ರಿಯಲ್‌ಮಿ ಸಂಸ್ಥೆಯ ಈ ಎಂಟ್ರಿ ಲೆವೆಲ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!
ಜನಪ್ರಿಯ ಇ ಕಾಮರ್ಸ್ ದೈತ್ಯ ತಾಣ ಅಮೆಜಾನ್ ಇದೀಗ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಆಯೋಜಿಸಿ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಸೇಲ್‌ನಲ್ಲಿ ಕೆಲವು ಆಯ್ದ ಜನಪ್ರಿಯ ಫೋನ್‌ಗಳು ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಕಡಿಮೆ ಪ್ರೈಸ್‌ಟ್ಯಾಗ್‌ನ ಟಾಪ್ ಫೋನ್‌ಗಳಲ್ಲಿ ಒಂದಾದ ರಿಯಲ್‌ಮಿ ನಾರ್ಜೊ N55 ಮೊಬೈಲ್ ಕೂಡಾ ಸಖತ್ ಡಿಸ್ಕೌಂಟ್ ಪಡೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ ನಾರ್ಜೊ N55 ಮೊಬೈಲ್ ಶೇ. 27% ರಷ್ಟು ನೇರ ಡಿಸ್ಕೌಂಟ್ ಹೊಂದಿದೆ. ಈ ಫೋನಿನ 64GB ROM ಸ್ಟೋರೇಜ್ ವೇರಿಯಂಟ್ 7,999ರೂ. ಗಳ ದರದಲ್ಲಿ ಖರೀದಿಗೆ ಲಭ್ಯ. ಹಾಗೆಯೇ ವೆಬ್‌ಸೈಟ್‌ನಲ್ಲಿ ಲಭ್ಯ ಇರುವ ಬ್ಯಾಂಕ್ ಡಿಸ್ಕೌಂಟ್ ಪಡೆದುಕೊಂಡರೆ, ಇನ್ನಷ್ಟು ಆಫರ್ ಬೆಲೆಗೆ ಫೋನ್ ಖರೀದಿಸಲು ಅವಕಾಶ ಇದೆ.

ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಹಾಗೆಯೇ ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ N55 ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ N55 - ಫೀಚರ್ಸ್
ರಿಯಲ್‌ಮಿ ನಾರ್ಜೊ N55 ಮೊಬೈಲ್ 6.72 ಇಂಚಿನ IPS LCD ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಸಹ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ಯಾಮರಾ ಪಂಚ್-ಹೋಲ್ ಕಟೌಟ್ ಪಡೆದಿದೆ.
ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್ ಆಗಲಿದೆ. ಅಲ್ಲದೇ ಈ ಫೋನ್ 4GB + 64GB ಮತ್ತು 6GB RAM + 128 GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆ ಒಳಗೊಂಡಿದೆ.
ರಿಯಲ್‌ಮಿ ನಾರ್ಜೊ N55 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ರಿಯಲ್‌ಮಿ ಕಂಪನಿಯ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದ್ದು, ಇದರ ಜೊತೆಗೆ ಈ ಫೋನ್ 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಹೀಗಾಗಿ ಈ ಮೊಬೈಲ್ ಕೇವಲ 29 ನಿಮಿಷಗಳಲ್ಲಿ 0 ದಿಂದ 50% ವರೆಗೆ ಚಾರ್ಜ್ ಮಾಡಬಹುದು.
ಹಾಗೆಯೇ ಇದು ಕನೆಕ್ಟಿವಿಟಿ ಸೌಲಭ್ಯ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಪಡೆದಿದ್ದು, ಇದರೊಂದಿಗೆ ಈ ಮೊಬೈಲ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ ಬ್ಲೂ ಹಾಗೂ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಮಾಡಬಹುದು.


Click it and Unblock the Notifications








