64ಎಂಪಿ ಕ್ಯಾಮೆರಾದ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರು ಖುಷ್!
ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ತಾಣವು ಈಗ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಆಯೋಜಿಸಿ ಗ್ರಾಹಕರನ್ನು ಸೆಳೆದಿದೆ. ಈ ಮಾರಾಟದಲ್ಲಿ ದುಬಾರಿ ಹಾಗೂ ಅಗ್ಗದ ಬೆಲೆಯ ಮೊಬೈಲ್‌ಗಳು ಭರ್ಜರಿ ರಿಯಾಯಿತಿ ಪಡೆದಿದ್ದು, ಆ ಪೈಕಿ ರಿಯಲ್‌ಮಿ ನಾರ್ಜೊ N55 ಮೊಬೈಲ್ ಕೂಡಾ ಸಖತ್ ಡಿಸ್ಕೌಂಟ್ ಪಡೆದಿದೆ.
ಹೌದು, ಅಮೆಜಾನ್ ತಾಣದ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ರಿಯಲ್‌ಮಿ ನಾರ್ಜೊ N55 ಫೋನ್ ಶೇ. 13% ರಷ್ಟು ಡಿಸ್ಕೌಂಟ್ ಪಡೆದಿದ್ದು, 6GB + 128GB ವೇರಿಯಂಟ್ ಫೋನ್ 12,999 ರೂ. ಗಳ ಬೆಲೆಯಲ್ಲಿ ಲಭ್ಯ ಇದೆ. ಇದರೊಂದಿಗೆ ಬ್ಯಾಂಕ್ ಆಫರ್, ಎಕ್ಸ್‌ಚೇಂಜ್ ಕೊಡುಗೆ ಹಾಗೂ ಇತರೆ ಆಫರ್ ಸೇರಿದರೆ ಈ ಫೋನ್ ಅನ್ನು 7,999ರೂ. ಗಳಿಗೆ ಖರೀದಿಸಬಹುದು.

ಇನ್ನು ಈ ಫೋನ್ 4GB + 64GB ಮತ್ತು 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್ ಪವರ್ ಪಡೆದುಕೊಂಡಿದೆ. ಹಾಗಾದರೇ ಇನ್ನುಳಿದಂತೆ ರಿಯಲ್‌ಮಿ ನಾರ್ಜೊ N55 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ
ರಿಯಲ್‌ಮಿ ನಾರ್ಜೊ N55 ಮೊಬೈಲ್ 6.72 ಇಂಚಿನ IPS LCD ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಸಹ ಮಾಡಲಿದೆ. ಇನ್ನು ಸ್ಮಾರ್ಟ್‌ಫೋನ್ ಕ್ಯಾಮರಾ ಪಂಚ್-ಹೋಲ್ ಕಟೌಟ್ ಹೊಂದಿದೆ.
ಪ್ರೊಸೆಸರ್ ಕಾರ್ಯವೈಖರಿಯ ಮಾಹಿತಿ
ರಿಯಲ್‌ಮಿ ನಾರ್ಜೊ N55 ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್ ಆಗಲಿದೆ. ಅಲ್ಲದೇ ಈ ಫೋನ್ 4GB + 64GB ಮತ್ತು 6GB RAM + 128 GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆ ಪಡೆದಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ ಹೀಗಿದೆ
ರಿಯಲ್‌ಮಿ ನಾರ್ಜೊ N55 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಎಷ್ಟಿದೆ
ರಿಯಲ್‌ಮಿ ನಾರ್ಜೊ N55 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದ್ದು, ಇದರ ಜೊತೆಗೆ 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಕೇವಲ 29 ನಿಮಿಷಗಳಲ್ಲಿ 0 ದಿಂದ 50% ವರೆಗೆ ಚಾರ್ಜ್ ಮಾಡಬಹುದು.
ಹಾಗೆಯೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಪಡೆದಿದ್ದು, ಇದರೊಂದಿಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ ಬ್ಲೂ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಬಹುದು.


Click it and Unblock the Notifications








