Home
ಸುದ್ದಿಜಾಲ

ಇಂದು Realme P3 5G ಮಾರಾಟ; 6000mAh ಬ್ಯಾಟರಿ.. 50MP ಕ್ಯಾಮೆರಾ.. ಬೆಲೆ ಎಷ್ಟು, ಆಫರ್ ಏನಿದೆ?

ರಿಯಲ್‌ಮಿ ಕಂಪನಿಯು ಇತ್ತೀಚೆಗೆ ರಿಯಲ್‌ಮಿ P3 5G (Realme P3 5G) ಫೋನನ್ನು ಬಿಡುಗಡೆ ಮಾಡಿದೆ. ಇದನ್ನು ತನ್ನ 'P' ಸರಣಿಯಲ್ಲಿ ಪರಿಚಯಿಸಿದೆ. ಹೌದು, ಕಂಪನಿಯು ರಿಯಲ್‌ಮಿ P3 5G (Realme P3 5G) ಮತ್ತು ರಿಯಲ್‌ಮಿ P3 ಅಲ್ಟ್ರಾ 5G (Realme P3 Ultra 5G) ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಪೈಕಿ ರಿಯಲ್‌ಮಿ P3 5G ಇಂದು (ಮಾರ್ಚ್ 26) ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ರಿಯಲ್‌ಮಿ P3 5G ಮೊಬೈಲ್ ಮೂರು ಸ್ಟೋರೇಜ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದು 15,000 ರೂ. ಬಜೆಟ್‌ ಒಳಗಡೆ ಬಿಡುಗಡೆ ಮಾಡಲಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಇದು ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಇದೆ. ಇದರೊಂದಿಗೆ 8GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

ಇಂದು Realme P3 5G ಮಾರಾಟ; ಬೆಲೆ ಎಷ್ಟು, ಆಫರ್ ಏನಿದೆ?

ರಿಯಲ್‌ಮಿ P3 5G ಬೆಲೆ ಮತ್ತು ಆಫರ್

6GB RAM + 128GB ಸ್ಟೋರೇಜ್ = 16,999 ರೂ.
8GB RAM + 128GB ಸ್ಟೋರೇಜ್ = 17,999 ರೂ.
8GB RAM + 256GB ಸ್ಟೋರೇಜ್ = 19,999 ರೂ.

ಕಂಪನಿಯು ರಿಯಲ್‌ಮಿ P3 5G ಫೋನಿನ ಖರೀದಿ ಮೇಲೆ 2,000 ರೂ. ಬ್ಯಾಂಕ್ ಆಫರ್ ಘೋಷಿಸಿದೆ. ರಿಯಲ್‌ಮಿ ಹಳೆಯ ಗ್ರಾಹಕರಿಗೆ ಹೆಚ್ಚುವರಿ 500 ರೂ. ಡಿಸ್ಕೌಂಟ್ ಲಭ್ಯವಿದೆ. ಈ ಮೊಬೈಲ್ ಸ್ಪೇಸ್ ಸಿಲ್ವರ್, ಕಾಮೆಟ್ ಗ್ರೇ ಮತ್ತು ನೆಬ್ಯುಲಾ ಪಿಂಕ್ ಬಣ್ಣಗಳಲ್ಲಿ ಮಾರಾಟವಾಗಲಿದೆ. ಈ ಫೋನ್ ಇಂದು (ಮಾರ್ಚ್ 26) ಮಧ್ಯಾಹ್ನ 12 ಗಂಟೆಯಿಂದ ಕಂಪನಿಯ ಅಧಿಕೃತ ವೆಬ್‌ಸೈಟ್, ರಿಯಲ್‌ಮಿ ಸ್ಟೋರ್ ಆಪ್, ಫ್ಲಿಪ್‌ಕಾರ್ಟ್ ಮೂಲಕ ತನ್ನ ಮಾರಾಟ ಪ್ರಾರಂಭಿಸಲಿದೆ.

Take a Poll

ರಿಯಲ್‌ಮಿ P3 5G ವೈಶಿಷ್ಟ್ಯಗಳು

ರಿಯಲ್‌ಮಿ P3 5G ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2400 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ, 1500Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 2000 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಒಳಗೊಂಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 4 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6.0 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಅಡ್ರಿನೊ 810 ಜಿಪಿಯು ಇದೆ.

ರಿಯಲ್‌ಮಿ P3 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ ಲಭ್ಯವಿದೆ. ಇದು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಈ ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.

ರಿಯಲ್‌ಮಿ P3 5G ಫೋನ್ 6GB RAM ಮತ್ತು 8GB RAM ಹೊಂದಿದೆ. ಹಾಗೆಯೇ 128GB ಮತ್ತು 256GB ಸ್ಟೋರೇಜ್ ಇದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಲಭ್ಯವಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

Best Mobiles in India

English summary
realme P3 5G First Sale Start Today via Flipkart with launch offers: know top 5 things
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+