Home
ಸುದ್ದಿಜಾಲ

ರಿಯಲ್‌ಮಿ V30 ಬಿಡುಗಡೆ; ಇದರ ಬೆಲೆ ಕೇಳಿದ್ರೆ, ಅಚ್ಚರಿ ಆಗ್ತೀರಾ!

ಭಿನ್ನ ಪ್ರೈಸ್‌ ಟ್ಯಾಗ್‌ನಲ್ಲಿ ಫೋನ್‌ ಪರಿಚಯಿಸಿ ಗಮನ ಸೆಳೆದಿರುವ ರಿಯಲ್‌ಮಿ ಸಂಸ್ಥೆಯು ಇದೀಗ ಮತ್ತೆ ಎರಡು ನೂತನ ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿದೆ. ರಿಯಲ್‌ಮಿ ಸಂಸ್ಥೆಯು ಈಗ ಹೊಸದಾಗಿ ರಿಯಲ್‌ಮಿ V30 (Realme V30) ಮತ್ತು ರಿಯಲ್‌ಮಿ V30T (Realme V30T) ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಡೈಮೆನಸಿಟಿ 700 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿವೆ.

ರಿಯಲ್‌ಮಿ V30 ಬಿಡುಗಡೆ; ಇದರ ಬೆಲೆ ಕೇಳಿದ್ರೆ, ಅಚ್ಚರಿ ಆಗ್ತೀರಾ!

ಹೌದು, ರಿಯಲ್‌ ಮಿ ಕಂಪನಿಯು ಚೀನಾ ಮಾರುಕಟ್ಟೆಯಲ್ಲಿ ತನ್ನ ಹೊಸ ರಿಯಲ್‌ಮಿ V30 ಮತ್ತು ರಿಯಲ್‌ಮಿ V30T ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಈ ಎರಡು ಫೋನ್‌ಗಳು ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿವೆ. ಹಾಗೆಯೇ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿವೆ.

ರಿಯಲ್‌ಮಿ V30 : ಡಿಸ್‌ಪ್ಲೇ ವಿನ್ಯಾಸ

ರಿಯಲ್‌ಮಿ V30 ಸ್ಮಾರ್ಟ್‌ಫೋನ್‌ ಉತ್ತಮ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ IPS LCD ಡಿಸ್‌ಪ್ಲೇ ಹೊಂದಿದ್ದು, ಹೆಚ್‌ಡಿ+ ರೆಸಲ್ಯೂಶನ್ ಪಡೆದಿದೆ. ಹಾಗೆಯೇ ಇದು 600 nits ಬ್ರೈಟ್ನೆಸ್‌ ಪಡೆದಿದೆ.

ರಿಯಲ್‌ಮಿ V30 ಬಿಡುಗಡೆ; ಇದರ ಬೆಲೆ ಕೇಳಿದ್ರೆ, ಅಚ್ಚರಿ ಆಗ್ತೀರಾ!

ರಿಯಲ್‌ಮಿ V30 : ಪ್ರೊಸೆಸರ್‌ ಬಲ

ರಿಯಲ್‌ಮಿ V30 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನಸಿಟಿ 700 SoC ಪ್ರೊಸೆಸರ್‌ ಪವರ್‌ ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 8GB of RAM ಮತ್ತು 128GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ರಿಯಲ್‌ಮಿ V30 : ಡ್ಯುಯಲ್ ರಿಯರ್ ಕ್ಯಾಮೆರಾ

ರಿಯಲ್‌ಮಿ V30 ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ರಿಯಲ್‌ಮಿ V30 : ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ V30 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. 10W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಹಾಗೆಯೇ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕ ಸೇರಿವೆ.

ರಿಯಲ್‌ಮಿ V30 ಬಿಡುಗಡೆ; ಇದರ ಬೆಲೆ ಕೇಳಿದ್ರೆ, ಅಚ್ಚರಿ ಆಗ್ತೀರಾ!

ರಿಯಲ್‌ಮಿ V30T ಫೀಚರ್ಸ್‌:

ಈ ಫೋನ್‌ ಬಹುತೇಕ ರಿಯಲ್‌ಮಿ V30 ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳನ್ನು ಒಳಗೊಂಡಿದೆ. 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, ಮೀಡಿಯಾ ಟೆಕ್ ಡೈಮೆನಸಿಟಿ 700 SoC ಪ್ರೊಸೆಸರ್‌ ಪವರ್‌ ಪಡೆದಿದೆ. ಡ್ಯುಯಲ್‌ ಕ್ಯಾಮೆರಾ ಇದ್ದು, ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸಲ್‌ ಸೆನ್ಸಾರ್ ಪಡೆದಿದೆ. ಹಾಗೆಯೇ 5,000mAh ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. 10W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ V30 ಮತ್ತು ರಿಯಲ್‌ಮಿ V30T: ಬೆಲೆ

ರಿಯಲ್‌ಮಿ V30 ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ ಬೆಲೆ ಚೀನಾದಲ್ಲಿ CNY 1,099 (ಭಾರತದಲ್ಲಿ ಅಂದಾಜು 13,400ರೂ. ಎನ್ನಲಾಗಿದೆ). ಅದೇ ರೀತಿ ರಿಯಲ್‌ಮಿ V30T ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ ಬೆಲೆ ಚೀನಾದಲ್ಲಿ CNY 1,299 (ಭಾರತದಲ್ಲಿ ಅಂದಾಜು 15,900ರೂ) ಇನ್ನು ಈ ಎರಡು ಸ್ಮಾರ್ಟ್‌ಫೋನ್‌ ಡಾರ್ಕ್‌ ನೈಟ್‌ ಮತ್ತು ಗೋಲ್ಡ್‌ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

Best Mobiles in India

English summary
Realme V30 and Realme V30T these Both phones feature 13MP dual-camera setup and a 5MP selfie camera. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+