ರಿವೀಲ್ ಆಯ್ತು ರಿಯಲ್‌ಮಿ ಪ್ರಾಜೆಕ್ಟ್ N!..ಲಾಂಚ್ ಡೇಟ್ ಬಹಿರಂಗ!
ಸದಾ ವಿಭಿನ್ನವಾಗಿ ಆಲೋಚಿಸುವ ರಿಯಲ್‌ಮಿ ಕಂಪೆನಿ ಈ ಭಾರಿ ರಿಯಲ್‌ಮಿ N ಪ್ರಾಜೆಕ್ಟ್ ಮೂಲಕ ಭಾರಿ ನಿರೀಕ್ಷೆ ಹುಟ್ಟುಹಾಕಿತ್ತು. ಅದರಂತೆ ರಿಯಲ್‌ಮಿ N ಪ್ರಾಜೆಕ್ಟ್‌ನಲ್ಲಿ ಇದೀಗ ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಭಾರತದಲ್ಲಿ ಇದೇ ಏಪ್ರಿಲ್ 12ಕ್ಕೆ ಲಾಂಚ್ ಆಗಲಿದೆ ಎಂದು ಘೋಷಿಸಿದೆ.
ಹೌದು, ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಭಾರತಕ್ಕೆ ಎಂಟ್ರಿ ನೀಡೋಕೆ ಡೇಟ್ ಫೀಕ್ಸ್ ಆಗಿದೆ. ಅಲ್ಲದೆ ಆನ್‌ಲೈನ್ ಈ ಸ್ಮಾರ್ಟ್‌ಫೋನ್‌ನ ಡಿಸೈನ್ ಹಾಗೂ ಲುಕ್ ಬಹಿರಂಗವಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್ ಮೂಲಕ ಸೇಲ್‌ಗೆ ಬರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್ ನಿರೀಕ್ಷಿಸಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರಿಯಲ್‌ಮಿ ನಾರ್ಜೊ N55 ಫೀಚರ್ಸ್ ನಿರೀಕ್ಷೆ ಏನು?
ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ಅನುಪಾತ 90.5 % ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ.
ರಿಯಲ್‌ಮಿ ನಾರ್ಜೊ N55 ಪ್ರೊಸೆಸರ್ ಯಾವುದು?
ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ v13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ರಿಯಲ್‌ಮಿ ನಾರ್ಜೊ N55 ಕ್ಯಾಮೆರಾ ಸೆಟ್‌ಅಪ್ ನಿರೀಕ್ಷೆ ಏನು?
ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.
ರಿಯಲ್‌ಮಿ ನಾರ್ಜೊ N55 ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಬ್ಲೂಟೂತ್ ಬೆಂಬಲಿಸುವ ನಿರೀಕ್ಷೆ ಮಾಡಲಾಗಿದೆ.

ರಿಯಲ್‌ಮಿ ನಾರ್ಜೊ N55 ಬೆಲೆ ಮತ್ತು ಲಭ್ಯತೆ ನಿರೀಕ್ಷೆ ಏನು?
ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 12 ರಂದು ಬಿಡುಗಡೆಯಾಗಲಿದೆ ಎಂದು ಕಂಪೆನಿ ದೃಡಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB + 64GB, 4GB + 128GB, 6GB + 64GB ಮತ್ತು 6GB + 128GB ಇಂಟರ್ ಸ್ಟೋರೇಜ್ ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ. ಇದು ಪ್ರೈಮ್ ಬ್ಲಾಕ್ ಮತ್ತು ಪ್ರೈಮ್ ಬ್ಲೂ ಬಣ್ಣಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.
ಇದಲ್ಲದೆ ರಿಯಲ್‌ಮಿ ಕಂಪೆನಿ ರಿಯಲ್‌ಮಿ GT ನಿಯೋ 5 SE ಸ್ಮಾರ್ಟ್‌ಫೋನ್ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1,240x2,772 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.


Click it and Unblock the Notifications








