Home
ಸುದ್ದಿಜಾಲ

ವೇಗದ ಪ್ರೊಸೆಸರ್‌ ಇರುವ ಈ 5G ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!

ಅಮೆಜಾನ್‌ ಇ ಕಾಮರ್ಸ್ ತಾಣವು ಇದೀಗ ರಿಯಲ್‌ಮಿ ನಾರ್ಜೋ ವೀಕ್‌ (Realme NARZO WEEK) ಮಾರಾಟ ಮೇಳವನ್ನು ಆಯೋಜಿಸಿದ್ದು, ಈ ಮಾರಾಟವು ಜುಲೈ 3 ರಿಂದ ಜುಲೈ 7 ರ ವರೆಗೆ ಲೈವ್ ಇರಲಿದೆ. ಇನ್ನು ಈ ಸ್ಪೆಷಲ್‌ ಮಾರಾಟದಲ್ಲಿ ಆಯ್ದ ರಿಯಲ್‌ಮಿ ನಾರ್ಜೋ ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಘೋಷಿಸಲಾಗಿದೆ. ಆ ಪೈಕಿ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ (realme NARZO 70 Pro 5G) ಕೂಡಾ ಸಖತ್‌ ರಿಯಾಯಿತಿ ಪಡೆದಿದ್ದು, ಮೊಬೈಲ್‌ ಪ್ರಿಯರು ವಾವ್‌ ಎನ್ನುವಂತೆ ಮಾಡಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಆಯೋಜಿಸಿರುವ ನಾರ್ಜೋ ವೀಕ್‌ ಮಾರಾಟದಲ್ಲಿ ರಿಯಲ್‌ಮಿ ನಾರ್ಜೋ 70 ಪ್ರೊ 5G ಶೇ. 20% ರಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ ಈಗ ಕೊಡುಗೆಯಲ್ಲಿ 19,998ರೂ. ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಹಾಗೆಯೇ ಬ್ಯಾಂಕ್‌ ಆಫರ್‌ ಮತ್ತು ನೋ ಕಾಸ್ಟ್‌ ಇಎಮ್‌ಐ ಕೂಡಾ ಗ್ರಾಹಕರಿಗೆ ಲಭ್ಯ ಆಗಲಿದೆ.

ವೇಗದ ಪ್ರೊಸೆಸರ್‌ ಇರುವ ಈ 5G ಫೋನ್‌ ಬೆಲೆಯಲ್ಲಿ ಸಖತ್‌ ಇಳಿಕೆ!

ಇನ್ನು ನಾರ್ಜೋ ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯದ ಆಯ್ಕೆ ಪಡೆದಿದೆ. ಹಾಗಾದರೆ ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ 70 ಪ್ರೊ 5G - ಫೀಚರ್ಸ್‌

ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ 2,000 nits ಬ್ರೈಟ್ನೆಸ್‌ ಸೌಲಭ್ಯ ಪಡೆದಿದ್ದು, 120 Hz ರಿಫ್ರೆಶ್ ರೇಟ್‌ ಸಪೋರ್ಟ್‌ನೊಂದಿಗೆ ಕಾರ್ಯ ಮಾಡಲಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಸಪೋರ್ಟ್‌ ಜೊತೆಗೆ ಕಾರ್ಯ ಮಾಡಲಿದೆ. ಅಲ್ಲದೇ ಇದು ಎರಡು ಸ್ಟೋರೇಜ್‌ ಆಯ್ಕೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 8GB + 128 GB ವೇರಿಯಂಟ್‌ ಹಾಗೂ 8 GB + 256 GB ವೇರಿಯಂಟ್‌ ಆಯ್ಕೆ ಆಗಿವೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ ಮೂರು ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಈ ಫೋನಿನ ಫಸ್ಟ್‌ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೋನಿ IMX 890 ಸೆನ್ಸಾರ್‌ ಆಗಿದ್ದು, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಇದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 67W SUPERVOOC ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಇನ್‌ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಆಯ್ಕೆ ಕೂಡಾ ಇದೆ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ 8GB + 128GB ವೇರಿಯಂಟ್‌ ಹಾಗೂ 8GB + 256GB ವೇರಿಯಂಟ್‌ ನಲ್ಲಿ ಲಭ್ಯ. ಇನ್ನು ಈ ಫೋನ್‌ ಗ್ಲಾಸ್‌ ಗ್ರೀನ್‌ ಹಾಗೂ ಗ್ಲಾಸ್‌ ಗೋಲ್ಡ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಗ್ರಾಹಕರು ಅಮೆಜಾನ್‌ ಹಾಗೂ ರಿಯಲ್‌ಮಿ ವೆಬ್‌ಸೈಟ್‌ ಮೂಲಕ ಖರೀದಿ ಮಾಡಬಹುದು.

Best Mobiles in India

English summary
Realme NARZO 70 Pro 5G available at biggest price drop in India. Check all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+