ಇಂದು ರಿಯಲ್‌ಮಿ ನಾರ್ಜೋ 70 ಪ್ರೊ 5G ಫಸ್ಟ್ ಸೇಲ್!..ವಾವ್ ಎನಿಸುವ ಆಫರ್!
ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಿರುವ ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನಿನ ಫಸ್ಟ್ ಸೇಲ್ ಇಂದು (ಮಾರ್ಚ್ 26 ರಂದು) ಅಮೆಜಾನ್ ಇ ಕಾಮರ್ಸ್ ತಾಣ ಹಾಗೂ ರಿಯಲ್‌ಮಿ ವೆಬ್‌ಸೈಟ್ ಮೂಲಕ ಮೂಲಕ ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭ ಆಗಲಿದೆ.
ಹೌದು, ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್ ಇಂದು ಮಾರಾಟ ಶುರು ಮಾಡಲಿದೆ. ಈ ಫೋನ್ 8GB + 128 GB ವೇರಿಯಂಟ್ ಹಾಗೂ 8 GB + 256 GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇದರ ಬೇಸ್ ವೇರಿಯಂಟ್ ಬೆಲೆಯು 19,999ರೂ. ಆಗಿದ್ದು, ಖರೀದಿದಾರರು ಆಯ್ದ ಕೆಲವು ಬ್ಯಾಂಕ್‌ಗಳಿಂದ ಭರ್ಜರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ.

ಅಂದಹಾಗೆ ಮೊಬೈಲ್‌ನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದ್ದು, 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ. ಇನ್ನು ಈ ಫೋನ್ ಗ್ಲಾಸ್ ಗ್ರೀನ್ ಹಾಗೂ ಗ್ಲಾಸ್ ಗೋಲ್ಡ್ ಕಲರ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೋ 70 ಪ್ರೊ 5G - ಫೀಚರ್ಸ್
ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಸಹ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 2,000 nits ಬ್ರೈಟ್ನೆಸ್ ಸೌಲಭ್ಯ ಹೊಂದಿದ್ದು, 120 Hz ರಿಫ್ರೆಶ್ ರೇಟ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ.

ಈ ನೂತನ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಫೋನ್ ಎರಡು ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB + 128 GB ವೇರಿಯಂಟ್ ಹಾಗೂ 8 GB + 256 GB ಆಂತರೀಕ ವೇರಿಯಂಟ್ ಆಯ್ಕೆ ಪಡೆದಿದೆ.
ಇನ್ನು ಈ ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX 890 ಸೆನ್ಸಾರ್ ನಲ್ಲಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದ್ದು, ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಇನ್ನು ಈ ಫೋನಿನ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.
ನಾರ್ಜೋ 70 ಪ್ರೊ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಪಡೆದಿದ್ದು, ಇದಕ್ಕೆ ಪೂರಕವಾಗಿ 67W SUPERVOOC ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಆಯ್ಕೆಗಳನ್ನು ಕಾಣಬಹುದಾಗಿದೆ. ಹಾಗೆಯೇ ಇನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಸಹ ಇವೆ.
ಭಾರತೀಯ ಮಾರುಕಟ್ಟೆಯಲ್ಲಿ ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್ 8GB + 128GB ವೇರಿಯಂಟ್ ಆಫರ್ ಬೆಲೆಯು 18,999ರೂ. ಆಗಿದೆ. ಹಾಗೆಯೇ 8GB + 256GB ವೇರಿಯಂಟ್ ವೇರಿಯಂಟ್ ಆಫರ್ ಸದರವು 19,999ರೂ. ಆಗಿದೆ. ಇನ್ನು ಈ ಫೋನ್ ಅಮೆಜಾನ್ ಹಾಗೂ ರಿಯಲ್‌ಮಿ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯ.


Click it and Unblock the Notifications