Home
ಸುದ್ದಿಜಾಲ

ಇತ್ತೀಚಿಗೆ ಬಿಡುಗಡೆ ಆಗಿರುವ ಈ 5G ಫೋನಿಗೆ ಭರ್ಜರಿ ಡಿಸ್ಕೌಂಟ್‌!..50ಎಂಪಿ ಕ್ಯಾಮೆರಾ!

ಅಮೆಜಾನ್‌ ಇ ಕಾಮರ್ಸ್ ತಾಣವು ಇದೀಗ ರಿಯಲ್‌ಮಿ ನಾರ್ಜೋ ವೀಕ್‌ (Realme NARZO WEEK) ಮಾರಾಟ ಮೇಳವನ್ನು ಆಯೋಜಿಸಿದ್ದು, ಈ ಮೇಳವು ಜುಲೈ 3 ರಿಂದ ಜುಲೈ 7 ರ ವರೆಗೆ ಲೈವ್ ಇರಲಿದೆ. ಇನ್ನು ಈ ಸ್ಪೆಷಲ್‌ ಸೇಲ್‌ನಲ್ಲಿ ಆಯ್ದ ರಿಯಲ್‌ಮಿ ನಾರ್ಜೋ ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ಘೋಷಿಸಲಾಗಿದೆ. ಆ ಪೈಕಿ ರಿಯಲ್‌ಮಿ ನಾರ್ಜೋ N65 5G (Realme NARZO N65 5G) ಮೊಬೈಲ್‌ ಕೂಡಾ ಬೊಂಬಾಟ್ ರಿಯಾಯಿತಿ ಪಡೆದಿದ್ದು, ಮೊಬೈಲ್‌ ಪ್ರಿಯರು OMG ಎನ್ನುವಂತೆ ಮಾಡಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಆಯೋಜಿಸಿರುವ ನಾರ್ಜೋ ವೀಕ್‌ ಮಾರಾಟದಲ್ಲಿ ರಿಯಲ್‌ಮಿ ನಾರ್ಜೋ N65 5G (Realme NARZO N65 5G) ಶೇ. 17% ರಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ ಈಗ ಕೊಡುಗೆಯಲ್ಲಿ 12,498ರೂ. ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಹಾಗೆಯೇ ಬ್ಯಾಂಕ್‌ ಆಫರ್‌ ಮತ್ತು ನೋ ಕಾಸ್ಟ್‌ ಇಎಮ್‌ಐ ಕೂಡಾ ಗ್ರಾಹಕರಿಗೆ ಲಭ್ಯ ಆಗಲಿದೆ.

ಇತ್ತೀಚಿಗೆ ಬಿಡುಗಡೆ ಆಗಿರುವ ಈ ಫೋನಿಗೆ ಭರ್ಜರಿ ಡಿಸ್ಕೌಂಟ್‌!..50ಎಂಪಿ ಕ್ಯಾಮೆರಾ!

ಇನ್ನು ನಾರ್ಜೋ ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯದ ಆಯ್ಕೆ ಪಡೆದಿದೆ. ಹಾಗಾದರೆ ನಾರ್ಜೋ N65 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೋ N65 5G - ಫೀಚರ್ಸ್‌

ರಿಯಲ್‌ಮಿ ನಾರ್ಜೋ N65 5G ಫೋನ್‌ 6.67 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌, 89.97 ಪ್ರತಿಶತ ಸ್ಕ್ರೀನ್ ಟು ಬಾಡಿ ಅನುಪಾತ ಹಾಗೂ 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು ಪಂಚ್‌ ಹೋಲ್‌ ಕಟೌಟ್ ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 6300 5G ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಅಲ್ಲದೇ 6GB RAM ಡೈನಾಮಿಕ್ RAM ಸೌಲಭ್ಯ ಸಹ ಈ ಫೋನ್‌ ಪಡೆದಿದೆ. ಇದರೊಂದಿಗೆ 4GB + 12GB ಹಾಗೂ 6GB + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ.

ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ 15W ವೇಗದ ಚಾರ್ಜಿಂಗ್‌ಗೆ ಸೌಲಭ್ಯ ಸಹ ಇದೆ. ಅಲ್ಲದೇ ಕ್ವಿಕ್‌ ಚಾರ್ಜ್‌ ರಿವರ್ಸ್ ಚಾರ್ಜಿಂಗ್ ಪಡೆದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ರಿಯಲ್‌ಮಿ ನಾರ್ಜೋ N65 5G ಫೋನ್ 5G ವೈ-ಫೈ ಮತ್ತು ಬ್ಲೂಟೂತ್ ಸೌಲಭ್ಯ ಹೊಂದಿದ್ದು, ಇದು ಅಂಬರ್ ಗೋಲ್ಡ್ ಮತ್ತು ಡೀಪ್ ಗ್ರೀನ್ ಕಲರ್ ಆಯ್ಕೆ ಪಡೆದುಕೊಂಡಿದೆ.

Best Mobiles in India

English summary
Realme Narzo Week sale: Fabulous deals on Realme NARZO N65 5G: check complete details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+