Home
ಸುದ್ದಿಜಾಲ

ಭಾರತದಲ್ಲಿ ರಿಯಲ್‌ಮಿ ಪ್ಯಾಡ್‌ 2 ಬಿಡುಗಡೆಗೆ ಮುಹೂರ್ತ ಫಿಕ್ಸ್‌! ವಿಶೇಷತೆ ಏನು?

ರಿಯಲ್‌ಮಿ ಕಂಪೆನಿ ಟೆಕ್‌ ವಲಯದ ಸನ್ಸೇಷನ್‌ ಅಂತಾನೇ ಖ್ಯಾತಿ ಪಡೆದುಕೊಂಡಿದೆ. ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ ಹಾಗೂ ಪ್ಯಾಡ್‌ಗಳ ಮೂಲಕ ಗಮನಸೆಳೆದಿದೆ. ಸದ್ಯ ಇದೀಗ ರಿಯಲ್‌ಮಿ ಪ್ಯಾಡ್‌ 2 ಬಿಡುಗಡೆಗೆ ತಯಾರಿ ನಡೆಸಿದೆ. ಈ ಪ್ಯಾಟ್‌ ಶೀಘ್ರದಲ್ಲೇ ಭಾರತದಲ್ಲಿ ಬಿಡುಗ್ಡೆ ಆಗಲಿದೆ ಎಂದು ವರದಿಯಾಗಿದೆ.

ಹೌದು, ರಿಯಲ್‌ಮಿ ಪ್ಯಾಡ್‌ 2 ಭಾರತಕ್ಕೆ ಎಂಟ್ರಿ ನೀಡುವ ದಿನಗಳು ದೂರವಿಲ್ಲ ಎನ್ನುವ ಸುದ್ದಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಇದು 11.5 ಇಂಚಿನ HD ಡಿಸ್‌ಪ್ಲೇ ಹೊಂದಿರಲಿದೆ ಅನ್ನೋ ವಿಚಾರ ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ ಈ ಪ್ಯಾಡ್‌ 33W ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದ್ದು, 8,360mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಹೊಸ ರಿಯಲ್‌ಮಿ ಪ್ಯಾಡ್‌ 2 ವಿಶೇಷತೆ ಏನು? ಇದರ ಫೀಚರ್ಸ್‌ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ರಿಯಲ್‌ಮಿ ಪ್ಯಾಡ್‌ 2 ಬಿಡುಗಡೆಗೆ ಮುಹೂರ್ತ ಫಿಕ್ಸ್‌! ವಿಶೇಷತೆ ಏನು?

ರಿಯಲ್‌ಮಿ ಪ್ಯಾಡ್‌ 2 ಫೀಚರ್ಸ್‌ ನಿರೀಕ್ಷೆ?
ರಿಯಲ್‌ಮಿ ಪ್ಯಾಡ್‌ 2 11.5 ಇಂಚಿನ LCD ಡಿಸ್‌ಪ್ಲೇ ಹೊಂದಿರಲಿದೆ. ಇದು 2K ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಈ ಡಿಸ್‌ಪ್ಲೇ 460 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಜೊತೆಗೆ 85.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ನೀಡುತ್ತದೆ ಎಂದು ಹೇಳಲಾಗಿದೆ.

ರಿಯಲ್‌ಮಿ ಪ್ಯಾಡ್‌ 2 ಪ್ರೊಸೆಸರ್‌ ನಿರೀಕ್ಷೆ ಏನಿದೆ?
ರಿಯಲ್‌ಮಿ ಪ್ಯಾಡ್‌ 2 ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ರಿಯಲ್‌ಮಿ UI 4.0 ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್‌ ಆಗಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ನೊಂದಿಗೆ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಣೆಗೆ ಅವಕಾಶ ನೀಡಲಿದೆ ಎನ್ನಲಾಗಿದೆ.

ರಿಯಲ್‌ಮಿ ಪ್ಯಾಡ್‌ 2 ಕ್ಯಾಮೆರಾ ವಿಶೇಷ
ರಿಯಲ್‌ಮಿ ಪ್ಯಾಡ್‌ 2 ಹಿಂಭಾಗದಲ್ಲಿ ಎರಡು ಕ್ಯಾಮೆರಾಗಳನ್ನು ಹೊಂದಿರಲಿದೆ. ಇದು ವೃತ್ತಾಕಾರದ ಕ್ಯಾಮೆರಾ ಮಾಡ್ಯೂಲ್‌ನಲ್ಲಿ ಇರಿಸಲಾಗಿರುತ್ತದೆ ಎನ್ನಲಾಗಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲ್ಯಾಶ್‌, ಫೇಸ್‌ ಡಿಟೆಕ್ಷನ್‌. ಟಚ್‌ ಟು ಫೋಕಸ್‌ ನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಭಾರತದಲ್ಲಿ ರಿಯಲ್‌ಮಿ ಪ್ಯಾಡ್‌ 2 ಬಿಡುಗಡೆಗೆ ಮುಹೂರ್ತ ಫಿಕ್ಸ್‌! ವಿಶೇಷತೆ ಏನು?

ರಿಯಲ್‌ಮಿ ಪ್ಯಾಡ್‌ 2 ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್‌ಮಿ ಪ್ಯಾಡ್‌ 2 8,360mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು USB ಟೈಪ್-ಸಿ ಮೂಲಕ 33W ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ರಿಯಲ್‌ಮಿ ಪ್ಯಾಡ್‌ 2 ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ ಪ್ಯಾಡ್‌ 2 ಭಾರತದಲ್ಲಿ ಜುಲೈ 19 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇದರ ಬೆಲೆಯ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಇನ್ನುಳಿದಂತೆ ಈ ಹೊಸ ಟ್ಯಾಬ್ಲೆಟ್‌ ಗ್ರೇ ಹಾಗೂ ಗ್ರೀನ್‌ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ.

ಇನ್ನು ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ತನ್ನ ಬಹು ನಿರೀಕ್ಷಿತ ರಿಯಲ್‌ಮಿ 11 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಕರ್ವ್ಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ ರಿಯಲ್‌ಮಿ UI 4.0 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 100-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
Realme Pad 2 Launch Date Teased on Flipkart: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+