ಡಿಸ್ಕೌಂಟ್ ಬೆಲೆಯಲ್ಲಿ ಹೊಸ 5G ಫೋನ್ ಖರೀದಿಸಬೇಕೆ?..ಈ ಆಫರ್ ಬೆಸ್ಟ್!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ಒಂದಿಲ್ಲೊಂದು ಮಾರಾಟ ಮೇಳದ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಮುಖ್ಯವಾಗಿ ಮೊಬೈಲ್‌ಗಳಿಗೆ ವಿಶೇಷ ರಿಯಾಯಿತಿ ಲಭ್ಯ ಮಾಡುತ್ತದೆ. ಸದ್ಯ ಫ್ಲಿಪ್‌ಕಾರ್ಟ್ ತಾಣದಲ್ಲಿ ರಿಯಲ್‌ಮಿ ಸಂಸ್ಥೆಯು ರಿಯಲ್‌ಮಿ ನಾರ್ಜೊ 60x 5G ಮೊಬೈಲ್ ಭರ್ಜರಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಸಖತ್ ಖುಷಿ ಎನಿಸಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ ನಾರ್ಜೊ 60x 5G ಫೋನ್ ಶೇ. 24% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ 11,381ರೂ. ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಫ್ಲಿಪ್‌ಕಾರ್ಟ್ ತಾಣದಲ್ಲಿ ಲಭ್ಯ ಇರುವ ಬ್ಯಾಂಕ್ ಡಿಸ್ಕೌಂಟ್ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಬೆಲೆಗೆ ಫೋನ್ ಖರೀದಿಸಬಹುದು.

ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಮಾಡಲಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್‌ನಲ್ಲಿ ಇದ್ದು, ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 60x 5G ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ 60x 5G - ಫೀಚರ್ಸ್ ಮಾಹಿತಿ
ರಿಯಲ್‌ಮಿ ನಾರ್ಜೊ 60x 5G ಮೊಬೈಲ್ 6.74 ಇಂಚಿನ IPS LCD ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನಿನ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಸಪೋರ್ಟ್ ಸಹ ಪಡೆದುಕೊಂಡಿದೆ.
ರಿಯಲ್‌ಮಿ ನಾರ್ಜೊ 60x 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್ ಬಲದಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಅನಗುಣವಾಗಿ ಆಂಡ್ರಾಯ್ಡ್ 13 ಓಎಸ್ ಆಧಾರಿತ ರಿಯಲ್‌ಮಿ UI 4.0 ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಜೊತೆಗೆ 4GB RAM + 128 GB ಹಾಗೂ 6GB RAM + 256 GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯ ವಿಸ್ತರಿಸುವ ಆಯ್ಕೆ ಇದೆ.
ರಿಯಲ್‌ಮಿ ನಾರ್ಜೊ 60x 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಅಲ್ಲದೇ ಇದರ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ರಿಯಲ್‌ಮಿ ನಾರ್ಜೊ 60x 5G ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದುಕೊಂಡಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಸೌಲಭ್ಯ ಸಹ ಒಳಗೊಂಡಿದೆ.
ಇನ್ನು ದೇಶಿಯ ಮಾರುಕಟ್ಟೆಯಲ್ಲಿ ರಿಯಲ್‌ಮಿ ನಾರ್ಜೊ 60x 5G ಮೊಬೈಲ್ 4 GB RAM + 128 GB ಮತ್ತು 6 GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಈ ಫೋನ್ ಬ್ಲೂ ಮತ್ತು ಪರ್ಪಲ್ ಕಲರ್ ಆಯ್ಕೆ ಪಡೆದಿದ್ದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಖರೀದಿಸಬಹುದು.


Click it and Unblock the Notifications








