Realme:ಭಾರಿ ಸದ್ದು ಮಾಡಿದ್ದ ಈ ಸ್ಮಾರ್ಟ್‌ಫೋನ್ ಮೇಲೆ ಇದೀಗ ಭಾರಿ ರಿಯಾಯಿತಿ! ಇನ್ಯಾಕೆ ತಡ ಕೂಡಲೇ ಖರೀದಿಸಿ!
ಅಮೆಜಾನ್ ಸೇಲ್‌ನಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್‌ನಲ್ಲಿ ಲಭ್ಯವಾಗುತ್ತಿವೆ. ಈ ಸಾಲಿನಲ್ಲಿ ಇದೇ ವರ್ಷ ಬಿಡುಗಡೆಯಾಗಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಕೂಡ ವಿಶೇಷ ರಿಯಾಯಿತಿ ಪಡೆದುಕೊಂಡಿದೆ. ಡಿಸ್ಕೌಂಟ್‌ನಲ್ಲಿ ಫೋನ್ ಖರೀದಿಸಬೇಕೆಂದುಕೊಂಡವರಿಗೆ ಇದು ಬೆಸ್ಟ್ ಟೈಂ ಆಗಿದೆ.
ಹೌದು, ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ ಬರೋಬ್ಬರಿ 27% ಡಿಸ್ಕೌಂಟ್ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್‌ನ M.R.P. ಬೆಲೆಗಿಂತ ಕಡಿಮೆ ಬೆಲೆಗೆ ಲಭ್ಯವಾಗಲಿದೆ. ಇದಲ್ಲದೆ ನೋ ಕಾಸ್ಟ್ ಇಎಂಐ ಸೌಲಭ್ಯವನ್ನು ಸಹ ನೀಡಲಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಯುನಿಸಾಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಡಿಸ್ಕೌಂಟ್ ನಂತರದ ಬೆಲೆ ಎಷ್ಟಿದೆ? ಯಾವ ಸ್ಟೋರೇಜ್ ಆಯ್ಕೆಗೆ ಡಿಸ್ಕೌಂಟ್ ಸಿಗುತ್ತಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಕೌಂಟ್ ನಂತರದ ಬೆಲೆ ಎಷ್ಟು?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್‌ನ 4GB RAM ಮತ್ತು 64GB ಸ್ಟೊರೇಜ್ ಆಯ್ಕೆಯು ಅಮೆಜಾನ್ ತಾಣದಲ್ಲಿ 10,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಆದರೆ ಇದೀಗ ಈ ಸ್ಮಾರ್ಟ್‌ಫೋನ್ ಮೇಲೆ 27% ಡಿಸ್ಕೌಂಟ್ ಲಭ್ಯವಾಗುತ್ತಿದೆ. ಆದರಿಂದ ಇದನ್ನು ನೀವು ಕೇವಲ 7,999ರೂ ಗಳಿಗೆ ಖರೀದಿಸಲು ಸಾಧ್ಯವಾಗಲಿದೆ. ಇದರ ಜೊತೆಗೆ ನೋ ಕಾಸ್ಟ್ ಇಎಂಐ ಆಯ್ಕೆಯು ಕೂಡ ದೊರೆಯಲಿದೆ.
ರಿಯಲ್‌ಮಿ ನಾರ್ಜೋ N53 ಡಿಸ್‌ಪ್ಲೇ ಹೇಗಿದೆ?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ 450 ನೀಟ್ಸ್ ಬ್ರೈಟ್‌ನೆಸ್ ನೀಡಲಿದ್ದು, 90.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.

ರಿಯಲ್‌ಮಿ ನಾರ್ಜೋ N53 ಪ್ರೊಸೆಸರ್ ಯಾವುದು?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಯುನಿಸೊಕ್ T612 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಮಿನಿ ಕ್ಯಾಪ್ಸುಲ್ ಫೀಚರ್ಸ್ ಅನ್ನು ಸಹ ನೀಡಲಾಗಿದೆ.
ರಿಯಲ್‌ಮಿ ನಾರ್ಜೋ N53 ಕ್ಯಾಮೆರಾ ಸೆಟ್‌ಅಪ್ ಎಷ್ಟಿದೆ?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ಇದರ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಇದರೊಂದಿಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಸಹ ನೀಡಲಾಗಿದೆ.

ರಿಯಲ್‌ಮಿ ನಾರ್ಜೋ N53 ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ 30 ನಿಮಿಷಗಳಲ್ಲಿ 0% ನಿಂದ 50% ವರೆಗೆ ಚಾರ್ಜ್ ಮಾಡಬಹುದಾಗಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಫೆದರ್ ಬ್ಲಾಕ್ ಮತ್ತು ಫೆದರ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








