India

ರಿಯಲ್‌ಮಿ Q5 ಮತ್ತು ರಿಯಲ್‌ಮಿ Q5 ಪ್ರೊ ಬಿಡುಗಡೆ!..ಟ್ರಿಪಲ್ ಕ್ಯಾಮೆರಾ!

|

ಮೊಬೈಲ್‌ ವಲಯದಲ್ಲಿ ರಿಯಲ್‌ಮಿ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ Q5 ಮತ್ತು ರಿಯಲ್‌ಮಿ Q5 ಪ್ರೊ ಫೋನ್‌ಗಳನ್ನು ಲಾಂಚ್‌ ಮಾಡಿದೆ. ಈ ಎರಡೂ ರಿಯಲ್‌ಮಿಯ ನೂತನ ಫೋನ್‌ಗಳು ತ್ರಿವಳಿ ಕ್ಯಾಮೆರಾ ರಚನೆ ಹಾಗೂ 120Hz ಡಿಸ್‌ಪ್ಲೇಗಳೊಂದಿಗೆ ಬರುತ್ತವೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ Q5 ಮತ್ತು ರಿಯಲ್‌ಮಿ Q5 ಪ್ರೊ ಅನ್ನು ಪರಿಚಯಿಸಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್‌ ಹೊಂದಿವೆ. ರಿಯಲ್‌ಮಿ Q5 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಹೊಂದಿದ್ದರೆ, ರಿಯಲ್‌ಮಿ Q5 ಪ್ರೊ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗದರೆ ರಿಯಲ್‌ಮಿ Q5 ಮತ್ತು ರಿಯಲ್‌ಮಿ Q5 ಪ್ರೊ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್‌ಮಿ Q5 ಫೀಚರ್ಸ್‌

ರಿಯಲ್‌ಮಿ Q5 ಫೀಚರ್ಸ್‌

ರಿಯಲ್‌ಮಿ Q5 ಫೋನ್ 6.6 ಇಂಚಿನ ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ 3.5mm ಹೆಡ್‌ಫೋನ್ ಜ್ಯಾಕ್, ಡ್ಯುಯಲ್ ಬ್ಯಾಂಡ್ ವೈ-ಫೈ, 8.5mm ದಪ್ಪ ಮತ್ತು 195-ಗ್ರಾಂ ತೂಕವನ್ನು ಪಡೆದಿದೆ.

ರಿಯಲ್‌ಮಿ Q5 ಪ್ರೊ ಫೀಚರ್ಸ್‌

ರಿಯಲ್‌ಮಿ Q5 ಪ್ರೊ ಫೀಚರ್ಸ್‌

ರಿಯಲ್‌ಮಿ Q5 ಪ್ರೊ ಫೋನ್ 6.6 ಇಂಚಿನ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, 1,300 ನಿಟ್ಸ್‌ ಬ್ರೈಟ್ನೆಸ್‌ ಹೊಂದಿದೆ. ಈ ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಅಡ್ರೊನಾ 650 GPU ಗ್ರಾಫಿಕ್ಸ್‌ ಸೌಲಭ್ಯ ಪಡೆದಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು, 80W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ Q5 ಫೋನ್ 6GB RAM ಮತ್ತು 128GB ಸ್ಟೋರೇಜ್‌ನ ಬೇಸ್‌ ಮಾಡೆಲ್‌ CNY 1,399 (ಭಾರತದಲ್ಲಿ ಅಂದಾಜು 16,700 ರೂ. ಆಗಿದೆ) ಇನ್ನು ರಿಯಲ್‌ಮಿ Q5 ಪ್ರೊ ಫೋನ್ 6GB RAM ಮತ್ತು 128GB ಸ್ಟೋರೇಜ್‌ನ ಬೇಸ್‌ ಮಾಡೆಲ್‌ CNY 1,799 (ಭಾರತದಲ್ಲಿ ಅಂದಾಜು 21,500 ರೂ.) ಆಗಿದೆ.

Most Read Articles
Best Mobiles in India

English summary
Realme Q5, Realme Q5 Pro Launched with 5000mAh Battery: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X