ಶೀಘ್ರದಲ್ಲೇ ಭಾರತದಲ್ಲಿ ಲಾಂಚ್ ಆಗಲಿದೆ ರಿಯಲ್ ಮಿ Q2 ಸ್ಮಾರ್ಟ್‌ಫೋನ್!
ರಿಯಲ್ ಮಿ ಮೊಬೈಲ್ ಸಂಸ್ಥೆಯು ಈಗಾಗಲೇ ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಜೆಟ್ ದರದ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಸದ್ದು ಮಾಡಿವೆ. ಇತ್ತೀಚಿಗೆ ಬಿಡುಗಡೆ ಮಾಡಿದ ರಿಯಲ್ ಮಿ 7 ಸರಣಿಯ ಸ್ಮಾರ್ಟ್‌ಫೋನ್‌ಗಳು ಪ್ರೈಸ್ ಹಾಗೂ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿವೆ. ಅದರ ಬೆನ್ನಲ್ಲೇ ಕಂಪನಿಯು ಇದೀಗ ರಿಯಲ್ ಮಿ Q2 ಸ್ಮಾರ್ಟ್‌ಫೋನ್ ಅನಾವರಣ ಮಾಡಲು ಸಜ್ಜಾಗಿದೆ.

ಹೌದು, ರಿಯಲ್ ಮಿ ಕಂಪನಿಯು ಹೊಸದಾಗಿ ರಿಯಲ್ ಮಿ Q2 ಸ್ಮಾರ್ಟ್‌ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ರಿಯಲ್ ಮಿ Q2 ಸ್ಮಾರ್ಟ್‌ಫೋನ್ ಸದ್ಯದಲ್ಲೇ ಭಾರತದಲ್ಲಿ ಲಾಂಚ್ ಆಗಲಿದೆ ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಸೈಟ್ ಹೇಳಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ವಿನ್ಯಾಸವನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನುಳಿದಂತೆ ರಿಯಲ್ ಮಿ Q2 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಹೇಗಿದೆ
ರಿಯಲ್ ಮಿ Q2 ಸ್ಮಾರ್ಟ್‌ಫೋನ್1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು ಬ್ರೈಟ್ನೆಸ್ ಸಹ ಅತ್ಯುತ್ತಮವಾಗಿದ್ದು, ಫೋನಿನ ಸ್ಕ್ರೀನ್ 120Hz ರೀಫ್ರೇಶ್ ರೇಟ್ ಹೊಂದಿದೆ.

ಯಾವ ಪ್ರೊಸೆಸರ್
ರಿಯಲ್ ಮಿ Q2 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 800U SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದಕ್ಕೆ ಬೆಂಬಲವಾಗಿ ಇತ್ತೀಚಿನ ಆಂಡ್ರಾಯ್ಡ್ 9 ಓಎಸ್ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 6GB of RAM ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ.

ಟ್ರಿಪಲ್ ಕ್ಯಾಮೆರಾ
ರಿಯಲ್ ಮಿ Q2 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದೆ. ಅದೇ ರೀತಿ ಸೆಲ್ಫಿ ಕ್ಯಾಮೆರಾವು 16 ಎಂಪಿಯ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಬ್ಯಾಟರಿ ಬಲ
ರಿಯಲ್ ಮಿ Q2 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 30W ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರೊಂದಿಗೆ ವೈಫೈ-802.11ac, ಜಿಪಿಎಸ್, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ. ಭಾರತದಲ್ಲಿ ಈ ಫೋನಿನ ಅಂದಾಜು ಬೆಲೆ 14,600ರೂ. ಎನ್ನಲಾಗಿದೆ.


Click it and Unblock the Notifications