ಇಂದು ರಿಯಲ್‌ಮಿ P1 ಪ್ರೊ 5G ಫೋನಿನ ಫಸ್ಟ್ ಸೇಲ್!..ಸ್ಟೈಲಿಶ್ ಲುಕ್ ಇದೆ!
ರಿಯಲ್‌ಮಿ ಮೊಬೈಲ್ ಕಂಪನಿಯು ನೂತನವಾಗಿ ಲಾಂಚ್ ಮಾಡಿರುವ ರಿಯಲ್‌ಮಿ P1 ಪ್ರೊ 5G ಸ್ಮಾರ್ಟ್‌ಫೋನ್ ಈಗಾಗಲೇ ತನ್ನ ಫೀಚರ್ಸ್ ಮೂಲಕ ಗಮನ ಸೆಳದಿದೆ. ಈ ಫೋನಿನ ಫಸ್ಟ್ ಸೇಲ್ ಇಂದು (ಏಪ್ರಿಲ್ 30 ರಂದು) ಫ್ಲಿಪ್‌ಕಾರ್ಟ್ ತಾಣದ ಮೂಲಕ ಪ್ರಾರಂಭ ಆಗಲಿದೆ. ಇನ್ನು ರಿಯಲ್‌ಮಿ P1 ಪ್ರೊ ಮೊಬೈಲ್ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಬಲದ ಸೌಲಭ್ಯ ಪಡೆದಿರುವುದು ಆಕರ್ಷಕ ಎನಿಸಿದೆ.
ಹೌದು, ರಿಯಲ್‌ಮಿ P1 ಪ್ರೊ 5G ಮೊಬೈಲ್‌ನ ಮೊದಲ ಮಾರಾಟವು ಇಂದು ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಪ್ಲಾಟ್‌ಫಾರ್ಮ್ ಮೂಲಕ ನಡೆಯಲಿದೆ. ಈ ಫೋನ್ 50 ಮೆಗಾಪಿಕ್ಸೆಲ್ OIS ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಪಡೆದಿದೆ. ಅಂದಹಾಗೆ ಈ ಫೋನಿನ 8 GB RAM + 128 GB ವೇರಿಯಂಟ್‌ನ ಆರಂಭಿಕ ಕೊಡುಗೆಯ ಬೆಲೆಯು 21,999 ರೂ. ಆಗಿದೆ. ಹಾಗಾದರೇ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ P1 ಪ್ರೊ 5G ಫೀಚರ್ಸ್
ರಿಯಲ್‌ಮಿ P1 ಪ್ರೊ 5G ಫೋನ್ 6.67 ಇಂಚಿನ ಅಮೋಲೆಡ್ ಕರ್ವ್ ಡಿಸ್‌ಪ್ಲೇ ಪಡೆದಿದ್ದು, ಇದು 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ UI 5 ಅನ್ನು ರನ್ ಮಾಡಲಿದೆ. ಹಾಗೆಯೇ 8 GB RAM + 128 GB ಮತ್ತು 12 GB RAM ಮತ್ತು 256 GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ.
ಇದಲ್ಲದೇ ರಿಯಲ್‌ಮಿ P1 ಪ್ರೊ ಫೋನ್ 50 ಮೆಗಾ ಪಿಕ್ಸೆಲ್ OIS ಸಕ್ರಿಯಗೊಳಿಸಿದ ಮುಖ್ಯ ಸೆನ್ಸರ್ ಅನ್ನು ಪಡೆದಿದೆ. ಇದರ ಜೊತೆಗೆ 8 ಮೆಗಾ ಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ರಚನೆ ಪಡೆದಿದ್ದು, 2 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ತೃತೀಯ ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಅಲ್ಲದೆ ಈ ಫೋನ್ ಸಹ 45 W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಕೂಡಾ ಹೊಂದಿದೆ.
ರಿಯಲ್‌ಮಿ P1 ಫೀಚರ್ಸ್
ರಿಯಲ್‌ಮಿ P1 ಫೋನ್ 6.67 ಇಂಚಿನ ಅಮೋಲೆಡ್ FHD+ ಡಿಸ್‌ಪ್ಲೇ ಹೊಂದಿದ್ದು, 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ 2,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಪ್ರಮುಖವಾಗಿ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದೆ.
ರಿಯಲ್‌ಮಿ P1 ಫೋನ್ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಜೊತೆಗೆ 50 ಮೆಗಾ ಪಿಕ್ಸೆಲ್ ಪ್ರೈಮರಿ ಸೆನ್ಸರ್ ಮತ್ತು 2 ಮೆಗಾ ಪಿಕ್ಸೆಲ್ ತೃತೀಯ ಸೆನ್ಸರ್ ನೊಂದಿಗೆ 8 ಮೆಗಾ ಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸರ್ ಅನ್ನು ಈ ಫೋನ್‌ನಲ್ಲಿ ಇದೆ. ಹಾಗೆಯೇ 45W ವೇಗದ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಇದೆ.
ಅಂದಹಾಗೆ ರಿಯಲ್‌ಮಿ P1 ಪ್ರೊ 5G ಫೋನಿನ 8 GB RAM ಮತ್ತು 128 GB ಸ್ಟೋರೇಜ್ ವೇರಿಯಂಟ್ ಹಾಗೂ 8 GB RAM ಮತ್ತು 256 GB ಸ್ಟೋರೇಜ್ ಆಯ್ಕೆಯ ವೇರಿಯಂಟ್‌ನಲ್ಲಿ ಲಭ್ಯ. ಹಾಗೆಯೇ ರಿಯಲ್‌ಮಿ P1 ಫೋನಿನ 6GB RAM ಮತ್ತು 128 GB ವೇರಿಯಂಟ್‌ಗೆ ಹಾಗೂ 8 GB RAM ಮತ್ತು 128 GB RAM ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ.


Click it and Unblock the Notifications








