Home
ಸುದ್ದಿಜಾಲ

ನಾಳೆ Realme P3 5G ಫಸ್ಟ್ ಸೇಲ್; 2500 ರಿಯಾಯಿತಿ ಘೋಷಣೆ.. ಕಡಿಮೆ ಬೆಲೆ, ಮಸ್ತ್ ಫೀಚರ್ಸ್

ರಿಯಲ್‌ಮಿ ಕಂಪನಿಯು ಇತ್ತೀಚಿಗೆ ಹೊಸ ಮೊಬೈಲ್‌ ಅನ್ನು ಬಿಡುಗಡೆ ಮಾಡಿದೆ. ಇದು ರಿಯಲ್‌ಮಿ P3 5G (Realme P3 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹೌದು, ಕಂಪನಿಯು ತನ್ನ 'P' ಸರಣಿಯಲ್ಲಿ ಈ ಫೋನನ್ನು ಪರಿಚಯಿಸಿದೆ. ಈ ಮೊಬೈಲ್ ದೊಡ್ಡ ಬ್ಯಾಟರಿ ಮತ್ತು ಬೊಂಬಾಟ್ ಕ್ಯಾಮೆರಾ ಸೆಟಪ್‌ನೊಂದಿಗೆ ಮಾರಾಟವಾಗಲಿದೆ. ನೀವು 15,000 ರೂ. ಬಜೆಟ್‌ ಒಳಗಡೆ ಈ ಫೋನನ್ನು ಕೊಳ್ಳಬಹುದು. ಬನ್ನಿ, ಈ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ P3 5G ಫೋನ್ ಮೂರು ಸ್ಟೋರೇಜ್‌ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಇದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಹಾಗೆಯೇ 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್, 8GB RAM + 256GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಜ್ಜಾಗಿದೆ.

ನಾಳೆ Realme P3 5G ಸೇಲ್; 2500 ರಿಯಾಯಿತಿ.. ಕಡಿಮೆ ಬೆಲೆ, ಮಸ್ತ್ ಫೀಚರ್ಸ್

ರಿಯಲ್‌ಮಿ P3 5G: ಟಾಪ್ 5 ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರಿಯಲ್‌ಮಿ P3 5G ಫೋನ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2400 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ, 1500Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 2000 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಒಳಗೊಂಡಿದೆ.

ಪ್ರೊಸೆಸರ್ ಯಾವುದು?

ರಿಯಲ್‌ಮಿ P3 5G ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 4 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6.0 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಅಡ್ರಿನೊ 810 ಜಿಪಿಯು ಇದೆ. ಈ ಫೋನ್ 6GB RAM ಮತ್ತು 8GB RAM ಹೊಂದಿದೆ. ಹಾಗೆಯೇ 128GB ಮತ್ತು 256GB ಸ್ಟೋರೇಜ್ ಇದೆ.

{embed-poll}

ಡ್ಯುಯಲ್ ಕ್ಯಾಮೆರಾ ಸೆಟಪ್

ರಿಯಲ್‌ಮಿ P3 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ ಲಭ್ಯವಿದೆ. ಇದು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ P3 5G ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಲಭ್ಯವಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರಿಯಲ್‌ಮಿ P3 5G ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ P3 5G ಫೋನಿನ 6GB RAM + 128GB ಸ್ಟೋರೇಜ್ 16,999 ರೂ.ಗೆ ಮಾರಾಟವಾಗಲಿದೆ. 8GB RAM + 128GB ಸ್ಟೋರೇಜ್ ಬೆಲೆ 17,999 ರೂ. ಮತ್ತು 8GB RAM + 256GB ಸ್ಟೋರೇಜ್ ವೇರಿಯಂಟ್ 19,999 ರೂ.ಗೆ ಲಭ್ಯವಿರುತ್ತದೆ. ಕಂಪನಿಯು 2,000 ರೂ. ಬ್ಯಾಂಕ್ ಆಫರ್ ಘೋಷಿಸಿದೆ. ಹಳೆಯ ಗ್ರಾಹಕರಿಗೆ ಹೆಚ್ಚುವರಿ 500 ರೂ. ರಿಯಾಯಿತಿ ನೀಡುತ್ತಿದೆ. ಈ ಮೊಬೈಲ್ ಸ್ಪೇಸ್ ಸಿಲ್ವರ್, ಕಾಮೆಟ್ ಗ್ರೇ ಮತ್ತು ನೆಬ್ಯುಲಾ ಪಿಂಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಇದು ನಾಳೆ (ಮಾರ್ಚ್ 26) ಮಧ್ಯಾಹ್ನ 12 ಗಂಟೆಯಿಂದ ಕಂಪನಿಯ ಅಧಿಕೃತ ವೆಬ್‌ಸೈಟ್, ರಿಯಲ್‌ಮಿ ಸ್ಟೋರ್ ಆಪ್, ಫ್ಲಿಪ್‌ಕಾರ್ಟ್ ಮೂಲಕ ತನ್ನ ಮಾರಾಟ ಪ್ರಾರಂಭಿಸಲಿದೆ.

Best Mobiles in India

English summary
realme P3 5G First Sale Start Tomorrow via Flipkart: check Price, offers, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+