ರಿಯಲ್‌ಮಿ ಈ ಸ್ಮಾರ್ಟ್‌ಫೋನ್‌ಗೆ ಈಗ ಭರ್ಜರಿ ಡಿಸ್ಕೌಂಟ್!
ಮೊಬೈಲ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಸಂಸ್ಥೆಯು ಬಜೆಟ್ ರೇಂಜ್‌ನಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ನಾರ್ಜೋ ಸರಣಿಯಲ್ಲಿನ ಮೊಬೈಲ್‌ಗಳು ಗ್ರಾಹಕರನ್ನು ಆಕರ್ಷಿಸಿದ್ದು, ಆ ಪೈಕಿ ರಿಯಲ್‌ಮಿ ನಾರ್ಜೊ N55 ಫೋನ್ ಇದೀಗ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ರಿಯಲ್‌ಮಿ ನಾರ್ಜೊ N55 ಮೊಬೈಲ್ ಶೇ. 33% ರಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 6 GB + 128 GB ವೇರಿಯಂಟ್ ಫೋನ್ ಈಗ 9,999 ರೂ. ಗಳ ರಿಯಾಯಿತಿ ಪ್ರೈಸ್‌ಟ್ಯಾಗ್ ಲಭ್ಯ ಇದೆ. ಹಾಗೆಯೇ ಇದರೊಂದಿಗೆ ಬ್ಯಾಂಕ್ ಆಫರ್ ಸಹ ಖರೀದಿದಾರರಿಗೆ ಸಿಗಲಿವೆ.

ಇನ್ನು ರಿಯಲ್‌ಮಿ ನಾರ್ಜೊ N55 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆನ್ಸಾರ್ ರಚನೆ ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಹಾಗೆಯೇ ಈ ಫೋನ್ 5000 mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೊ N55 ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ N55 ಫೋನ್ 6.72 ಇಂಚಿನ IPS LCD ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಸಹ ಮಾಡಲಿದೆ. ಇನ್ನು ಸ್ಮಾರ್ಟ್‌ಫೋನ್ ಮುಂಭಾಗದಲ್ಲಿ ಪಂಚ್-ಹೋಲ್ ಕ್ಯಾಮರಾ ಕಟೌಟ್ ಪಡೆದಿದೆ.

ರಿಯಲ್‌ಮಿ ಸಂಸ್ಥೆಯ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI ಔಟ್ ಆಫ್ ದಿ ಬಾಕ್ಸ್ ನಲ್ಲಿ ರನ್ ಆಗಲಿದೆ. ಅಲ್ಲದೇ ಈ ಫೋನ್ 4GB + 64 GB ಮತ್ತು 6 GB RAM + 128 GB ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆ ಹೊಂದಿದೆ.
ರಿಯಲ್‌ಮಿ ನಾರ್ಜೊ N55 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ರಿಯಲ್‌ಮಿ ಸಂಸ್ಥೆಯ ಈ ನಾರ್ಜೊ N55 ಮೊಬೈಲ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಪಡೆದಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಕೇವಲ 29 ನಿಮಿಷಗಳಲ್ಲಿ 0 ದಿಂದ 50% ವರೆಗೆ ಚಾರ್ಜ್ ಮಾಡುವ ಸೌಲಭ್ಯ ಪಡೆದುಕೊಂಡಿದೆ.
ಇದಲ್ಲದೇ ಈ ಮೊಬೈಲ್ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಪಡೆದಿದ್ದು, ಇದರೊಂದಿಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಇನ್ನು ಈ ಮೊಬೈಲ್ ಬ್ಲೂ ಹಾಗೂ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಖರೀದಿ ಮಾಡಲು ಅವಕಾಶ ಲಭ್ಯ.


Click it and Unblock the Notifications








