ರಿಯಲ್‌ಮಿ V25 ಸ್ಮಾರ್ಟ್‌ಫೋನ್ ಬಿಡುಗಡೆ! ಆಕರ್ಷಕ ಡಿಸ್‌ಪ್ಲೇ ವಿನ್ಯಾಸ!
ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಸದ್ಯ ಇದೀಗ ತನ್ನ ಹೊಸ ರಿಯಲ್‌ಮಿ V25 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಹೊಂದಿರುವ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಒಳಗೊಂಡಿದೆ.

ಹೌದು, ರಿಯಲ್‌ಮಿ ಕಂಪೆನಿ ಹೊಸ ರಿಯಲ್‌ಮಿ V25 ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಫೋಟೋಕ್ರೋಮಿಕ್ ಬ್ಯಾಕ್ ಪ್ಯಾನೆಲ್ ಹೊಂದಿರುವ ರಿಯಲ್‌ಮಿ ಕಂಪೆನಿಯ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ರಿಯಲ್‌ಮಿ V25 ಸ್ಮಾರ್ಟ್‌ಫೋನ್ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ LTPO ಫೀಚರ್ಸ್ ಹೊಂದಿದ್ದು, ರಿಫ್ರೆಶ್ ರೇಟ್ ಅನ್ನು 120Hz ನಿಂದ 30Hz ವರೆಗೆ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ವಿಷಯಕ್ಕೆ ಅನುಗುಣವಾಗಿ 30Hz, 48Hz, 50Hz, 60Hz, 90Hz ಮತ್ತು 120Hz ನಂತಹ ಆರು ವಿಭಿನ್ನ ರಿಫ್ರೆಶ್ ರೇಟ್ ಆಯ್ಕೆಯನ್ನು ನೀಡಲಿದೆ. ಇದಲ್ಲದೆ ಈ ಡಿಸ್‌ಪ್ಲೇ 240Hz ಟಚ್ ಸ್ಯಾಪ್ಲಿಂಗ್ ರೇಟ್ ಮತ್ತು 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಳಪನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ರಿಯಲ್‌ಮಿ V25 ಸ್ಮಾರ್ಟ್‌ಫೋನ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ರಿಯಲ್‌ಮಿ UI 3.0 ಜೊತೆಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ RAM ಅನ್ನು 19GB ವರೆಗೆ ವಿಸ್ತರಿಸಲು ಹ್ಯಾಂಡ್‌ಸೆಟ್ ಡೈನಾಮಿಕ್ RAM ವಿಸ್ತರಣೆ ಫೀಚರ್ಸ್ ಅನ್ನು ಸಹ ಪರಿಚಯಿಸಿದೆ.

ಕ್ಯಾಮೆರಾ ವಿಶೇಷ
ರಿಯಲ್‌ಮಿ V25 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನುಳಿದಂತೆ ಡೆಪ್ತ್ ಸೆನ್ಸಾರ್ ಮತ್ತು ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ರಿಯಲ್‌ಮಿ V25 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಬ್ಯಾಟರಿ ಫುಲ್ ಚಾರ್ಜ್ ಮಾಡಿದರೆ 24 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೆ 27 ನಿಮಿಷಗಳಿಗೆ 0 ರಿಂದ 50% ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, Wi-Fi, ಬ್ಲೂಟೂತ್ ಮತ್ತು 3.5mm ಆಡಿಯೊ ಜಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ V25 ಸ್ಮಾರ್ಟ್‌ಫೋನ್ ಏಕೈಕ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ CNY 1,999 (ಅಂದಾಜು 23,900ರೂ)ಗೆ ನಿಗದಿಪಡಿಸಲಾಗಿದೆ. ಇನ್ನು ಈ ಫೋನ್ ಪರ್ಪಲ್ MSI, ವೀನಸ್ ಮತ್ತು ಫರ್ಮನಾಂಟ್ ಬ್ಲ್ಯಾಕ್ (ಅನುವಾದಿತ) ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇದು ಮಾರ್ಚ್ 4 ರಿಂದ ರಿಯಲ್‌ಮಿ ಹೋಮ್ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








