Home
ಸುದ್ದಿಜಾಲ

ಮಾರ್ಚ್ 12ರಂದು ಚೀನಾ ಮಾರುಕಟ್ಟೆ ಪ್ರವೇಶಿಸಲಿದೆ ರಿಯಲ್‌ಮಿ x50 ಪ್ರೊ 5G ಫೋನ್!

ಟೆಕ್‌ ಮಾರುಕಟ್ಟೆಯಲ್ಲಿ ಪ್ರತಿನಿತ್ಯವೂ ಹೊಸ ಸ್ಮಾರ್ಟ್‌ಫೋನ್‌ಗಳ ಬಿಡುಗಡೆಯ ಭರಾಟೆ ಜೋರಾಗಿಯೇ ಇರುತ್ತೆ. ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಜಾಗತಿಕವಾಗಿ ವಿಶಾಲವಾಗಿದ್ದು, ಹೊಸಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗುತ್ತವೇ. ಆದೇ ರೀತಿ ರಿಯಲ್‌ಮಿ ಕಂಪೆನಿ ಇದೀಗ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರತಿನಿತ್ಯವೂ ಸಂಚಲನ ಸೃಷ್ಟಿಸುತ್ತಿದೆ. ಮಾರ್ಚ್‌ 5 ರಂದು ರಿಯಲ್‌ಮಿ 6 ಸರಣಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿದ್ದ ಕಂಪೆನಿ ಇದೀಗ ಚೀನಾದಲ್ಲಿ X50 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು

ಹೌದು, ರಿಯಲ್‌ಮಿ ಕಂಪೆನಿ ಕೆಲದಿನಗಳ ಹಿಂದೆಯಷ್ಟೇ ಭಾರತದಲ್ಲಿ ಬಿಡುಗಡೆ ಮಾಡಿದ್ದ ರಿಯಲ್‌ಮಿ X50 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ತನ್ನ ತಾಯ್ನಾಡು ಚೀನಾದಲ್ಲಿ ಬಿಡುಗಡೆ ಮಾಡೋದಕ್ಕೆ ವೇದಿಕೆ ಸಿದ್ದತೆ ಮಾಡಿಕೊಂಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್‌ 12 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗ್ತಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ರಿಯಲ್‌ಮಿ ಬಿಡುಗಡೆ ಮಾಡುತ್ತಿರುವ 5G ನೆಟ್‌ವರ್ಕ್‌ ಬೆಂಬಲಿಸುವ ಎರಡನೇ ಸ್ಮಾರ್ಟ್‌ಫೊನ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ರಿಯಲ್‌ಮಿ X50 ಪ್ರೊ ಸ್ಮಾರ್ಟ್‌ಫೋನ್‌ 1080x2400 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.44 ಇಂಚಿನ ಫುಲ್‌ಎಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಹೊಂದಿರುವ ಸೂಪರ್‌ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು HDR10 ಕಂಪ್ಲೇಟ್‌ ಸ್ಕ್ರೀನ್‌ ಅನ್ನು ಹೊಂದಿದ್ದು, ಡಿಸ್‌ಪ್ಲೇನಲ್ಲಿಯೇ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್‌ಗೆ ಉತ್ತಮ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 865 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 6GB RAM ಮತ್ತು 128GB, 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯ ಹಾಗೂ 12GB RAM ಮತ್ತು 256GB ಆಂತರಿಕ ಶೇಖರಣಾ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ನೀಡಿಲ್ಲ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಇದು ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ f/1.8 ಲೆನ್ಸ್‌ ಹಾಗೂ 30fps 4k ವಿಡಿಯೋ ರೆಕಾರ್ಡ್‌ ಮಾಡುವ ಸಾಮರ್ಥ್ಯ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್‌ ಹಾಗೂ 20x ಹೈಬ್ರೀಡ್‌ ಜೂಮ್‌ ಸಪೋರ್ಟ್‌ ಲೆನ್ಸ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ 119 ಡಿಗ್ರಿ ಫಿಲ್ಡ್‌ ಆಪ್‌ ವ್ಯೂ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಪೊಟ್ರೈಟ್‌ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 65W ಸೂಪರ್‌ ಡಾರ್ಟ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್‌, ಬ್ಲೂಟೂತ್‌ 5.0, ಡ್ಯುಯೆಲ್‌ ಫ್ರಿಕ್ವೇನ್ಸಿ, NFC ಮತ್ತು ಯುಎಸ್‌ಬಿ-ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೊ ಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಇದೇ ಮಾರ್ಚ್ 12 ರಂದು ಬಿಡುಗಡೆಯಾಗಲಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಯಾವ ಬೆಲೆಗೆ ಲಭ್ಯವಾಗಲಿದೆ ಅನ್ನೊದು ಇನ್ನು ತಿಳಿದು ಬಂದಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಮಾಸ್ ಗ್ರೀನ್ ಮತ್ತು ರಸ್ಟ್ ರೆಡ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Realme X50 Pro 5G recently got launched as the company’s first global 5G smartphone and now the phone is all set to be available in the company’s home market China.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+