Home
ಸುದ್ದಿಜಾಲ

ಶೀಘ್ರದಲ್ಲೇ ರಿಯಲ್‌ಮಿ x3 ಸ್ಮಾರ್ಟ್‌ಫೋನ್‌ ಬಿಡುಗಡೆ!

ಟೆಕ್‌ ಮಾರುಕಟ್ಟೆಯಲ್ಲಿ ಸಾಕಷ್ಟು ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ಆಗುತ್ತಲೇ ಇರುತ್ತವೆ. ಆದರು ಸ್ಮಾರ್ಟ್‌ಫೋನ್‌ ಪ್ರಿಯರು ತಮ್ಮ ನೆಚ್ಚಿನ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ. ಇದರಲ್ಲಿ ರಿಯಲ್‌ಮಿ ಕಂಪೆನಿ ಕೂಡ ಒಂದಾಗಿದ್ದು, ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸದ್ಯ ರಿಯಲ್‌ಮಿ ಕಂಪೆನಿ ಹೊಸ ಕ್ಯಾಮೆರಾ ವಿನ್ಯಾಸ ಹೊಂದಿರುವ 60x ಜೂಮ್‌ ಸಾಮರ್ಥ್ಯದ ರಿಯಲ್‌ಮಿ x3 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ರಿಯಲ್‌ಮಿ ಕಂಪೆನಿ ಕಡಿಮೆ ಅವಧಿಯಲ್ಲಿಯೇ ಏರುಗತಿಯಲ್ಲಿ ಸಾಗಿದ ಕಂಪೆನಿ ಎನಿಸಿಕೊಂಡಿದೆ. ಸದ್ಯ ಇದೀಗ ರಿಯಲ್‌ಮಿ ತನ್ನ 60x ಜೂಮ್‌ ಸಾಮರ್ಥ್ಯ ಹೊಂದಿರುವ ರಿಯಲ್‌ಮಿ x3 ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇದಕ್ಕೆ ಸೂಚನೆ ಎಂಬಂತೆ ರಿಯಲ್‌ಮಿ ಸಿಎಒ ಮಾಧವ್‌ ಶೇಠ್‌ ತಮ್ಮ ಟ್ವಿಟರ್‌ನಲ್ಲಿ ರಿಯಲ್‌ಮಿ x3 ಸ್ಮಾರ್ಟ್‌ಫೋನ್‌ ಇಮೇಜ್‌ ಅನ್ನು ಟ್ವಿಟ್‌ ಮಾಡಿದ್ದಾರೆ. ಇದಲ್ಲದೆ ಈಗಾಗಲೇ ರಿಯಲ್‌ಮಿ x3 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ

ಇನ್ನು ರಿಯಲ್‌ಮಿ x3 ಸ್ಮಾರ್ಟ್‌ಫೋನ್‌ 60x ಜೂಮ್ ಮತ್ತು ಸ್ಟಾರ್ರಿ ಮೋಡ್ ಅನ್ನು ಒಳಗೊಂಡಿದೆ. ಅಲ್ಲದೆ ಉತ್ತಮ ಕ್ಯಾಮೆರಾ ಫೀಚರ್ಸ್‌ ಅನ್ನು ಹೊಂದಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರ ಉತ್ತಮ ಆಯ್ಕೆಯಾಗುವ ಸಾಧ್ಯತೆ ಇದೆ. ಇದರಲ್ಲಿ ಕ್ಯಾಮೆರಾ ಫೀಚರ್ಸ್‌ಗಳು ಉತ್ತಮವಾಗಿರಲಿದ್ದು, ಫೋಟೋಗ್ರಫಿಯಲ್ಲಿ ಉತ್ತಮ ಅನುಭವ ನೀಡಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 6.57-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, ಫುಲ್‌ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಇದಾಗಿದೆ ಎಂದು ಹೇಳಲಾಗುತ್ತದೆ.

ಸ್ಮಾರ್ಟ್‌ಫೋನ್‌

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಪ್‌ಡ್ರಾಗನ್ 855+ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 12GB RAM ಅನ್ನು ಒಳಗೊಂಡಿರಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾಗಳನ್ನ ಹೊಂದಿದೆ ಎನ್ನಲಾಗಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟಪ್ ಅನ್ನು ಸಹ ಇದು ಒಳಗೊಂಡಿದೆ.

ಸೂಪರ್‌ಜೂಮ್

ಇನ್ನು ಈ ಸೂಪರ್‌ಜೂಮ್ ಕ್ಯಾಮೆರಾ ಒಳಗೊಂಡಿರುವ ರಿಯಲ್‌ಮಿ x3 ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು 30 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದ್ದು, ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ.

Best Mobiles in India

English summary
Realme X3 will also include a “Starry Mode” to take photos of the cosmos.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+