ಇತ್ತೀಚಿಗೆ ಲಾಂಚ್ ಆದ ಈ ಮೊಬೈಲ್ ಬೆಲೆಯಲ್ಲಿ ಭಾರೀ ಡಿಸ್ಕೌಂಟ್!
ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ರಿಯಲ್‌ಮಿ ನಾರ್ಜೋ 70 ಪ್ರೊ 5G (Realme Narzo 70 Pro 5G) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇದೀಗ ಭರ್ಜರಿ ಡಿಸ್ಕೌಂಟ್ ಲಭ್ಯ ಆಗಿದೆ. ಅಂದಹಾಗೆ ಈ ಫೋನ್ 8GB+128GB ಸ್ಟೋರೇಜ್ ಮತ್ತು 8GB+256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್ ಅನ್ನು ಬ್ಯಾಂಕ್ ಆಫರ್ ಮೂಲಕ 3,000ರೂ. ಗಳ ವರೆಗೆ ರಿಯಾಯಿತಿಯಲ್ಲಿ ಪಡೆಯಬಹುದು. ಈ ಕೊಡುಗೆಯು ಫೋನಿನ ಎರಡು ವೇರಿಯಂಟ್‌ಗಳಿಗೂ ಅನ್ವಯವಾಗುತ್ತದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಸೌಲಭ್ಯವನ್ನು ಪಡೆದುಕೊಂಡಿದೆ.

ಇನ್ನು ಈ ಫೋನಿನ 8GB+128GB ವೇರಿಯಂಟ್ ಡಿಸ್ಕೌಂಟ್ ಬೆಲೆಯು 17,999ರೂ. ಗಳು ಆಗಿದೆ. ಹಾಗೆಯೇ 8GB+256GB ಆಫರ್ ದರವು 18,999ರೂ. ಗಳು ಆಗಿದೆ. ಆಸಕ್ತ ಗ್ರಾಹಕರು ಈ ಮೊಬೈಲ್ ಅನ್ನು ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್ ಮೂಲಕ ಖರೀದಿ ಮಾಡಬಹುದಾಗಿದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೋ 70 ಪ್ರೊ 5G - ಫೀಚರ್ಸ್ ಮಾಹಿತಿ
ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಸಹ ಪಡೆದಿದೆ. ಇದರ ಜೊತೆಗೆ ಈ ಡಿಸ್‌ಪ್ಲೇ 2,000 nits ಬ್ರೈಟ್ನೆಸ್ ಪಡೆದಿದ್ದು, 120 Hz ರಿಫ್ರೆಶ್ ರೇಟ್ ಸಪೋರ್ಟ್ ಜೊತೆಗೆ ಕಾರ್ಯ ಮಾಡುತ್ತದೆ.
ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಇದೆ. ಹಾಗೆಯೇ ಇದು ಎರಡು ವೇರಿಯಂಟ್ ಆಯ್ಕೆಯನ್ನು ಪಡೆದಿದ್ದು, ಅವುಗಳು ಕ್ರಮವಾಗಿ 8GB + 128 GB ವೇರಿಯಂಟ್ ಹಾಗೂ 8 GB + 256 GB ವೇರಿಯಂಟ್ ಆಯ್ಕೆಯಲ್ಲಿ ಇವೆ.
ರಿಯಲ್‌ಮಿ ನಾರ್ಜೋ 70 ಪ್ರೊ 5G ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಇದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX 890 ಸೆನ್ಸಾರ್ ಆಗಿದೆ., ದ್ವಿತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಅನ್ನು ಪಡೆದಿದೆ.
ರಿಯಲ್‌ಮಿ ನಾರ್ಜೋ 70 ಪ್ರೊ 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಒದಗಿಸಿದ್ದು, ಇದಕ್ಕೆ ಅನುಗುಣವಾಗಿ 67W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಆಯ್ಕೆಗಳನ್ನು ನೀಡಲಾಗಿದೆ. ಹಾಗೆಯೇ ಇನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಆಯ್ಕೆಗಳು ಇವೆ
ಅಂದಹಾಗೆ ರಿಯಲ್‌ಮಿ ಸಂಸ್ಥೆಯ ಈ ನಾರ್ಜೋ 70 ಪ್ರೊ 5G ಫೋನ್ 8GB + 128GB ವೇರಿಯಂಟ್ ಹಾಗೂ 8GB + 256GB ವೇರಿಯಂಟ್ ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಖರೀದಿದಾರರು ಅಮೆಜಾನ್ ವೆಬ್‌ಸೈಟ್ ಮೂಲಕ ಖರೀದಿ ಮಾಡಬಹುದಾಗಿದೆ.


Click it and Unblock the Notifications








