Realme P1 Speed 5G ಈಗ ಖರೀದಿಗೆ ಲಭ್ಯ; ಜಬರ್ದಸ್ತ್ ಫೀಚರ್ಸ್..ಬೆಲೆ ಎಷ್ಟು?
ರಿಯಲ್‌ಮಿ ಮೊಬೈಲ್ ಸಂಸ್ಥೆಯು ಬಿಡುಗಡೆ ಮಾಡಿರುವ ನೂತನ ರಿಯಲ್‌ಮಿ P1 Speed 5G ( Realme P1 Speed 5G ) ಸ್ಮಾರ್ಟ್‌ಫೋನಿನ ಫಸ್ಟ್ ಸೇಲ್ ಈಗ (ಅಕ್ಟೋಬರ್ 20 ರಿಂದ) ಪ್ರಾರಂಭ ಆಗಿದೆ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಹಾಗೂ ರಿಯಲ್‌ಮಿ ವೆಬ್‌ಸೈಟ್ ಮೂಲಕ ಖರೀದಿ ಮಾಡಬಹುದು. ಅಂದಾಹಗೆ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.
ಹೌದು, ರಿಯಲ್‌ಮಿ P1 Speed 5G ( Realme P1 Speed 5G ) ಮೊಬೈಲ್ ಇದೀಗ ಖರೀದಿಗೆ ಲಭ್ಯ ಇದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಇನ್ನು ಈ ಮೊಬೈಲ್‌ನ ಆರಂಭಿಕ ಕೊಡುಗೆಯ ಬೆಲೆಯು 15,999ರೂ. ಆಗಿದೆ.

ಹಾಗೆಯೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇದರ ಜೊತೆಗೆ 8GB + 128GB ಹಾಗೂ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಈ ಫೋನ್ ಹೊಂದಿದೆ. ಇನ್ನುಳಿದಂತೆ ಈ ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬ್ನನಿರಿ. ಮುಂದೆ ಓದಿರಿ.
ರಿಯಲ್‌ಮಿ P1 ಸ್ಪೀಡ್ 5G - ಹೀಗಿವೆ
ರಿಯಲ್‌ಮಿ P1 ಸ್ಪೀಡ್ 5G ಮೊಬೈಲ್ 6.67 ಇಂಚಿನ AMOLED ಡಿಸ್‌ಪ್ಲೇಯನ್ನು ಪಡೆದಿದೆ. ಈ ಡಿಸ್‌ಪ್ಲೇ 2400 ×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, ರೇನ್ ವಾಟರ್ ಸ್ಮಾರ್ಟ್ ಟಚ್ ಹಾಗೂ ಪಾಂಡಾ ಗ್ಲಾಸ್ ಪ್ರೊಕೆಕ್ಷನ್ ಸೌಲಭ್ಯ ಹೊಂದಿದೆ.
ರಿಯಲ್‌ಮಿ P1 ಸ್ಪೀಡ್ 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಪವರ್ ಪಡೆದಿದ್ದು, ಜೊತೆಗೆ ಇದು ಮಾಲಿ-G615 MC2 GPU ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 8GB RAM / 12GB ಮತ್ತು 128GB RAM / 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.
ರಿಯಲ್‌ಮಿ P1 ಸ್ಪೀಡ್ 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಸೆನ್ಸಾರ್ ಪಡೆದಿದೆ. ಇದರ ಜೊತೆಗೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಒದಗಿಸಲಾಗಿದೆ.
ರಿಯಲ್‌ಮಿ P1 ಸ್ಪೀಡ್ 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಅಲ್ಲದೇ ಇದು ಬ್ಲೂಟೂತ್ 5.4, ಬೀಡೌ, GPS, GLONASS, ಗೆಲಿಲಿಯೋ, QZSS, USB ಟೈಪ್-ಸಿ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.
ಬೆಲೆ ಮತ್ತು ಲಭ್ಯತೆ ಮಾಹಿತಿ
ನೂತನ ರಿಯಲ್‌ಮಿ P1 ಸ್ಪೀಡ್ 5G (realme P1 Speed 5G) ಮೊಬೈಲ್ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯು 17,999ರೂ. ಬೆಲೆಯನ್ನು ಪಡೆದಿದೆ. ಇನ್ನು ಇದರ 12GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯು 20,999ರೂ. ಪ್ರೈಸ್‌ಟ್ಯಾಗ್ ಅನ್ನು ಪಡೆದಿದೆ.


Click it and Unblock the Notifications








