Home
ಸುದ್ದಿಜಾಲ

ಇತ್ತೀಚಿನ ಈ 5G ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ; ಈ ಚಾನ್ಸ್‌ ಮಿಸ್‌ಮಾಡ್ಕೋಬೇಡಿ!

ರಿಯಲ್‌ಮಿ ಮೊಬೈಲ್‌ ಬ್ರ್ಯಾಂಡ್‌ ದೇಶಿಯ ಮಾರುಕಟ್ಟೆಯಲ್ಲಿ ತನ್ನ ನಾರ್ಜೋ ಸರಣಿಯ ಫೋನ್‌ಗಳ ಮೂಲಕ ಬಜೆಟ್‌ ರೇಂಜ್‌ ವಿಭಾಗದಲ್ಲಿ ತನ್ನದೇ ಹೆಜ್ಜೆ ಮೂಡಿಸಿದೆ. ಸಂಸ್ಥೆಯು ನಾರ್ಜೋ ಫೋನ್‌ಗಳ ಪೈಕಿ ಇತ್ತೀಚಿನ ರಿಯಲ್‌ಮಿ ನಾರ್ಜೋ N65 5G (Realme NARZO N65 5G) ಮೊಬೈಲ್‌ ಆಕರ್ಷಕ ಫೀಚರ್ಸ್‌, ಡಿಸೈನ್‌ ಹಾಗೂ ಬೆಲೆಯಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರು ಬೆರಗುಗಣ್ಣಿನಿಂದ ನೋಡುವಂತಾಗಿದೆ.

ಹೌದು, ರಿಯಲ್‌ಮಿ ನಾರ್ಜೋ N65 5G (Realme NARZO N65 5G) ಮೊಬೈಲ್‌ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಶೇ. 18% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಬಹುದಾಗಿದೆ. ಈ ಫೋನಿನ 4GB RAM + 128 GB ಸ್ಟೋರೇಜ್‌ ವೇರಿಯಂಟ್‌ 11,499ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಖರೀದಿದಾರರು ಆಯ್ದ ಬ್ಯಾಂಕ್‌ಗಳ ಆಫರ್‌ ಸಹ ಪಡೆಯಲು ಅವಕಾಶ ಇದೆ.

ಇತ್ತೀಚಿನ ಈ 5G ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ; ಈ ಚಾನ್ಸ್‌ ಮಿಸ್‌ಮಾಡ್ಕೋಬೇಡಿ!

ಇನ್ನು ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 15W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಂದಹಾಗೆ ಇದು ಅಂಬರ್ ಗೋಲ್ಡ್ ಮತ್ತು ಡೀಪ್ ಗ್ರೀನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನುಳಿದಂತೆ ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಈ ಲೇಖನದಲ್ಲಿ ನೋಡೋಣ ಬನ್ನಿರಿ ಓದಿರಿ.

ರಿಯಲ್‌ಮಿ ನಾರ್ಜೋ N65 5G ಫೀಚರ್ಸ್‌

ರಿಯಲ್‌ಮಿ ನಾರ್ಜೋ N65 5G ಫೋನ್‌ 6.67 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌, 89.97 ಪ್ರತಿಶತ ಸ್ಕ್ರೀನ್ ಟು ಬಾಡಿ ಅನುಪಾತ ಹಾಗೂ 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು ಪಂಚ್‌ ಹೋಲ್‌ ಕಟೌಟ್ ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 6300 5G ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಅಲ್ಲದೇ 6GB RAM ಡೈನಾಮಿಕ್ RAM ಸೌಲಭ್ಯ ಸಹ ಈ ಫೋನ್‌ ಪಡೆದಿದೆ. ಇದರೊಂದಿಗೆ 4GB + 12GB ಹಾಗೂ 6GB + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ.

ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ದ್ವಿತೀಯ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಇದು ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ 15W ವೇಗದ ಚಾರ್ಜಿಂಗ್‌ಗೆ ಸೌಲಭ್ಯ ಸಹ ಇದೆ. ಅಲ್ಲದೇ ಕ್ವಿಕ್‌ ಚಾರ್ಜ್‌ ರಿವರ್ಸ್ ಚಾರ್ಜಿಂಗ್ ಪಡೆದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ಇದು 5G ವೈ-ಫೈ ಮತ್ತು ಬ್ಲೂಟೂತ್ ಸೌಲಭ್ಯ ಪಡೆದಿದ್ದು, ಜೊತೆಗೆ IP54 ರೇಟಿಂಗ್ ಪಡೆದುಕೊಂಡಿದೆ. ಇನ್ನು ಈ ಫೋನ್ ಅಂಬರ್ ಗೋಲ್ಡ್ ಮತ್ತು ಡೀಪ್ ಗ್ರೀನ್ ಕಲರ್ ಆಯ್ಕೆಯಲ್ಲಿ ಲಭ್ಯ.

Best Mobiles in India

English summary
Realme Savings Days: Great Price drop on Realme NARZO N65 5G on amazon. check offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+