ರಿಯಲ್‌ಮಿ x3 ಸೂಪರ್‌ ಜೂಮ್‌ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ರಿಯಲ್‌ಮಿ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಬಹು ನಿರೀಕ್ಷಿತ ರಿಯಲ್‌ಮಿ X3 ಸೂಪರ್‌ಜೂಮ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ರಿಯಲ್‌ಮಿ ತನ್ನ ರಿಯಲ್‌ಮಿ x3 ಸೂಪರ್‌ಜೂಮ್ ಅನ್ನು ಬಿಡುಗಡೆ ಮಾಡಲು ವೇದಿಕೆ ಸಿದ್ದ ಪಡಿಸಿಕೊಳ್ತಿದೆ. ಸದ್ಯ ರಿಯಲ್‌ಮಿ ಕಂಪೆನಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿರುವ ಎಂಟು ಹೊಸ ಪ್ರಾಡಕ್ಟ್‌ಗಳಲ್ಲಿ ರಿಯಲ್‌ಮಿ x3 ಸೂಪರ್‌ ಜೂಮ್‌ ಕೂಡ ಒಂದಾಗಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯ ಆನ್‌ಲೈನ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗವಾಗಿದ್ದು, ಆನ್‌ಲೈನ್‌ ಲೀಕ್‌ ಮಾಹಿತಿ ಪ್ರಕಾರ ಇದು ಯಾವೆಲ್ಲಾ ವಿಶೇಷತೆ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ x3 ಸೂಪರ್ ಜೂಮ್ ಸ್ಮಾರ್ಟ್‌ಫೋನ್‌ 120 Hz ರಿಫ್ರೆಶ್ ರೇಟ್‌ ಅನ್ನು ಹೊಂದಿರುವ 6.6 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಪಂಚ್‌ ಹೋಲ್‌ ವಿನ್ಯಾಸವನ್ನ ಹೊಂದಿದ್ದು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನ ಹೊಂದಿದೆ ಎನ್ನಲಾಗಿದೆ. ಅಲ್ಲದೆ ಈ ಡಿಸ್‌ಪ್ಲೇ ಫುಲ್‌ ಎಚ್‌ಡಿ + ಎಲ್ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 855+ SoC ಪ್ರೊಸೆಸರ್‌ ಹೊಂದಿರಲಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿರಲಿದೆ ಎನ್ನಲಾಗ್ತಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯ ವಿಸ್ತರಿಸುವ ಅವಕಾಶ ಇದೆಯಾ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ರಿಯಲ್‌ಮಿ X3 ಸೂಪರ್‌ ಜೂಮ್‌ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿರುವ ಸಾದ್ಯತೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮತ್ತು 119- ಡಿಗ್ರಿ ಫೀಲ್ಡ್ ಆಫ್ ವ್ಯೂ, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ 5x ಆಪ್ಟಿಕಲ್ ಜೂಮ್ ಮತ್ತು 60 ಎಕ್ಸ್ ಡಿಜಿಟಲ್ ಜೂಮ್ ಹೊಂದಿದೆ. ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 30W ಡಾರ್ಟ್ ಫ್ಲ್ಯಾಶ್ ಚಾರ್ಜ್‌ ಅನ್ನು ಬೆಂಬಲಿಸಲಿದೆ ಎನ್ನಲಾಗ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಸೈಡ್‌ ಮೌಂಟೆಡ್‌ ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆರ್ಕ್ಟಿಕ್ ವೈಟ್ ಮತ್ತು ಗ್ಲೇಸಿಯರ್ ಬ್ಲೂ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಬ್ಯವಾಗುವ ಸಾದ್ಯತೆ ಇದೆ.

Best Mobiles in India

English summary
Realme X3 SuperZoom specifications leak suggests the phone will be backed by a 4,200mAh battery with 30W Dart Flash Charge support.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X