಿಯಲ್‌ಮಿ ನಾರ್ಜೊ 60x ಮೊಬೈಲ್ 4 GB RAM + 128 GB ಮತ್ತು 6 GB RAM + 256 GB ಆಂತರೀಕ ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಬ್ಲೂ ಮತ್ತು ಪರ್ಪಲ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.


Click it and Unblock the Notifications








