ರಿಯಲ್ ಮಿ V15 ಸ್ಮಾರ್ಟ್‌ಫೋನ್ ಬಿಡುಗಡೆಗೆ ದಿನಾಂಕ ನಿಗದಿ!
ರಿಯಲ್ ಮಿ ಮೊಬೈಲ್ ಸಂಸ್ಥೆಯು ಇತ್ತೀಚಿಗಷ್ಟೆ ರಿಯಲ್ ಮಿ ಭಿನ್ನ ಸರಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದ್ದು, ರಿಯಲ್ ಮಿ V ಸರಣಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಈ ನಿಟ್ಟಿನಲ್ಲಿ ಕಂಪನಿಯು ಇದೀಗ ರಿಯಲ್ ಮಿ V ಸರಣಿಯ ಮುಂದುವರಿದ ಭಾಗವಾಗಿ ರಿಯಲ್ ಮಿ V15 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲು ಸಕಲ ತಯಾರಿ ನಡೆಸಿದೆ.

ಹೌದು, ರಿಯಲ್ ಮಿ ಕಂಪನಿಯು ರಿಯಲ್ ಮಿ V15 ಹೆಸರಿನ ಸ್ಮಾರ್ಟ್‌ಫೋನ್ ಅನ್ನು ಜನೆವರಿ 7ರಂದು ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 888 ಚಿಪ್‌ಸೆಟ್ ಪ್ರೊಸೆಸರ್ ಹೊಂದಿರಲಿದ್ದು, ಉಳಿದ ಫೀಚರ್ಸ್‌ಗಳು ಫ್ಲ್ಯಾಗ್‌ಶಿಪ್ ಮಾದರಿಯಲ್ಲಿರಲಿವೆ ಎಂದು ನಿರೀಕ್ಷಿಸಲಾಗಿದೆ. ಇದರೊಂದಿಗೆ ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಬಲ ಹೊಂದಿರಲಿದೆ. ಹಾಗಾದರೇ ಲೀಕ್ ಮಾಹಿತಿಯಂತೆ ರಿಯಲ್ ಮಿ V15 ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್
ರಿಯಲ್ ಮಿ V15 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ AMOLED ಪೂರ್ಣ ಹೆಚ್‌ಡಿ ಪ್ಲಸ್ ಹೊಂದಿರಲಿದೆ. ಇದರೊಂದಿಗೆ ಡಿಸ್‌ಪ್ಲೇಯು 120Hz ರಿಫ್ರೇಶ್ ರೇಟ್ ಸಾಮರ್ಥ್ಯವನ್ನು ಪಡೆದಿರಲಿದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 405 ppi ಆಗಿರಲಿದೆ.

ಪ್ರೊಸೆಸರ್ ಬಲವೇನು
ರಿಯಲ್ ಮಿ V15 ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 888 ಚಿಪ್‌ಸೆಟ್ ಪ್ರೊ ಸೆಸರ್‌ಚಿಪ್‌ಸೆಟ್ ಅನ್ನು ಹೊಂದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಇರಲಿದೆ. ಇದರೊಂದಿಗೆ 6 GB, 8 GB RAM ಮತ್ತು 128 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿರಲಿದೆ.

ತ್ರಿವಳಿ ಕ್ಯಾಮೆರಾ
ರಿಯಲ್ ಮಿ V15 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿರಲಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್ ಹೊಂದಿರಲಿದೆ. ಇನ್ನು ತೃತೀಯ ಕ್ಯಾಮೆರಾ 2ಎಂಪಿ ಸೆನ್ಸಾರ್ ಪಡೆದಿರಲಿದೆ. ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ನಲ್ಲಿರಲಿದೆ.

ಬ್ಯಾಟರಿ ಲೈಫ್
ರಿಯಲ್ ಮಿ V15 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯವನ್ನು ಹೊಂದಿದ್ದು, 50W ಸಾಮರ್ಥ್ಯದ ಫ್ಲ್ಯಾಶ್ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಹೊಂದಿರಲಿದೆ. ಇದರೊಂದಿಗೆ ಕನೆಕ್ಟಿವಿಟಿಗಾಗಿ ವೈಫೈ, ಬ್ಲೂಟೂತ್, ಸೆನ್ಸಾರ್, ವಿಡಿಯೊ ಎಡಿಟಿಂಗ್ ಆಪ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ.


Click it and Unblock the Notifications