Home
ಸುದ್ದಿಜಾಲ

ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ Realme P1 Speed 5G ಫೋನ್‌; ಜಬರ್ದಸ್ತ್‌ ವೇಗ, ಸ್ಟೈಲಿಶ್‌ ಲುಕ್!

ಭಾರತದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ P1 ಸ್ಪೀಡ್‌ 5G (realme P1 Speed 5G) ಸ್ಮಾರ್ಟ್‌ಫೋನ್‌ ಅಧಿಕೃತವಾಗಿ ಲಾಂಚ್‌ ಆಗಿದೆ. ಸದ್ಯ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿರುವ ರಿಯಲ್‌ಮಿ P1 ಸ್ಪೀಡ್‌ 5G ಫೋನ್‌ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ.

ಹೌದು, ರಿಯಲ್‌ಮಿ P1 ಸ್ಪೀಡ್‌ 5G ಸ್ಮಾರ್ಟ್‌ಫೋನ್‌ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗೆಯೇ 45W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದೆ Realme P1 Speed 5G ಫೋನ್‌; ಜಬರ್ದಸ್ತ್‌ ವೇಗ...

ಇನ್ನು ರಿಯಲ್‌ಮಿ P1 ಸ್ಪೀಡ್‌ 5G ಮೊಬೈಲ್ 8GB + 128GB ಹಾಗೂ 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗಾದರೆ ಈ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬ್ನನಿರಿ. ಮುಂದೆ ಓದಿರಿ.

ರಿಯಲ್‌ಮಿ P1 ಸ್ಪೀಡ್‌ 5G ಫೀಚರ್ಸ್‌ ಹೀಗಿವೆ

ರಿಯಲ್‌ಮಿ P1 ಸ್ಪೀಡ್‌ 5G ಸ್ಮಾರ್ಟ್‌ಫೋನ್‌ 6.67 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 ×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದ್ದು, ರೇನ್ ವಾಟರ್‌ ಸ್ಮಾರ್ಟ್‌ ಟಚ್‌ ಹಾಗೂ ಪಾಂಡಾ ಗ್ಲಾಸ್‌ ಪ್ರೊಕೆಕ್ಷನ್‌ ಸೌಲಭ್ಯ ಒಳಗೊಂಡಿದೆ.

ರಿಯಲ್‌ಮಿ P1 ಸ್ಪೀಡ್‌ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಪವರ್‌ ಪಡೆದಿದ್ದು, ಜೊತೆಗೆ ಇದು ಮಾಲಿ-G615 MC2 GPU ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 8GB RAM / 12GB ಮತ್ತು 128GB RAM / 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ರಿಯಲ್‌ಮಿ P1 ಸ್ಪೀಡ್‌ 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಸೆನ್ಸಾರ್‌ ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ನೀಡಲಾಗಿದೆ.

ರಿಯಲ್‌ಮಿ P1 ಸ್ಪೀಡ್‌ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೇ ಇದು ಬ್ಲೂಟೂತ್ 5.4, ಬೀಡೌ, GPS, GLONASS, ಗೆಲಿಲಿಯೋ, QZSS, USB ಟೈಪ್-ಸಿ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ P1 ಸ್ಪೀಡ್‌ 5G (realme P1 Speed 5G) ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ಮಾದರಿಯ ಆಯ್ಕೆಯು 17,999ರೂ. ಬೆಲೆಯನ್ನು ಹೊಂದಿದೆ. ಇನ್ನು ಇದರ 12GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 20,999ರೂ. ಬೆಲೆಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೇಲ್‌ ಇದೇ ಅಕ್ಟೋಬರ್ 20 ರಿಂದ ಪ್ರಾರಂಭ ಆಗಲಿದೆ. ರಿಯಲ್‌ಮಿ ಹಾಗೂ ಫ್ಲಿಪ್‌ಕಾರ್ಟ್‌ ತಾಣಗಳಲ್ಲಿ ಖರೀದಿಗೆ ಸಿಗಲಿದೆ.

Best Mobiles in India

English summary
realme P1 Speed 5G with MediaTek Dimensity 7300 Processor launched in India. Check Out Price, Offer, Specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+