Home
ಸುದ್ದಿಜಾಲ

ಶೀಘ್ರದಲ್ಲೇ ಬಿಡುಗಡೆ ಆಗಲಿದೆ ರಿಯಲ್‌ಮಿ V5 ಸ್ಮಾರ್ಟ್‌ಫೋನ್‌!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಕೆಲವೇ ವರ್ಷಗಳಲ್ಲಿ ಏರುಗತಿಯ ಜನಪ್ರಿಯತೆಯನ್ನ ಹೊಂದಿರುವ ರಿಯಲ್‌ಮಿ ತನ್ನ ವಿಶೇಷ ಫೀಚರ್ಸ್‌ಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರಾಂಡ್‌ ಎನಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ರಿಯಲ್‌ಮಿ ಇದೀಗ ತನ್ನ ಹೊಸ ರಿಯಲ್‌ಮಿ v5 ಸ್ಮಾರ್ಟ್‌ಫೋನ್‌ ಅನ್ನಯು ಇದೇ ಆಗಸ್ಟ್ 3 ರಂದು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಕಂಪೆನಿ ತನ್ನ V ಸರಣಿಯಲ್ಲಿ ರಿಯಲ್‌ಮಿ V5 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ವೇದಿಕೆ ಸಿದ್ದ ಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದ್ದು, ಪಂಚ್‌ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ V5 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.5-ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಅಲ್ಲದೆ ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6GB ಮತ್ತು 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗ್ತಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ ವಿ5 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ , ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿವೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್ 4,900mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದೆ.ಇನ್ನು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಬ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಸಿಲ್ವರ್, ಬ್ಲೂ ಮತ್ತು ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಇದರ ಬೆಲೆಯ ಬಗ್ಗೆ ಯಾವುದೇ ಮಾಹಿತ ಬಹಿರಂಗವಾಗಿಲ್ಲ.

Best Mobiles in India

English summary
Realme V5 has been teased on Weibo along with a quad rear camera setup.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+