ಭಾರತದಲ್ಲಿ ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ ಎಷ್ಟು?
ಭಾರತದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಲಾಂಚ್ ಆಗಿದೆ. ಸದ್ಯ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿರುವ ರಿಯಲ್‌ಮಿ ನಾರ್ಜೋ N53 ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸಾಕ್ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೈರ್ಡ್ SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೋ N53 ಡಿಸ್‌ಪ್ಲೇ ರಚನೆ ವಿನ್ಯಾಸ
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 450 ನೀಟ್ಸ್ ಬ್ರೈಟ್‌ನೆಸ್ ನೀಡಲಿದ್ದು, 90.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ.
ರಿಯಲ್‌ಮಿ ನಾರ್ಜೋ N53 ಪ್ರೊಸೆಸರ್ ಯಾವುದು?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಯುನಿಸೊಕ್ T612 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ 128GB ROM ಮತ್ತು ಹೆಚ್ಚುವರಿ 6GB ವರ್ಚುವಲ್ RAM ಅನ್ನು ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಮಿನಿ ಕ್ಯಾಪ್ಸುಲ್ ಫೀಚರ್ಸ್ ಅನ್ನು ಹೊಂದಿದೆ.

ರಿಯಲ್‌ಮಿ ನಾರ್ಜೋ N53 ಕ್ಯಾಮೆರಾ ಸೆಟ್‌ಅಪ್
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಸೆನ್ಸಾರ್ ಪಡೆದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಹೊಂದಿದೆ.
ರಿಯಲ್‌ಮಿ ನಾರ್ಜೋ N53 ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೈರ್ಡ್ ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ 30 ನಿಮಿಷಗಳಲ್ಲಿ 0% ನಿಂದ 50% ವರೆಗೆ ಚಾರ್ಜ್ ಮಾಡಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೋ N53 ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರಿಯಲ್‌ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ಮಾದರಿಯ ಆಯ್ಕೆಯು 8,999ರೂ. ಬೆಲೆಯನ್ನು ಹೊಂದಿದೆ. ಇದರ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು 10,999ರೂ.ಬೆಲೆಯನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್ ಫೆದರ್ ಬ್ಲಾಕ್ ಮತ್ತು ಫೆದರ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಮೇ 22 ರಂದು ಮಾರಾಟಕ್ಕೆ ಬರಲಿದೆ.
ಲಾಂಚ್ ಆಫರ್ ಏನು?
ಇನ್ನು ಈ ಸ್ಮಾರ್ಟ್‌ಫೋನ್ ಲಾಂಚ್ ಆಫರ್‌ನಲ್ಲಿ ವಿಶೇಷ ರಿಯಾಯಿತಿ ಕೂಡ ಲಭ್ಯವಾಗಲಿದೆ. ಇದರಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 1,000ರೂ. ರಿಯಾಯಿತಿ ಸಿಗಲಿದೆ.


Click it and Unblock the Notifications








