ಹೊಸ ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಎಂಟ್ರಿ ಕೊಟ್ಟ ರಿಯಲ್‌ಮಿ ನಾರ್ಜೊ N53!
ರಿಯಲ್‌ಮಿ ನಾರ್ಜೊ N53 ಸ್ಮಾರ್ಟ್‌ಫೋನ್ ಈಗಾಗಲೇ ಮೊಬೈಲ್ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸದ್ಯ ಇದೀಗ ಇದರ ಹೊಸ ಸ್ಟೋರೇಜ್ ಆವೃತ್ತಿಯು ಮಾರುಕಟ್ಟೆಗೆ ಎಂಟ್ರಿ ನೀಡಿದೆ. ತನ್ನ ಹೊಸ 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಪರಿಚಯಿಸಿದೆ. ಇದು 90Hz ಮಿನಿ ಕ್ಯಾಪ್ಸುಲ್ ಡಿಸ್‌ಪ್ಲೇಯನ್ನು ಹೊಂದಿದೆ.
ಹೌದು, ರಿಯಲ್‌ಮಿ ನಾರ್ಜೊ N53 ಸ್ಮಾರ್ಟ್‌ಫೋನ್‌ನ ಹೊಸ 8GB RAM + 128GB ಸ್ಟೋರೇಜ್ ಆಯ್ಕೆಯು ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಸೂಪರ್‌ವೂಕ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೋ N53 ಡಿಸ್‌ಪ್ಲೇ ಹೇಗಿದೆ?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 180Hz ಟಚ್ ಸ್ಯಾಂಪ್ಲಿಂಗ್ ರೇಟ್, 450 ನೀಟ್ಸ್ ಬ್ರೈಟ್‌ನೆಸ್ ಜೊತೆಗೆ 90.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.
ರಿಯಲ್‌ಮಿ ನಾರ್ಜೋ N53 ಪ್ರೊಸೆಸರ್ ಸಾಮರ್ಥ್ಯ?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೊಕ್ T612 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಿದೆ.

ರಿಯಲ್‌ಮಿ ನಾರ್ಜೋ N53 ಕ್ಯಾಮೆರಾ ಸೆಟ್‌ಅಪ್
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ.
ರಿಯಲ್‌ಮಿ ನಾರ್ಜೋ N53 ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, USB ಟೈಪ್-C ಚಾರ್ಜಿಂಗ್ ಪೋರ್ಟ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ರಿಯಲ್‌ಮಿ ನಾರ್ಜೋ N53 ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್‌ನ ಹೊಸ ಆವೃತ್ತಿ 8GB + 128GB ಆಯ್ಕೆಯ ಬೆಲೆ 11,999 ರೂ.ಆಗಿದೆ. ಇದರ ಖರೀದಿಯ ಮೇಲೆ ಫ್ಲಾಟ್ 1000ರೂ ರಿಯಾಯಿತಿಯನ್ನು ಸಹ ನೀಡಲಾಗ್ತಿದೆ. ಇದಲ್ಲದೆ ಹೆಚ್ಚುವರಿಯಾಗಿ, ಕೂಪನ್ ಅಥವಾ ಬ್ಯಾಂಕ್ ಕೊಡುಗೆಯನ್ನು ಬಳಸಿಕೊಂಡು ಖರೀದಿದಾರರು 1000ರೂ ರಿಯಾಯಿತಿಯನ್ನು ಸಹ ಪಡೆಯಬಹುದು.
ಇನ್ನು ಇತ್ತೀಚಿಗೆ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್ ಸರಣಿ ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ. ಭಾರಿ ಪ್ರಮಾಣದಲ್ಲಿ ಸೇಲ್ ಆಗುವ ಮೂಲಕ ಹೊಸ ಇತಿಹಾಸವನ್ನು ಬರೆದಿದೆ. ಇದರಲ್ಲಿ ಕೇವಲ 26 ನಿಮಿಷಗಳಲ್ಲಿ 100% ಚಾರ್ಚ್ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಕೂಡ ಸೇರಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಸಹ ಒಳಗೊಂಡಿದೆ.


Click it and Unblock the Notifications








