ಬಹುನಿರೀಕ್ಷಿತ ರಿಯಲ್‌ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್‌ಬಡ್ಸ್ ಉಚಿತ!
ಮೊಬೈಲ್ ಪ್ರಿಯರು ಕುತೂಹಲದಿಂದ ಕಾಯುತ್ತಿರುವ ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್ ಇಂದು ಅಧಿಕೃತವಾಗಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ರಿಯಲ್‌ಮಿ ಸಂಸ್ಥೆಯ ಈ ಸ್ಮಾರ್ಟ್‌ಫೋನ್ ಏರ್ ಗೆಸ್ಚರ್ (Air Gestures) ಆಯ್ಕೆಗಳನ್ನು ಪಡೆದಿರುವುದು ಪ್ರಮುಖ ಹೈಲೈಟ್ ಆಗಿ ಕಾಣಿಸಿಕೊಂಡಿದೆ.
ಹೌದು, ಭಾರತದಲ್ಲಿ ಇಂದು ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್ ಬಿಡುಗಡೆ ಆಗಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಪವರ್ ಪಡೆದಿದ್ದು, 67W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್‌ನ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್ ಯಾವುವು ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ 70 ಪ್ರೊ 5G - ಫೀಚರ್ಸ್
ಈ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಸಹ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇ 2,000 nits ಬ್ರೈಟ್ನೆಸ್ ಸೌಲಭ್ಯ ಪಡೆದಿದ್ದು, 120 Hz ರಿಫ್ರೆಶ್ ರೇಟ್ ಸಪೋರ್ಟ್‌ನೊಂದಿಗೆ ಕೆಲಸ ಮಾಡಲಿದೆ.

ರಿಯಲ್‌ಮಿ ಸಂಸ್ಥೆಯ ನಾರ್ಜೋ 70 ಪ್ರೊ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಸಪೋರ್ಟ್ ಜೊತೆಗೆ ಕೆಲಸ ಮಾಡಲಿದೆ. ಅಲ್ಲದೇ ಇದು ಎರಡು ಸ್ಟೋರೇಜ್ ಆಯ್ಕೆಯನ್ನು ಪಡೆದಿದ್ದು, ಅವುಗಳು ಕ್ರಮವಾಗಿ 8GB + 128 GB ವೇರಿಯಂಟ್ ಹಾಗೂ 8 GB + 256 GB ವೇರಿಯಂಟ್ ಆಯ್ಕೆ ಆಗಿವೆ.
ಅದೇ ರೀತಿ ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಈ ಫೋನಿನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX 890 ಸೆನ್ಸಾರ್ ಆಗಿದ್ದು, ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಇದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಒಳಗೊಂಡಿದೆ.
ನಾರ್ಜೋ 70 ಪ್ರೊ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 67W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಇನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆ ಸಹ ಇದೆ.
ಭಾರತದಲ್ಲಿ ನಾರ್ಜೋ 70 ಪ್ರೊ 5G ಮೊಬೈಲ್‌ನ 8GB + 128GB ವೇರಿಯಂಟ್ ಬೆಲೆಯು 18,999ರೂ. ಆಗಿದೆ. ಹಾಗೆಯೇ 8GB + 256GB ವೇರಿಯಂಟ್ ವೇರಿಯಂಟ್ ದರವು 19,999ರೂ. ಆಗಿದೆ. ಇನ್ನು ಈ ಫೋನ್ ಗ್ಲಾಸ್ ಗ್ರೀನ್ ಹಾಗೂ ಗ್ಲಾಸ್ ಗೋಲ್ಡ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಆರಂಭಿಕ ಕೊಡುಗೆಯಾಗಿ ರಿಯಲ್‌ಮಿ T300 ಬಡ್ಸ್ ಉಚಿತವಾಗಿ ಲಭ್ಯ ಆಗಲಿದೆ. ಗ್ರಾಹಕರು ಅಮೆಜಾನ್ ಹಾಗೂ ರಿಯಲ್‌ಮಿ ವೆಬ್‌ಸೈಟ್ ಮೂಲಕ ಖರೀದಿಸಬಹುದಾಗಿದೆ.


Click it and Unblock the Notifications








