Home
ಸುದ್ದಿಜಾಲ

ಟ್ರೆಂಡ್‌ ಸೃಷ್ಟಿಸಿದ್ದ ರಿಯಲ್‌ಮಿ ನಾರ್ಜೊ N55 ಬಿಡುಗಡೆ! ಬೆಲೆ ಎಷ್ಟು?

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಬಹು ನಿರೀಕ್ಷಿತ ರಿಯಲ್‌ಮಿ ನಾರ್ಜೊ N55 ಬಿಡುಗಡೆಯಾಗಿದೆ. ಡಿಸೈನ್‌ ಹಾಗೂ ಫೀಚರ್ಸ್‌ ಲೀಕ್‌ನಿಂದ ಸಾಕಷ್ಟು ಗಮನಸೆಳೆದಿದ್ದ ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುವ ಸೂಚನೆ ನೀಡಿದೆ. ಅದರಲ್ಲೂ ಈ ಸ್ಮಾರ್ಟ್‌ಫೋನ್‌ ಮಿನಿ ಕ್ಯಾಪ್ಸುಲ್‌ ಫೀಚರ್ಸ್‌ನಲ್ಲಿ ಬಂದಿರುವುದು ಮೇನ್‌ ಹೈಲೈಟ್‌ ಆಗಿದೆ.

ಹೌದು, ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟ್ರೆಂಡ್‌ ಸೃಷ್ಟಿಸಿದ್ದ ರಿಯಲ್‌ಮಿ ನಾರ್ಜೊ N55 ಬಿಡುಗಡೆ! ಬೆಲೆ ಎಷ್ಟು?

ರಿಯಲ್‌ಮಿ ನಾರ್ಜೊ N55 ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ 6.72 ಇಂಚಿನ IPS LCD ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಮಿನಿ ಕ್ಯಾಪ್ಸುಲ್‌ ಫೀಚರ್ಸ್‌ ಅನ್ನು ಹೊಂದಿದ್ದು, "ಡಿಸ್ಪ್ಲೇಯನ್ನು ಮನಬಂದಂತೆ ಸೆಟ್‌ ಮಾಡಲು ಅವಕಾಶ ನೀಡಲಿದೆ. ಜೊತೆಗೆ ಕ್ಯಾಮರಾ ಪಂಚ್-ಹೋಲ್ ಕಟೌಟ್ ಸುತ್ತಲೂ ಸುತ್ತುತ್ತದೆ. ಆದರೆ ಚಾರ್ಜಿಂಗ್, ಡೇಟಾ ಬಳಕೆ ಮತ್ತು ಸ್ಟೆಪ್ಸ್‌ ಕೌಂಟ್‌ಗೆ ನೋಟಿಫೀಕೇಶನ್‌ಗಳನ್ನು ನೀಡಲಿದೆ.

ರಿಯಲ್‌ಮಿ ನಾರ್ಜೊ N55 ಪ್ರೊಸೆಸರ್‌ ಯಾವುದು?

ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ Realme UI ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್‌ ಆಗಲಿದೆ. ಹಾಗೆಯೇ 4GB + 64GB ಮತ್ತು 6GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ.

ಟ್ರೆಂಡ್‌ ಸೃಷ್ಟಿಸಿದ್ದ ರಿಯಲ್‌ಮಿ ನಾರ್ಜೊ N55 ಬಿಡುಗಡೆ! ಬೆಲೆ ಎಷ್ಟು?

ರಿಯಲ್‌ಮಿ ನಾರ್ಜೊ N55 ಕ್ಯಾಮೆರಾ ಸೆಟ್‌ಅಪ್‌

ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ N55 ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್‌ವೂಕ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಕೇವಲ 29 ನಿಮಿಷಗಳಲ್ಲಿ 0 ದಿಂದ 50%ವರೆಗೆ ಚಾರ್ಜ್ ಮಾಡಬಹುದು ಎಂದು ರಿಯಲ್‌ಮಿ ಕಂಪೆನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ.

ಟ್ರೆಂಡ್‌ ಸೃಷ್ಟಿಸಿದ್ದ ರಿಯಲ್‌ಮಿ ನಾರ್ಜೊ N55 ಬಿಡುಗಡೆ! ಬೆಲೆ ಎಷ್ಟು?

ರಿಯಲ್‌ಮಿ ನಾರ್ಜೊ N55 ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ ನಾರ್ಜೊ N55 ಸ್ಮಾರ್ಟ್‌ಫೋನ್‌ 4GB RAM + 64GB ರೂಪಾಂತರದ ಆಯ್ಕೆಗೆ 10,999ರೂ. ಬೆಲೆಯನ್ನು ಹೊಂದಿದೆ. ಇದರ 6GB RAM + 128GB ರೂಪಾಂತರದ ಆಯ್ಕೆಯು 12,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್ 18 ರಂದು ತನ್ನ ಫಸ್ಟ್‌ ಸೇಲ್‌ ನಡೆಸಲಿದೆ. ಇದರ ನಡುವೆಯೂ ರಿಯಲ್‌ಮಿ ಕಂಪೆನಿ ವಿಶೇಷ ಲೈವ್ ಆನ್‌ಲೈನ್ ಮಾರಾಟವನ್ನು ಏಪ್ರಿಲ್ 13 ರಂದು ಮಧ್ಯಾಹ್ನ 12 ಗಂಟೆಗೆ ನಿಗದಿಪಡಿಸಿದೆ. ಇನ್ನು ಈ ಆನ್‌ಲೈನ್‌ ಸೇಲ್‌ ಸಮಯದಲ್ಲಿ ಭಾರಿ ಡಿಸ್ಕೌಂಟ್‌ ಕೂಡ ದೊರೆಯಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಪ್ರೈಮ್ ಬ್ಲೂ ಮತ್ತು ಪ್ರೈಮ್ ಬ್ಲಾಕ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Realme Narzo N55 launched in India with the Mini Capsule feature
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+