Home
ಸುದ್ದಿಜಾಲ

ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ ಎಂಟ್ರಿಗೆ ಮುಹೂರ್ತ ಫಿಕ್ಸ್‌! ಏನೆಲ್ಲಾ ನಿರೀಕ್ಷೆ?

ರಿಯಲ್‌ಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಉತ್ತಮ ಬೇಡಿಕೆಯಿದೆ. ತನ್ನ ವಿಬಿನ್ನ ಶೈಲಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಎಲ್ಲರಿಂದ ಸೈ ಎನಿಸಿಕೊಂಡಿದೆ. ಇದೀಗ Realme NARZO 70 Pro 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡುವ ಸೂಚನೆ ದೊರೆತಿದೆ.

ಹೌದು, Realme NARZO 70 Pro 5G ಸ್ಮಾರ್ಟ್‌ಫೋನ್‌ ಮಾರ್ಚ್‌ ತಿಂಗಳಿನಲ್ಲಿ ಭಾರತಕ್ಕೆ ಎಂಟ್ರಿ ನೀಡುವುದು ಪಕ್ಕಾ ಆಗಿದೆ. ಇದು ಅಮೆಜಾನ್‌ ಇಂಡಿಯಾ ಮೂಲಕ ಪ್ರತ್ಯೇಕವಾಗಿ ಮಾರಾಟವಾಗಲಿದೆ ಎಂದು ರಿಯಲ್‌ಮಿ ಕಂಪೆನಿ ಹೇಳಿಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಹಾಗಾದ್ರೆ Realme NARZO 70 Pro 5G ಪೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ರಿಯಲ್‌ಮಿ ನಾರ್ಜೋ 70 ಪ್ರೊ 5G ಸ್ಮಾರ್ಟ್‌ಫೋನ್‌ ಎಂಟ್ರಿಗೆ ಮುಹೂರ್ತ ಫಿಕ್ಸ್‌!

Realme NARZO 70 Pro 5G ಫೀಚರ್ಸ್‌ ನಿರೀಕ್ಷೆ ಹೇಗಿದೆ?
Realme NARZO 70 Pro 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ 405 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದರೊಂದಿಗೆ ಡಿಸ್‌ಪ್ಲೇಯು 120 Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.

Realme NARZO 70 Pro 5G ಪ್ರೊಸೆಸರ್‌ ಯಾವುದು?
Realme NARZO 70 Pro 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ನಲ್ಲಿ ಬರಲಿದೆ. ಇದರೊಂದಿಗೆ 8GB ವರ್ಚುವಲ್ RAM ಬೆಂಬಲಿಸಲಿದ್ದು, ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

Realme NARZO 70 Pro 5G ಕ್ಯಾಮೆರಾ ಸೆಟಪ್‌ ಏನಿದೆ?
Realme NARZO 70 Pro 5G ಸ್ಮಾರ್ಟ್‌ಫೋನ್‌ ಲಾಂಚ್ ಮೈಕ್ರೋ-ಸೈಟ್ ಅಮೆಜಾನ್‌ನಲ್ಲಿ ಸಹ ಲೈವ್ ಆಗಿದೆ. ಇದರಲ್ಲಿ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಇರಲಿದೆ ಎನ್ನಲಾಗಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX890 ಸೆನ್ಸಾರ್‌ ಹೊಂದಿದೆ ಎಂದು ತಿಳಿಸುತ್ತದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರಲಿದೆ.

Realme NARZO 70 Pro 5G ಬ್ಯಾಟರಿ ಮತ್ತು ಇತರೆ
Realme NARZO 70 Pro 5G ಸ್ಮಾರ್ಟ್‌ಫೋನ್‌ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಹೊಂದಿರಲಿದೆ.

Realme NARZO 70 Pro 5G ಬೆಲೆ ಮತ್ತು ಲಭ್ಯತೆ
Realme NARZO 70 Pro 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಮಾರ್ಚ್ 6 ರಂದು ಪ್ರಾರಂಭವಾಗಲಿದೆ. ಈ ಸ್ಮಾರ್ಟ್‌ಫೋನಿನ ಕಲರ್ ಆಯ್ಕೆಗಳು ಹಾಗೂ ಬೆಲೆ ವಿವರಗಳು ಇನ್ನು ಸಹ ಬಹಿರಂಗವಾಗಿಲ್ಲ. ಆದರೆ ಇದು ಮಿಡ್‌ ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಸುವುದಕ್ಕೆ ಸಾಧ್ಯವಿದೆ ಎಂದು ಅಂದಾಜಿಸಲಾಗಿದೆ.

ಇದು ಅಮೆಜಾನ್‌ ಇಂಡಿಯಾ ಮೂಲಕ ಪ್ರತ್ಯೇಕವಾಗಿ ಮಾರಾಟವಾಗಲಿದೆ ಎಂದು ರಿಯಲ್‌ಮಿ ಕಂಪೆನಿ ಹೇಳಿಕೊಂಡಿದೆ.

Best Mobiles in India

English summary
Realme NARZO 70 Pro Smartphone India Launch Confirmed: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+