Home
ಸುದ್ದಿಜಾಲ

ಬಿಗ್‌ ಬ್ಯಾಟರಿ ಸೌಲಭ್ಯದ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ದಿಗ್ಗಜ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಎಂದು ಗುರುತಿಸಿಕೊಂಡಿರುವ ಅಮೆಜಾನ್ ಹಬ್ಬದ ಅಂಗವಾಗಿ ಮೊಬೈಲ್‌ಗಳಿಗೆ ಭಾರೀ ಡಿಸ್ಕೌಂಟ್‌ ಲಭ್ಯ ಮಾಡಿದ್ದು, ಈ ಸಂದರ್ಭದಲ್ಲಿ ಹೊಸ ಮೊಬೈಲ್‌ ಖರೀದಿಸುವವರಿಗೆ ಇದು ಖುಷಿಯ ಸಂಗತಿ ಎನಿಸಿದೆ. ಆಫರ್‌ಗಳ ಪೈಕಿ ರಿಯಲ್‌ಮಿ ನಾರ್ಜೊ 60x ಮೊಬೈಲ್‌ ಬೊಂಬಾಟ್‌ ಕೊಡುಗೆಯಲ್ಲಿ ಖರೀದಿಗೆ ಲಭ್ಯ ಇದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ ನಾರ್ಜೊ 60x 5G ಮೊಬೈಲ್‌ ಶೇ. 9% ರಷ್ಟು ರಿಯಾಯಿತಿ ಪಡೆದಿದ್ದು, 6GB + 128GB ವೇರಿಯಂಟ್‌ ಫೋನ್‌ 14,499 ರೂ. ಗಳ ಬೆಲೆಯಲ್ಲಿ ಲಭ್ಯ ಇದೆ. ಇದಲ್ಲದೇ ಆಯ್ದ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಆಫರ್‌ ಸೇರಿ ಈ ಫೋನ್‌ ಅನ್ನು ಇನ್ನಷ್ಟು ರಿಯಾಯಿತಿ ಬೆಲೆಗೆ ಖರೀದಿ ಮಾಡಬಹುದಾಗಿದೆ.

ಬಿಗ್‌ ಬ್ಯಾಟರಿ ಸೌಲಭ್ಯದ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಅಂದಹಾಗೆ ರಿಯಲ್‌ಮಿ ನಾರ್ಜೊ 60x ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದರೊಂದಿಗೆ ಡ್ಯುಯಲ್‌ ಕ್ಯಾಮೆರಾ ರಚನೆ ಇದ್ದು, ಈ ಫೋನ್‌ 6GB + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ 60x ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್ ಹಾಗೂ ರಚನೆಯ ಮಾಹಿತಿ

ರಿಯಲ್‌ಮಿ ನಾರ್ಜೊ 60x ಮೊಬೈಲ್‌ 6.74 ಇಂಚಿನ IPS LCD ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಪೋರ್ಟ್‌ ಕೂಡಾ ಹೊಂದಿದೆ.

ಬಿಗ್‌ ಬ್ಯಾಟರಿ ಸೌಲಭ್ಯದ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಪ್ರೊಸೆಸರ್‌ ಸಾಮರ್ಥ್ಯ ಎಷ್ಟಿದೆ

ರಿಯಲ್‌ಮಿ ನಾರ್ಜೊ 60x ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100 ಪ್ಲಸ್ ಪ್ರೊಸೆಸರ್‌ ಪವರ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ರನ್ ಆಗುತ್ತದೆ. ಹಾಗೆಯೇ 6GB ಅಥವಾ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯ ವಿಸ್ತರಿಸುವ ಆಯ್ಕೆ ಪಡೆದಿದೆ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ರಿಯಲ್‌ಮಿ ನಾರ್ಜೊ 60x ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಪಡೆದಿದೆ. ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ಬಿಗ್‌ ಬ್ಯಾಟರಿ ಸೌಲಭ್ಯದ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಬ್ಯಾಟರಿ ಬಲ ಮತ್ತು ಇತರೆ ಆಯ್ಕೆಗಳ ಮಾಹಿತಿ

ರಿಯಲ್‌ಮಿ ನಾರ್ಜೊ 60x ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಮೆಮೊರಿ ಸೌಲಭ್ಯ ಹಾಗೂ ಕಲರ್ ಆಯ್ಕೆ ಹೀಗಿದೆ

ರಿಯಲ್‌ಮಿ ನಾರ್ಜೊ 60x ಫೋನ್‌ 4 GB ಮತ್ತು 6GB + 128 GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದ್ದು, 2TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಆಯ್ಕೆ ಹೊಂದಿದೆ. ಇನ್ನು ಈ ಫೋನ್‌ ಬ್ಲೂ ಮತ್ತು ಪರ್ಪಲ್‌ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ.

Best Mobiles in India

English summary
realme narzo 60X 5G received best discount on amazon. offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+