ಗ್ರಾಹಕರೇ ಗಮನಿಸಿ!..ಈ ರಿಯಲ್‌ಮಿ ಫೋನಿಗೆ ಬಿಗ್ ಡಿಸ್ಕೌಂಟ್!
ಹಬ್ಬಗಳ ಪ್ರಯುಕ್ತ ಅಮೆಜಾನ್ ಇ ಕಾಮರ್ಸ್ ತಾಣವು ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ವನ್ನು (Amazon Great Indian Festival sale) ಘೋಷಿಸಿದೆ. ಈ ಸೇಲ್ ಮೇಳದಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ ನಾರ್ಜೋ N53 ಫೋನ್ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ನೀಡಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಆಯೋಜಿಸಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಲ್ಲಿ ರಿಯಲ್‌ಮಿ ನಾರ್ಜೋ N53 ಫೋನ್ ಶೇ. 18% ರಷ್ಟು ರಿಯಾಯತಿ ಪಡೆದಿದ್ದು, 8,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಇತರೆ ಕೆಲವು ಕೊಡುಗೆಗಳು ಲಭ್ಯವಾಗಲಿದ್ದು ಗ್ರಾಹಕರು 7,999ರೂ. ಗಳಿಗೆ ಖರೀದಿಸಲು ಅವಕಾಶ ಇದೆ.

ಅಂದಹಾಗೆ ಈ ಫೋನ್ ಆಕ್ಟಾ-ಕೋರ್ ಯುನಿಸೊಕ್ T612 SoC ಪ್ರೊಸೆಸರ್ ಹೊಂದಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗಾದರೇ ರಿಯಲ್‌ಮಿ ನಾರ್ಜೋ N53 ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ ಹೀಗಿದೆ
ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 450 ನೀಟ್ಸ್ ಬ್ರೈಟ್‌ನೆಸ್ ನೀಡಲಿದ್ದು, 90.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ ಎಷ್ಟು
ರಿಯಲ್‌ಮಿ ನಾರ್ಜೋ N53 ಫೋನ್ ಆಕ್ಟಾ-ಕೋರ್ ಯುನಿಸೊಕ್ T612 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ 128GB ROM ಮತ್ತು ಹೆಚ್ಚುವರಿ 6GB ವರ್ಚುವಲ್ RAM ಅನ್ನು ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಮಿನಿ ಕ್ಯಾಪ್ಸುಲ್ ಫೀಚರ್ಸ್ ಅನ್ನು ಪಡೆದಿದೆ.
ಡ್ಯುಯಲ್ ಕ್ಯಾಮೆರಾ ರಚನೆ
ರಿಯಲ್‌ಮಿ ಕಂಪನಿಯ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ದ್ವಿತೀಯ ಕ್ಯಾಮೆರಾ 2MP ಸೆನ್ಸಾರ್ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ.
ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ
ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 33W ವೈರ್ಡ್ ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ 30 ನಿಮಿಷಗಳಲ್ಲಿ 0% ನಿಂದ 50% ವರೆಗೆ ಚಾರ್ಜ್ ಮಾಡಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಸಪೋರ್ಟ್ ಇದೆ.
ಮೆಮೊರಿ ಹಾಗೂ ಕಲರ್
ಭಾರತದಲ್ಲಿ ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ಮಾದರಿ ಹಾಗೂ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಫೆದರ್ ಬ್ಲಾಕ್ ಮತ್ತು ಫೆದರ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








