Realme: ಎಂಟ್ರಿಗೆ ಸಿದ್ದವಾಗಿದೆ ರಿಯಲ್‌ಮಿ ನೋಟ್ 50! ಫೀಚರ್ಸ್ ನಿರೀಕ್ಷೆ ಏನು?
ಮೊಬೈಲ್ ಮಾರುಕಟ್ಟೆಯ ಸನ್ಸೇಷನ್ ಎನಿಸಿಕೊಂಡಿರುವ ರಿಯಲ್‌ಮಿ ಮತ್ತೊಂದು ಹೊಸ ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಅದರಂತೆ ರಿಯಲ್‌ಮಿ ನೋಟ್ 50 ಸ್ಮಾರ್ಟ್‌ಫೋನ್ ಅನ್ನು ಇದೇ ಜನವರಿ 23ರಂದು ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಸ್ಮಾರ್ಟ್‌ಫೋನ್ Unisoc T612SoC ಪ್ರೊಸೆರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, Realme Note 50 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದವಾಗಿದೆ. ಇದೀಗ ಬಿಡುಗಡೆಗೂ ಮುನ್ನವೆ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಎಲ್ಲೆಡೆ ಬಹಿರಂಗವಾಗಿದ್ದು, ಟೆಕ್ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಹಾಗಾದ್ರೆ Realme Note 50 ಸ್ಮಾರ್ಟ್‌ಫೋನ್‌ನ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Realme Note 50 ಡಿಸ್‌ಪ್ಲೇ ನಿರೀಕ್ಷೆ ಏನು?
Realme Note 50 ಸ್ಮಾರ್ಟ್‌ಫೋನ್ 6.7 ಇಂಚಿನ HD+ ಡಿಸ್‌ಪ್ಲೇಯೊಂದಿಗೆ ಬರಲಿದೆ. ಇನ್ನು ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಇರಲಿದೆ. ಇದು 85.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಬೆಂಬಲಿಸಲಿದ್ದು, 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು 260 ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.
Realme Note 50 ಪ್ರೊಸೆಸರ್ ಯಾವುದು?
Realme Note 50 ಸ್ಮಾರ್ಟ್‌ಫೋನ್ Unisoc T612 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ Realme UI T ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ಕೂಡ ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.

Realme Note 50 ಕ್ಯಾಮೆರಾ ಸೆಟಪ್ ಏನಿದೆ?
Realme Note 50 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾವನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಸೆಕೆಂಡರಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ.
Realme Note 50 ಬ್ಯಾಟರಿ ಮತ್ತು ಇತರೆ ಸೌಲಭ್ಯ
Realme Note 50 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರಲಿದೆ.

Realme Note 50 ಬೆಲೆ ಮತ್ತು ಲಭ್ಯತೆ
Realme Note 50 ಸ್ಮಾರ್ಟ್‌ಫೋನ್ ಪ್ರಸ್ತುತ ಫಿಲಿಪೈನ್ಸ್‌ನಲ್ಲಿ ಮಾತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದರ ಬೆಲೆ ವಿವರಗಳು ಮಾತ್ರ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಇದರ ವಿನ್ಯಾಸ ಹಾಗೂ ಫೀಚರ್ಸ್‌ಗಳನ್ನು ಗಮನಿಸಿದರೆ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಬಿಡುಗಡೆ ಅಗುವ ನೀರಿಕ್ಷೆಯನ್ನು ಇಡಲಾಗಿದೆ. ಪ್ರಸ್ತುತ ಶಾಪೀ ಇನ್ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸ್ಕೈ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಪಟ್ಟಿಮಾಡಲಾಗಿದೆ.
ಇನ್ನು ರಿಯಲ್‌ಮಿ ಕಂಪೆನಿ ಭಾರತದಲ್ಲಿ ತನ್ನ ಬಹುನಿರೀಕ್ಷಿತ 12 ಪ್ರೊ 5G ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸರಣಿಯಲ್ಲಿ ರಿಯಲ್‌ಮಿ 12 ಪ್ರೊ ಮತ್ತು ರಿಯಲ್‌ಮಿ 12 ಪ್ರೊ ಪ್ಲಸ್ (Realme 12 Pro and Realme 12 Pro Plus) ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಲಾಗುತ್ತದೆ. ಈ ಸಂಬಂಧ ರಿಯಲ್‌ಮಿಯು ಎಕ್ಸ್ ನಲ್ಲಿ ಮಾಹಿತಿ ನೀಡಿದ್ದು, ಈ ಫೋನ್‌ಗಳನ್ನು ಈ ತಿಂಗಳು ಭಾರತದಲ್ಲಿ ಆರಂಭ ಮಾಡಲಾಗುವುದು ಎಂದು ಉಲ್ಲೇಖಿಸಿದೆ. ಆದರೆ ನಿಖರವಾದ ದಿನಾಂಕವನ್ನು ಮಾತ್ರ ಘೋಷಣೆ ಮಾಡಿಲ್ಲ.


Click it and Unblock the Notifications








