ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ X3, X3 ಸೂಪರ್ ಜೂಮ್ ಸ್ಮಾರ್ಟ್‌ಫೋನ್ ಲಾಂಚ್!
ಟೆಕ್ ವಲಯದಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್ ಆಗಿ ಗುರುತಿಸಿಕೊಂಡಿರುವ ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರ ಪಡಿಸಿಕೊಂಡಿರುವ ರಿಯಲ್‌ಮಿ ಕಂಪೆನಿ ತನ್ನ ಹೊಸ ತನದ ಫೀಚರ್ಸ್‌ಗಳಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಮಾರಿಯ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ಹೌದು, ಸ್ಮಾರ್ಟ್‌ಫೋನ್ ವಲಯದಲ್ಲಿ ಭಾರಿ ಜನಪ್ರಿಯತೆಯನ್ನ ಪಡೆದುಕೊಳ್ಳುತ್ತಿರುವ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ X3 ಸರಣಿಯ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಸರಣಿಯು ಕಳೆದ ವರ್ಷ ಬಿಡುಗಡೆ ಆಗಿದ್ದ ಜನಪ್ರಿಯ ರಿಯಲ್‌ಮಿ X2 ಸರಣಿಯ ಮುಂದುವರೆದ ಸರಣಿ ಆಗಿದೆ. ಇನ್ನು ಈ ಸರಣಿಯಲ್ಲಿ ರಿಯಲ್‌ಮಿ X3, ಮತ್ತು ಹೈ-ಎಂಡ್ X3 ಸೂಪರ್ ಜೂಮ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ವಿನ್ಯಾಸ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ X3 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ
ರಿಯಲ್‌ಮಿ X3 ಸ್ಮಾರ್ಟ್‌ಫೋನ್ ಎಫ್‌ಹೆಚ್‌ಡಿ + ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ 6.6-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ.ಇನ್ನು ಈ ಡಿಸ್‌ಪ್ಲೇಯು 60Hz ಮತ್ತು 120Hz ಎರಡರಲ್ಲೂ ರಿಫ್ರೆಶ್ ರೇಟ್ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಇದು ಡೈನಾಮಿಕ್ ಸ್ವಿಚಿಂಗ್ ಮೋಡ್ ಅನ್ನು ಸಹ ಹೊಂದಿದ್ದು, ಅದು ಡಿಸ್‌ಪ್ಲೇ ವಿಷಯಕ್ಕೆ ಅನುಗುಣವಾಗಿ ಸ್ವಯಂಚಾಲಿತವಾಗಿ 120Hz ಮತ್ತು 60Hz ನಡುವೆ ಬದಲಾಯಿಸುವ ಅವಕಾಶವನ್ನ ನೀಡಿದೆ.

ರಿಯಲ್‌ಮಿ X3 ಸ್ಮಾರ್ಟ್‌ಫೋನ್ ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 855+ SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 6GB RAM + 128GB ಹಾಗೂ 8GB RAM + 128GB ಆಂತರಿಕ ಸಂಗ್ರಹ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಕ್ಯಾಮೆರಾ ವಿನ್ಯಾಸ
ರಿಯಲ್‌ಮಿ X3 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ GW1 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಸಾಮರ್ಥ್ಯದ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಪೋರ್ಟ್ ಸಿ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ X3 ಸೂಪರ್‌ಜೂಮ್ ಸ್ಮಾರ್ಟ್‌ಫೋನ್
ರಿಯಲ್‌ಮಿ X3 ಸೂಪರ್‌ಜೂಮ್ ಸ್ಮಾರ್ಟ್‌ಫೋನ್ ಎಫ್‌ಎಚ್‌ಡಿ + ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ ಕೂಡ ಡೈನಾಮಿಕ್ ಸ್ವಿಚಿಂಗ್ ಮೋಡ್ ಅನ್ನು ಸಹ ಹೊಂದಿದೆ, ಇದು 120Hz ಮತ್ತು 60Hz ನಡುವೆ ಬದಲಾಯಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 855+ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಆಂರಿಕ ಸಂಗ್ರಹ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕಯನ್ನ ಹೊಂದಿದೆ.

ರಿಯಲ್‌ಮಿ X3 ಸೂಪರ್‌ಜೂಮ್ ಕ್ಯಾಮೆರಾ
ಕ್ಯಾಮೆರಾದ ವಿಷಯದಲ್ಲಿ, ಸೂಪರ್‌ಜೂಮ್ ಸ್ಟ್ಯಾಂಡರ್ಡ್ X3 ಗಿಂತ ಭಿನ್ನವಾಗಿದೆ. ಈ ಸ್ಮಾರ್ಟ್‌ಫೋನ್ ನ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಜಿಡಬ್ಲ್ಯೂ 1 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಲೆನ್ಸ್ ಇದ್ದು, ಬಳಕೆದಾರರು 60x ನಲ್ಲಿ ಚಿತ್ರಗಳನ್ನು ಜೂಮ್ ಮಾಡಲು ಅನುವು ಮಾಡಿಕೊಡುತ್ತದೆ. ಪೆರಿಸ್ಕೋಪ್ ಲೆನ್ಸ್ ಒಐಎಸ್ (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಅನ್ನು ಸಹ ಹೊಂದಿದೆ, ಇದು ಶೇಕ್ ಅನ್ನು ಕಡಿಮೆ ಮಾಡುವ ಮೂಲಕ ದೂರದ-ಹೊಡೆತಗಳಿಗೆ ಸಹಾಯ ಮಾಡುತ್ತದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಜೊತೆಗೆ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಸಾಮರ್ಥ್ಯದ ಡ್ಯುಯೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಅನ್ನು ಬೆಂಬಲಿಸಲಿದೆ. ಜೊತೆಗೆ ಯುಎಸ್‌ಬಿ ಸಿ ಪೋರ್ಟ್ ಅನ್ನು ಸಹ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ X3 ಸ್ಮಾರ್ಟ್‌ಫೋನ್ 6GB RAM + 128GB ರೂಪಾಂತರಕ್ಕೆ 24,999 ರೂ ಮತ್ತು 8GB RAM+128GB ರೂಪಾಂತರಕ್ಕೆ 25,999 ರೂಗಳಿಗೆ ಲಭ್ಯವಿದೆ. ಇದು ಜೂನ್ 30, ಮಧ್ಯಾಹ್ನ 12 ರಿಂದ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮೆ.ಕಾಂನಲ್ಲಿ ಲಭ್ಯವಿರುತ್ತದೆ. ಇನ್ನು ರಿಯಲ್‌ಮಿ X3 ಸೂಪರ್‌ಜೂಮ್ 8GB RAM+128GB ರೂಪಾಂತರಕ್ಕೆ 27,999 ರೂಗಳಿಗೆ ಮತ್ತು 12GB RAM + 256GB ರೂಪಾಂತರಕ್ಕೆ 32,990 ರೂಗಳಲ್ಲಿ ಲಭ್ಯವಿದೆ.


Click it and Unblock the Notifications




