'ರಿಯಲ್ ಮಿ ಎಕ್ಸ್ 2 ಪ್ರೊ' ಫೋನ್ ಬಿಡುಗಡೆಗೆ ದಿನಾಂಕ ಫಿಕ್ಸ್!
ಚೀನಾ ಮೂಲದ 'ರಿಯಲ್ ಮಿ' ಸ್ಮಾರ್ಟ್‌ಫೋನ್ ಕಂಪನಿಯು ಇತ್ತೀಚಿಗೆ 'ರಿಯಲ್ ಮಿ 5' ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಮಾಡಿ ಸದ್ದು ಮಾಡಿದೆ. ಇದೀಗ ಕಂಪನಿಯ ಬಹುನಿರೀಕ್ಷಿತ 'ರಿಯಲ್ ಮಿ ಎಕ್ಸ್2 ಪ್ರೊ' ಸ್ಮಾರ್ಟ್‌ಫೋನ್ ಬಿಡುಗಡೆಗೆ ಮೂಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಸ್ಮಾರ್ಟ್‌ಫೋನ್ ಪ್ರಿಯರ್ ಗಮನ ಸೆಳೆದಿರುವ ಈ ಸ್ಮಾರ್ಟ್‌ಫೋನ್ ಇದೇ ನವಂಬರ್ 20ರಂದು ಲಾಂಚ್ ಆಗುವುದು ಪಕ್ಕಾ ಆಗಿದೆ.

ಹೌದು, 'ರಿಯಲ್ ಮಿ ಸಂಸ್ಥೆಯು 'ರಿಯಲ್ ಮಿ ಎಕ್ಸ್ 2 ಪ್ರೊ' ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಇದೇ ನವಂಬರ್ 20ರಂದು ಲಾಂಚ್ ಮಾಡುವುದಾಗಿ ಅಧಿಕೃತವಾಗಿ ಮಾಹಿತಿ ಹೊರಹಾಕಿದೆ. ಈ ಸ್ಮಾರ್ಟ್‌ಫೋನ್ 6GB RAM, 8GB RAM ಮತ್ತು 12GB RAM ಸಾಮರ್ಥ್ಯ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿರಲಿದ್ದು, ಜೊತೆಗೆ ಕ್ವಾಡ್ ಕ್ಯಾಮೆರಾ ಸೌಲಭ್ಯವನ್ನು ಪಡೆದಿರಲಿದೆ. ಹಾಗಾದರೇ ರಿಯಲ್ ಮಿ ಎಕ್ಸ್2 ಪ್ರೊ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ ಹೊಂದಿದೆ ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ
ರಿಯಲ್ ಮಿ ಎಕ್ಸ್2 ಪ್ರೊ ಸ್ಮಾರ್ಟ್‌ಫೋನ್ 2400X1080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದ್ದು, ಫ್ಲ್ಯೂಡ್ AMOLED ಮಾದರಿಯ ಡಿಸ್‌ಪ್ಲೇ ಇದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.91.7 ಪರ್ಸೆಂಟ್ ಆಗಿದೆ. ಜೊತೆಗೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ
ರಿಯಲ್ ಮಿ ಎಕ್ಸ್2 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ಲಸ್ ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 9 ಪೈ ಓಎಸ್ ಜೊತೆಗೆ ಕಲರ್ ಓಎಸ್ 6.1ನ ಸಪೋರ್ಟ್ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM+64GB, 8GB RAM+128GB ಮತ್ತು 12GB RAM+256GB ಸಾಮರ್ಥ್ಯದ ಮೂರು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷತೆ
ರಿಯಲ್ ಮಿ ಎಕ್ಸ್2 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನ ಟೆಲಿಫೋಟೊ ಲೆನ್ಸ್‌ನಲ್ಲಿದ್ದು, ತೃತೀಯ ಕ್ಯಾಮೆರಾವು ಅಲ್ಟ್ರಾವೈಡ್ ಲೆನ್ಸ್‌ನೊಂದಿಗೆ 8ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಕೊನೆಯ ಕ್ಯಾಮೆರಾವು 2ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೂ ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಬ್ಯಾಟರಿ ಪವರ್
ರಿಯಲ್ ಮಿ ಎಕ್ಸ್2 ಪ್ರೊ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಹೊಂದಿದ್ದು, 50W ಸಾಮರ್ಥ್ಯದ ಸೂಪರ್ VOOC ಫಾಸ್ಟ್ ಚಾರ್ಜರ್ ಸೌಲಭ್ಯವನ್ನು ಪಡೆದಿರಲಿದೆ. ಇದರೊಂದಿಗೆ ಬ್ಲೂಟೂತ್, ವೈಫೈ, ಯುಎಸ್‌ಬಿ, ಜಿಪಿಎಸ್, ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್ ಮಿ ಎಕ್ಸ್2 ಪ್ರೊ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಇದೇ ನವಂಬರ್ 20ರಂದು ಬಿಡುಗಡೆ ಆಗುವುದು ಅಧಿಕೃತವಾಗಿ ಕನ್‌ಫರ್ಮ್ ಆಗಿದೆ. ಈ ಸ್ಮಾರ್ಟ್‌ಫೋನ್ ಬೆಲೆಯು 30,000ರೂ ಒಳಗೆ ಇರಲಿದೆ ಎಂದು ಊಹಿಸಲಾಗಿದೆ.


Click it and Unblock the Notifications








