Home
ಸುದ್ದಿಜಾಲ

ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್‌ ಮೂಲಕ ಕೆಲಸ ಮಾಡುವ ಸ್ಮಾರ್ಟ್‌ಫೋನ್‌!

ಸ್ಮಾರ್ಟ್‌ಫೋನ್‌ ಪ್ರೇಮಿಗಳು ಬಹಳ ಕುತೂಹಲದಿಂದ ಕಾಯುತ್ತಿರುವ ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ ಇಂದು (ಮಾರ್ಚ್‌ 19 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಗ್ಗೆ ಇಡಲಿದೆ. ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ ಫೋನ್‌ ಈಗಾಗಲೇ ಗೆಸ್ಚರ್ ಫೀಚರ್ಸ್‌ನಿಂದಾಗಿ ಬಿಡುಗಡೆಗೂ ಮುನ್ನವೇ ಗ್ರಾಹಕರ ಗಮನ ಸೆಳೆದಿದೆ.

ಹೌದು, ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್‌ ಇಂದು ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್‌ ಆಗಲಿದೆ. ಈ ಮೊಬೈಲ್‌ ಲಾಂಚ್‌ ಕುರಿತಾಗಿ ಇ ಕಾಮರ್ಸ್‌ ದೈತ್ಯ ಅಮೆಜಾನ್‌ ಪ್ಲಾಟ್‌ ಫಾರ್ಮ್ ನಲ್ಲಿ ಮೈಕ್ರೋ ಪೇಜ್‌ ಮಾಡಿದೆ. ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ಪವರ್‌ ಪಡೆದಿದೆ. ಹಾಗಾದ್ರೆ ರಿಯಲ್‌ಮಿ ನಾರ್ಜೋ 70 ಪ್ರೊ 5G ಪೋನ್‌ನಲ್ಲಿ ಇತರೆ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್‌ ಮೂಲಕ ಕೆಲಸ ಮಾಡುವ ಸ್ಮಾರ್ಟ್‌ಫೋನ್‌!

ರಿಯಲ್‌ಮಿ ನಾರ್ಜೋ 70 ಪ್ರೊ 5G - ನಿರೀಕ್ಷಿತ ಫೀಚರ್ಸ್‌

ರಿಯಲ್‌ಮಿ ಕಂಪನಿಯ ಈ 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿರುವ ಸಾಧ್ಯತೆ ಇದೆ. ಅಲ್ಲದೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಎಂಟ್ರಿ ನೀಡಲಿದೆ. ಹಾಗೆಯೇ ಈ ಡಿಸ್‌ಪ್ಲೇ 405 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದಿರಲಿದೆ ಎನ್ನಲಾಗಿದೆ. ಇದರೊಂದಿಗೆ ಡಿಸ್‌ಪ್ಲೇಯು 120 Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ ಎಂದು ಊಹಿಸಲಾಗಿದೆ.

ರಿಯಲ್‌ಮಿ ಸಂಸ್ಥೆಯ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 14 ಸಪೋರ್ಟ್‌ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್‌ನಲ್ಲಿ ಎಂಟ್ರಿ ಪಡೆಯಲಿದೆ. ಇದರೊಂದಿಗೆ 8 GB ವರ್ಚುವಲ್ RAM ಬೆಂಬಲಿಸಲಿದ್ದು, ಮೆಮೊರಿ ಕಾರ್ಡ್ ಮೂಲಕ 1  TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಹಾಗೆಯೇ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ರಚನೆ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನು ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೋನಿ IMX 890 ಸೆನ್ಸಾರ್‌ ಆಗಿರಲಿದೆ ಎಂದು ತಿಳಿಸುತ್ತದೆ. ಹಾಗೆಯೇ ಇದರ ದ್ವಿತೀಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿ ಇರಲಿದೆ ಎನ್ನಲಾಗಿದೆ.

ರಿಯಲ್‌ಮಿ ಸಂಸ್ಥೆಯ ಈ ನೂತನ ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿರುವುದು ಬಹುತೇಕ ಪಕ್ಕಾ ಆಗಿದ್ದು, ಇದಕ್ಕೆ ಪೂರಕ ವಾಗಿ 33 W ಡಾರ್ಟ್ ಚಾರ್ಜ್ ಅನ್ನು ಸಪೋರ್ಟ್ ಇರಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯ ಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಆಯ್ಕೆ ಗಳು ಇರಲಿವೆ. ಹಾಗೆಯೇ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಇರಲಿವೆ ಎನ್ನಲಾಗಿದೆ.

ಬಹುನಿರೀಕ್ಷಿತ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ ಭಾರತದಲ್ಲಿ ಅಮೆಜಾನ್‌ ಇ ಕಾಮರ್ಸ್‌ ಇಂದು ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಎರಡು ಕಲರ್ ಆಯ್ಕೆ ಗಳನ್ನು ಪಡೆದಿರಲಿದ್ದು, ಬಜೆಟ್‌ ಬೆಲೆ ಹೊಂದಿರಲಿದೆ ಎಂದು ಹೇಳಲಾಗುತ್ತಿದೆ.

Best Mobiles in India

English summary
Realme Narzo 70 Pro 5G india launch today. specifications, price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+