Home
ಸುದ್ದಿಜಾಲ

ಇಂದು ರಿಯಲ್‌ಮಿ ನಾರ್ಜೊ 60x ಖರೀದಿಗೆ ಲಭ್ಯ.. ಬೆಲೆ ಎಷ್ಟು?

ರಿಯಲ್‌ಮಿ ಮೊಬೈಲ್ ಕಂಪನಿಯು ಇತ್ತೀಚಿಗೆ ಭಾರತದಲ್ಲಿ ಬಿಡುಗಡೆ ಮಾಡಿರುವ ರಿಯಲ್‌ಮಿ ನಾರ್ಜೊ 60x ಸ್ಮಾರ್ಟ್‌ಫೋನ್‌ ಬಜೆಟ್‌ ವಿಭಾಗದಲ್ಲಿ ಗ್ರಾಹಕರನ್ನು ಸೆಳೆದಿದೆ. ಈ ಫೋನ್‌ ಇಂದು (ಸೆ. 12 ರಂದು) ಮಧ್ಯಾಹ್ನ 12 ಗಂಟೆಗೆ ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಫಸ್ಟ್‌ ಸೇಲ್ ಶುರು ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 12,999ರೂ. ಆಗಿದೆ.

ಹೌದು, ರಿಯಲ್‌ಮಿ ನಾರ್ಜೊ 60x ಮೊಬೈಲ್‌ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಮಾರಾಟ ಶುರು ಮಾಡಲಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್‌ ಪವರ್‌ ಪಡೆದಿದ್ದು, ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ.

ಇಂದು ರಿಯಲ್‌ಮಿ ನಾರ್ಜೊ 60x ಖರೀದಿಗೆ ಲಭ್ಯ.. ಬೆಲೆ ಎಷ್ಟು?

ಹಾಗೆಯೇ ರಿಯಲ್‌ಮಿ ನಾರ್ಜೊ 60x ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅಂದಹಾಗೆ ಈ ಮೊಬೈಲ್‌ ಬ್ಲೂ ಮತ್ತು ಪರ್ಪಲ್‌ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ರಿಯಲ್‌ಮಿ ನಾರ್ಜೊ 60x ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ 60x ಫೀಚರ್ಸ್‌ ಏನಿವೆ :
ರಿಯಲ್‌ಮಿ ನಾರ್ಜೊ 60x ಮೊಬೈಲ್‌ 6.74 ಇಂಚಿನ IPS LCD ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಕೂಡಾ ಪಡೆದಿದೆ.

ರಿಯಲ್‌ಮಿ ನಾರ್ಜೊ 60x ಪ್ರೊಸೆಸರ್‌ ಪವರ್‌ :
ರಿಯಲ್‌ಮಿ ನಾರ್ಜೊ 60x ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್‌ ಪವರ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ Realme UI 4.0 ನಲ್ಲಿ ರನ್ ಆಗುತ್ತದೆ. ಹಾಗೆಯೇ 6GB ಅಥವಾ 8GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯ ವಿಸ್ತರಿಸುವ ಆಯ್ಕೆ ಇದೆ.

ರಿಯಲ್‌ಮಿ ನಾರ್ಜೊ 60x ಕ್ಯಾಮೆರಾ ರಚನೆ :
ರಿಯಲ್‌ಮಿ ನಾರ್ಜೊ 60x ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಸೆಕೆಂಡರಿ ಕ್ಯಾಮರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಪಡೆದಿದೆ. ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ರಿಯಲ್‌ಮಿ ನಾರ್ಜೊ 60x ಬ್ಯಾಟರಿ ಮತ್ತು ಇತರೆ ಮಾಹಿತಿ :
ರಿಯಲ್‌ಮಿ ನಾರ್ಜೊ 60x ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಪಡೆದಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

ರಿಯಲ್‌ಮಿ ನಾರ್ಜೊ 60x ಬೆಲೆ ಮತ್ತು ಲಭ್ಯತೆ :
ರಿಯಲ್‌ಮಿ ನಾರ್ಜೊ 60x ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆಯು 12,999ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಇಂದು ಮಾರಾಟ ಪ್ರಾರಂಭಿಸಲಿದ್ದು, ಬ್ಲೂ ಮತ್ತು ಪರ್ಪಲ್‌ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
realme Narzo 60X 5G first sale via flipkart. price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+